ಮಧು ಬಂಗಾರಪ್ಪರನ್ನು ಶಿಕ್ಷಣ ಸಚಿವ ಸ್ಥಾನದಿಂದ ತೆರವುಗೊಳಿಸಿ, ಬದ್ಧತೆ ಇರುವವರನ್ನು ನೇಮಿಸಿ: ದಸಂಸ ಒಕ್ಕೂಟ ಆಗ್ರಹ

Date:

ಪ್ರಾಥಮಿಕ ಮತ್ತು ಪ್ರೌಢ ಶಾಲಾ ಸಚಿವರ ಮಧು ಬಂಗಾರಪ್ಪ ಅವರನ್ನು ಹುದ್ದೆಯಿಂದ ತೆರವುಗೊಳಿಸಬೇಕು. ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯ ಕುರಿತು ಆಳವಾದ ಒಳನೋಟ, ಬದ್ಧತೆ ಇರುವ ಶಾಸಕರನ್ನು ಶಿಕ್ಷಣ ಸಚಿವರನ್ನಾಗಿ ನೇಮಿಸಬೇಕು ಎಂದು ದಸಂಸ ಸೇರಿದಂತೆ ಪ್ರಗತಿಪರ ಸಂಘಟನೆಗಳ ಒಕ್ಕೂಟ ಆಗ್ರಹಿಸಿದೆ.

ಬೆಂಗಳೂರು ನಗರದ ಗಾಂಧಿ ಭವನದಲ್ಲಿ ಶನಿವಾರ(ನ.22) ದಲಿತ ಸಂಘರ್ಷ ಸಮಿತಿ ಒಕ್ಕೂಟ, ಭಾರತ ಜ್ಞಾನ ವಿಜ್ಞಾನ ಸಮಿತಿ(ಬಿಜಿವಿಎಸ್‌), ಪಾಫ್ರೆ(ಶಿಕ್ಷಣ ಹಕ್ಕಿಗಾಗಿ ಜನಾಂದೋಲನಗಳ ಸಮನ್ವಯ) ಸೇರಿದಂತೆ ಹಲವು ಪ್ರಗತಿಪರ ಸಂಘಟನೆಗಳು ರಾಜ್ಯ ಸರ್ಕಾರದ ಜನವಿರೋಧಿ ಶಿಕ್ಷಣ ನೀತಿಗಳ ಕುರಿತು ದುಂಡು ಮೇಜಿನ ಸಭೆ ನಡೆಸಿದೆ.

ಇದನ್ನು ಓದಿದ್ದೀರಾ? ಸರ್ಕಾರಿ ಶಾಲೆಗಳ ವಿಲೀನ ನೆಪದಲ್ಲಿ ಸರ್ಕಾರ ಲಾಭ ಮಾಡಿಕೊಡುತ್ತಿರುವುದು ಯಾರಿಗೆ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಭೆಯಲ್ಲಿ ರಾಜ್ಯದಲ್ಲಿ ಮುಂದಿನ ವರ್ಷಗಳಲ್ಲಿ 700 ಕೆಪಿಎಸ್ ಶಾಲೆಗಳನ್ನು ತೆರೆಯುವುದು ಮತ್ತು ಅದಕ್ಕಾಗಿ ಸಮೀಪದ ಸರ್ಕಾರಿ ಶಾಲೆಗಳನ್ನು ವಿಲೀನದ ಹೆಸರಲ್ಲಿ ಮುಚ್ಚುವುದು, 6ನೇ ತರಗತಿಯಿಂದ ವೃತ್ತಿಪರ ಶಿಕ್ಷಣ ಪ್ರಾರಂಭಿಸುವುದು, 10 ಮತ್ತು 12ನೇ ತರಗತಿಗಳಲ್ಲಿ ನಿರ್ಗಮನ ನೀತಿ ಮತ್ತು ವಾರ್ಷಿಕ ಪರೀಕ್ಷೆಯಲ್ಲಿ ಪಾಸಾಗಲು ಕನಿಷ್ಠ ಶೇ.33 ಅಂಕಗಳ ನಿಗದಿಯ ಕುರಿತಾಗಿ ಚರ್ಚಿಸಲಾಗಿದೆ.

ಸಭೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಶಿಕ್ಷಣ ತಜ್ಷ ಶ್ರೀಪಾದ ಭಟ್, “ರಾಜ್ಯ ಸರ್ಕಾರದ ಶಿಕ್ಷಣ ನೀತಿಯಲ್ಲಿರುವ ಅಪಾಯಗಳ ಬಗ್ಗೆ ವಿದ್ಯಾರ್ಥಿಗಳಿಗಿಂತ ಮುಖ್ಯವಾಗಿ ಪೋಷಕರು ಅರಿತುಕೊಳ್ಳುವುದು ಮುಖ್ಯ. ಬಹುತೇಕ ಪೋಷಕರಿಗೆ ಶಿಕ್ಷಣ, ಉದ್ಯೋಗ ಕೊಡಬೇಕಾಗಿದ್ದು ಸರ್ಕಾರದ ಕರ್ತವ್ಯ ಎಂಬ ತಿಳುವಳಿಕೆಯೇ ಇಲ್ಲ. ಪೋಷಕರೂ ಈ ಚಳವಳಿಯಲ್ಲಿ ಜೊತೆಯಾಗುವುದು ಮುಖ್ಯ” ಎಂದು ಹೇಳಿದರು.

“ವಾರ್ಷಿಕ ಪರೀಕ್ಷೆಯಲ್ಲಿ ಪಾಸಾಗಲು ಕನಿಷ್ಠ ಶೇ.33 ಅಂಕಗಳನ್ನು ನಿಗದಿಪಡಿಸಿರುವುದು ಶಿಕ್ಷಣದ ಗುಣಮಟ್ಟ ಕುಸಿಯಲು ಕಾರಣವಾಗುತ್ತದೆ. ಆಂತರಿಕ ಮೌಲ್ಯಮಾಪನ ಪರೀಕ್ಷೆಯಲ್ಲಿ 20 ಅಂಕ ನೀಡಿದರೆ ಉಳಿದಂತೆ ಬರೀ 13 ಅಂಕ ಪಡೆದರೆ ವಿದ್ಯಾರ್ಥಿಗಳು ಉತ್ತೀರ್ಣ ಎಂದಾಗುತ್ತದೆ. ಇದು ಶಿಕ್ಷಣದ ಗುಣಮಟ್ಟದ ವಿಚಾರದಲ್ಲಿ ಅಪಾಯಕಾರಿ ಬೆಳವಣಿಗೆ. ಅಷ್ಟಕ್ಕೂ ಈ ನಿಯಮಗಳನ್ನು ಯಾವ ಶಿಕ್ಷಣ ತಜ್ಞರುಗಳೊಂದಿಗೆ ಚರ್ಚಿಸಲಾಗಿದೆ ಎಂಬ ಪ್ರಶ್ನೆಗೆ ಉತ್ತರವಿಲ್ಲ. ವೃತ್ತಿಪರ ಶಿಕ್ಷಣ ವಿಚಾರದಲ್ಲಿ ಯಾವುದೇ ಪಾರದರ್ಶಕತೆಯಿಲ್ಲ. ಸಂಪೂರ್ಣವಾಗಿ ಶಿಕ್ಷಣ ನೀತಿ ಹಾದಿ ತಪ್ಪಿಸುವಂತಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ಒಟ್ಟು 700 ಕೆಪಿಎಸ್‌ ಶಾಲೆಗಳನ್ನು ತೆರೆಯುವ ನಿರ್ಧಾರ ಮಾಡಲಾಗಿದೆ. ಆದರೆ ಜಿಲ್ಲಾವಾರು ಹಂಚಿಕೆಯಲ್ಲಿ ಅಸಮಾನತೆ ಎದ್ದು ಕಾಣುತ್ತಿದೆ. ಯಾವ ಮಾನದಂಡದಲ್ಲಿ ಕೆಪಿಎಸ್‌ ಶಾಲೆಗಳ ಹಂಚಿಕೆ ಮಾಡಲಾಗಿದೆ ಎಂಬುದು ಸ್ಪಷ್ಟವಾಗಿಲ್ಲ. ಶಾಸಕರ, ಸಂಸದರ ಪ್ರಭಾವದಿಂದಾಗಿ ಕೆಪಿಎಸ್‌ ಶಾಲೆಗಳ ಹಂಚಿಕೆ ಮಾಡಿದಂತಿದೆ. ಈ ಶಾಲೆಗಳಿಗೂ ಸರ್ಕಾರ ಹೂಡಿಕೆ ಮಾಡುತ್ತಿಲ್ಲ. ಬದಲಾಗಿ ಖಾಸಗಿ ಸಂಸ್ಥೆಗಳು ಬಂಡವಾಳ ಹೂಡುತ್ತಿದೆ. ಇದು ಖಾಸಗೀಕರಣ ಮಾಡಿದಂತೆಯೇ” ಎಂದರು.

