ಕರ್ನಾಟಕದ ವಿವಿಧೆಡೆ ಐಎಎಸ್‌ ಅಧಿಕಾರಿ ಸೇರಿ ಹಲವು ಕಡೆ ಲೋಕಾಯುಕ್ತ ದಾಳಿ

Date:

ಕರ್ನಾಟಕದ ಹಲವೆಡೆ ಬುಧವಾರದಂದು ಬೆಳ್ಳಂ ಬೆಳಗ್ಗೆ ಲೋಕಾಯುಕ್ತ ದಾಳಿ ಮಾಡಿದೆ. ಆದಾಯಕ್ಕೂ ಮೀರಿ ಗಳಿಕೆ ಆರೋಪದಡಿ ಬೆಂಗಳೂರು, ಮೈಸೂರು, ಕೊಪ್ಪಳ ಮತ್ತು ಬಳ್ಳಾರಿಯ ಸರ್ಕಾರಿ ಅಧಿಕಾರಿಗಳಿಗಳ ಮನೆಗಳ ಮೇಲೆ ದಾಳಿ ಮಾಡಲಾಗಿದೆ. ಸರ್ಕಾರಿ ಅಧಿಕಾರಿಗಳ ಮನೆಗಳ ಮೇಲೆ ದಾಳಿ ಮಾಡಿರುವ ಲೋಕಾಯುಕ್ತ ಅಧಿಕಾರಿಗಳು ಸದ್ಯ ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.

ಬೆಂಗಳೂರಿನಲ್ಲಿ ಐಎಎಸ್​ ಸೇರಿ ಮೂವರು ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಆರ್​ ಟಿ ನಗರದಲ್ಲಿರುವ ಹಿರಿಯ ಐಎಎಸ್ ಅಧಿಕಾರಿ ವಾಸಂತಿ ಅಮರ್​ ಮನೆ ಮೇಲೆ ದಾಳಿ ಮಾಡಲಾಗಿದೆ. ಸರ್ಕಾರಿ ಜಮೀನು ಅಕ್ರಮವಾಗಿ ಬೇರೆಯವರ ಹೆಸರಿಗೆ ವರ್ಗಾವಣೆ ಆರೋಪ ಕೇಳಿಬಂದಿದೆ. ವಾಸಂತಿ ಅಮರ್ ಬೆಂಗಳೂರು ನಗರ ವಿಶೇಷ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಸದ್ಯ ಇವರ ಮನೆಯಲ್ಲಿ ಪರಿಶೀಲನೆ ನಡೆಸಿದ್ದಾರೆ.

ಮೈಸೂರಿನಲ್ಲಿ ಇಬ್ಬರು ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಮೈಸೂರಿನ ಸಿದ್ದಾರ್ಥ ಬಡಾವಣೆಯಲ್ಲಿರುವ ಪಾಲಿಕೆ ಉಪ ವಿಭಾಗಧಿಕಾರಿ ವೆಂಕಟರಾಮ್​​ ಮನೆ ಮೇಲೆ ದಾಳಿ ಪರಿಶೀಲನೆ ನಡೆಸಿದೆ. ಅದೇ ರೀತಿಯಾಗಿ ಮೈಸೂರಿನ ಸಾತಗಳ್ಳಿಯ ಜೆ ಪಿ ನಗರದಲ್ಲಿರುವ ಕೌಶಲ್ಯಾಭಿವೃದ್ಧಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ ಸ್ವಾಮಿ ಮನೆ ಮೇಲೂ ದಾಳಿ ಮಾಡಲಾಗಿದೆ. ಆದಾಯಕ್ಕೂ ಮೀರಿ ಗಳಿಕೆ ಆರೋಪ ಕೇಳಿಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಅಧಿವೇಶನ ಎಂದಾಕ್ಷಣ ಹೆದರಿ ಓಡುವ ಪ್ರಧಾನಿ ಮೋದಿ

ಬಳ್ಳಾರಿಯಲ್ಲಿ ಮೂರು ಕಡೆ ಲೋಕಾಯುಕ್ತ ಅಧಿಕಾರಿಗಳ ದಾಳಿ ಮಾಡಲಾಗಿದೆ. ಬೆಂಗಳೂರು ಪಟ್ಟಣ ಮತ್ತು ಗ್ರಾಮೀಣಾ ಯೋಜನಾ ಇಲಾಖೆ ಅಧಿಕಾರಿ ಮಾರುತಿ ಬಗಲಿಗೆ ಸೇರಿದ 3 ಸ್ಥಳಗಳ ಮೇಲೆ ದಾಳಿ ಮಾಡಿರುವ ಬೆಂಗಳೂರು ಲೋಕಾಯುಕ್ತ ತಂಡ ಪರಿಶೀಲನೆ ನಡೆಸಿದೆ. ಬೆಂಗಳೂರು ನಿವಾಸಿಯಾಗಿರುವ ಅಧಿಕಾರಿ ಮಾರುತಿ ಬಗಲಿ ವಿರುದ್ಧ ರಾಜ್ಯದ ಹಲವೆಡೆ ಆಸ್ತಿ ಮಾಡಿರುವ ಆರೋಪ ಕೇಳಿಬಂದಿದೆ.

ಕೊಪ್ಪಳ ನಗರದಲ್ಲೂ ದಾಳಿ ಮಾಡಿರುವ ಲೋಕಾಯುಕ್ತ ಅಧಿಕಾರಿಗಳು ಮನೆಯಲ್ಲಿ ಮಲಗಿದ್ದ ಜಿಲ್ಲಾ ಕೈಗಾರಿಕೆ ಮತ್ತು ವಾಣಿಜ್ಯ ವಿಭಾಗದ ಉಪ ನಿರ್ದೇಶಕ ಶೆಕು ಚವ್ಹಾಣ್​ ಮನೆ ಮೇಲೆ ದಾಳಿ ಮಾಡಲಾಗಿದೆ. ಲೋಕಾಯುಕ್ತ ಇನ್ಸ್‌ಪೆಕ್ಟರ್ ಸುನೀಲ ಮೇಗಳಮನಿ ನೇತೃತ್ವದಲ್ಲಿ ಅಭಿಷೇಕ ಬಡಾವಣೆ ಹಾಗೂ ಕೀರ್ತಿ ಕಾಲೋನಿಯಲ್ಲಿರುವ ಶೇಕು ಚವ್ಹಾಣ್​ಗೆ ಸೇರಿದ ಎರಡು ಮನೆಗಳ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಹುಬ್ಬಳ್ಳಿಯಲ್ಲೂ ಲೋಕಾಯುಕ್ತ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...