ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆಹಾರ ನಿರೀಕ್ಷಕನನ್ನು 15 ಕಿ.ಮೀ ಬೆನ್ನತ್ತಿ ಬಂಧಿಸಿದ ಲೋಕಾಯುಕ್ತ ಪೊಲೀಸರು

Date:

  • ಟ್ರೇಡ್ ಲೈಸೆನ್ಸ್‌ ಚೆಕ್ ಮಾಡಲು ಮಹಾಂತೇಗೌಡ ₹1 ಲಕ್ಷ ಲಂಚಕ್ಕೆ ಬೇಡಿಕೆ
  • ಮುಂಗಡ ಹಣವನ್ನು ಪಡೆಯುವ ವೇಳೆ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದ ಆರೋಪಿ

ಟ್ರೇಡ್ ಲೈಸೆನ್ಸ್‌ ಚೆಕ್ ಮಾಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆಹಾರ ನಿರೀಕ್ಷಕ ಒಬ್ಬರನ್ನು ಲೋಕಾಯುಕ್ತ ಪೊಲೀಸರು 15 ಕಿ.ಮೀ ಬೆನ್ನತ್ತಿ ಬಂಧಿಸಿದ್ದಾರೆ.

ಬೆಂಗಳೂರಿನ ತಹಶೀಲ್ದಾರ ಕಚೇರಿಯಲ್ಲಿ ಮಹಾಂತೇಗೌಡ ಬಿ ಕಡಬಾಳು ಎಂಬುವವರು ಆಹಾರ ನಿರೀಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ರಂಗದಾಮಯ್ಯ ಎಂಬುವವರ ಟ್ರೇಡ್ ಲೈಸೆನ್ಸ್‌ ಚೆಕ್ ಮಾಡಲು ಮಹಾಂತೇಗೌಡ ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಮುಂಗಡವಾಗಿ ₹43 ಸಾವಿರ ನಗದು ಹಣವನ್ನು ಪಡೆಯುವ ವೇಳೆ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಈ ಬಗ್ಗೆ ಉದ್ದಿಮೆದಾರ ರಂಗಧಾಮಯ್ಯ ಎಂಬವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು.

ದೂರು ದಾಖಲಿಸಿಕೊಂಡಿದ್ದ ಲೋಕಾಯುಕ್ತ ಪೊಲೀಸರು, ಸಾಕ್ಷ ಸಮೇತ (ರೆಡ್‌ಹ್ಯಾಂಡ್) ಮಹಾತಂತೇಗೌಡನನ್ನು ಹಿಡಿಯಲು ಯೋಜನೆ ರೂಪಿಸಿದ್ದರು. ರಂಗಧಾಮಯ್ಯ ಅವರನ್ನು ಮುಂದೆ ಕಳುಹಿಸಿ, ಲೋಕಾಯುಕ್ತ ಪೊಲೀಸರು ಹಿಂದಿನಿಂದ ತೆರಳಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಲೋಕಾಯುಕ್ತ ದಾಳಿ ಮಾಡುತ್ತಿದ್ದಂತೆ ಆಹಾರ ನಿರೀಕ್ಷಕ ಮಹಾಂತೇಗೌಡ ಬಿ ಕಡಬಾಳು ತಪ್ಪಿಸಿಕೊಂಡು ತನ್ನ ಕಾರಿನಲ್ಲಿ ಪರಾರಿಯಾಗಲು ಪ್ರಯತ್ನಿಸಿದ್ದಾರೆ. ಆರೋಪಿಯನ್ನು ಬೆನ್ನತ್ತಿದ್ದ ಪೊಲೀಸರು ಬರೋಬ್ಬರಿ 15 ಕಿ.ಮೀ ವಾಹನದಲ್ಲಿ ಚೇಸ್‌ ಮಾಡಿ ನೆಲಮಂಗಲದ ಸೊಂಡೆಕೊಪ್ಪ ರಸ್ತೆ ಬಳಿ ಅಡ್ಡಹಾಕಿದ್ದರು. ಆದರೂ ಆರೋಪಿ ತಪ್ಪಿಸಿಕೊಳ್ಳಲು ಅಧಿಕಾರಿಗಳ ಮೇಲೆ ವಾಹನ ಚಲಾಯಿಸಲು ಪ್ರಯತ್ನಿಸಿದ್ದರು. ಪೊಲೀಸರು ಮತ್ತೊಂದು ಕಾರನ್ನು ಬಳಸಿ ಆರೋಪಿಯನ್ನು ವಶಕ್ಕೆ ಪಡೆದ ಘಟನೆ ನಡೆದಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮೆಟ್ರೋ ಪ್ರಯಾಣಿಕರಿಗಾಗಿ ಶೀಘ್ರದಲ್ಲಿಯೇ ‘ಮೆಟ್ರೋ ಮಿತ್ರಾ’ ಆಟೋ ಸೇವೆ ಆರಂಭ

ಅಲ್ಲದೇ ಆರೋಪಿಯು ಲೋಕಾಯುಕ್ತ ದಾಳಿಯಾಗುತ್ತಿದ್ದಂತೆ ತಪ್ಪಿಸಿಕೊಂಡಿದ್ದಾರೆ. ಪೊಲೀಸರು ತಮ್ಮ ಕರ್ತವ್ಯ ನಿರ್ವಹಿಸದಂತೆ ತಡೆದಿದ್ದಾರೆ. ಜತೆಗೆ ಹಲ್ಲೆ ಮಾಡಲಾಗಿದೆ ಎಂದು ಅಧಿಕಾರಿಯ ವಿರುದ್ಧ ನೆಲಮಂಗಲ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

“ಮಹಾಂತೇಗೌಡ ಅವರನ್ನು ಲಂಚ ಪಡೆಯುತ್ತಿದ್ದ ಹಣದ ಸಮೇತ ಬಂಧಿಸಲಾಗಿದೆ. ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಮತ್ತು ಸರ್ಕಾರಿ ನೌಕರರ ಕೆಲಸಕ್ಕೆ ಅಡ್ಡಿ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ” ಎಂದು ಲೋಕಾಯುಕ್ತದ ಬೆಂಗಳೂರು ನಗರ ಎಸ್ ಪಿ ಕೆ.ವಿ. ಅಶೋಕ್ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...