dss1 1

ಇನ್ನು ಈ ಸಭೆಯಲ್ಲೇ ಮಾತನಾಡಿದ ಶಿಕ್ಷಣ ತಜ್ಞ ಡಾ. ನಿರಂಜನಾರಾಧ್ಯ, “ರಾಜ್ಯದಲ್ಲಿ ಹೆಸರಿಗೆ ಮಾತ್ರ ಪ್ರತ್ಯೇಕ ಶಿಕ್ಷಣ ನೀತಿ ಜಾರಿ ಮಾಡಲಾಗುತ್ತಿದೆ. ಆದರೆ ವಾಸ್ತವದಲ್ಲಿ ನಮ್ಮ ಶಿಕ್ಷಣ ಸಚಿವ ಮಧು ಬಂಗಾರಪ್ಪನವರು ಅಚ್ಚುಕಟ್ಟಾಗಿ ಕೇಂದ್ರದ ಜನವಿರೋಧಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರಾಜ್ಯದಲ್ಲಿ ಜಾರಿ ಮಾಡುತ್ತಿದ್ದಾರೆ” ಎಂದು ದೂರಿದರು.

“ಶಿಕ್ಷಣ ಸಚಿವರು ಸುಳ್ಳು ಹೇಳುವುದರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನೂ ಮೀರಿಸುತ್ತಾರೆ. ಶಾಲೆಯನ್ನು ವಿಲೀನದ ಹೆಸರಲ್ಲಿ ಮುಚ್ಚಲಾಗುತ್ತಿದೆ. ಆದರೆ ಶಾಲೆ ಮುಚ್ಚುವುದಿಲ್ಲ ಎಂದು ಸುಳ್ಳು ಹೇಳುತ್ತಿದ್ದಾರೆ. ಮಧು ಬಂಗಾರಪ್ಪ ಅವರು ಆ ಸ್ಥಾನಕ್ಕೆ ಅರ್ಹರೇ ಅಲ್ಲ. ಅವರು ಕೂಡಲೇ ತಮ್ಮ ಸ್ಥಾನದಿಂದ ಕೆಳಗಿಳಿಯಬೇಕು” ಎಂದು ಆಗ್ರಹಿಸಿದರು.

“ಕಾಂಗ್ರೆಸ್‌ನ ಡಾ. ಮನಮೋಹನ್ ಸಿಂಗ್ ಅವರ ಸರ್ಕಾರವು 2009ರಲ್ಲಿ ಶಿಕ್ಷಣ ಹಕ್ಕು ಕಾಯ್ದೆಯನ್ನು ಜಾರಿಗೊಳಿಸಿತು. ಈ ಕಾಯ್ದೆ 6ರಿಂದ 14 ವರ್ಷ ವಯಸ್ಸಿನ ಮಕ್ಕಳಿಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣ ಖಾತರಿಪಡಿಸುತ್ತದೆ. ಆದರೆ ರಾಜ್ಯದಲ್ಲಿ ಈಗ ಕಾಂಗ್ರೆಸ್ ಸರ್ಕಾರ ತಾವು ರೂಪಿಸಿದ ಕಾಯ್ದೆಯನ್ನು ತಾವೇ ಜಾರಿ ಮಾಡುತ್ತಿಲ್ಲ. ಶಿಕ್ಷಣ ಎಂಬುದು ರಾಜಕೀಯ ಸಮಸ್ಯೆ” ಎಂದರು.

ಇನ್ನು ಹಿರಿಯ ಸಾಹಿತಿಗಳಾದ ಎಸ್.ಜಿ. ಸಿದ್ಧರಾಮಯ್ಯ, ದಲಿತ ಮುಖಂಡ ಮಾವಳ್ಳಿ ಶಂಕರ್, ಮಹಿಳಾ ಹೋರಾಟಗಾರ್ತಿ ಕೆ ಎಸ್ ವಿಮಲಾ, ಸೇರಿದಂತೆ ಹಲವು ಪ್ರಗತಿಪರ ಸಂಘಟನೆಗಳ ಮುಖಂಡರುಗಳು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ಅಂತಿಮ ಚರ್ಚೆಯ ಬಳಿಕ ಈ ಕೆಳಗಂಡ ನಿರ್ಣಯಗಳನ್ನು ಸಭೆಯಲ್ಲಿ ಕೈಗೊಳ್ಳಲಾಯಿತು.

  1. ಪೂರ್ವ -ಪ್ರಾಥಮಿಕದಿಂದ ಪದವಿ ಪೂರ್ವ ಶಿಕ್ಷಣದವರೆಗಿನ ಎಲ್ಲಾ ಖಾಲಿ ಇರುವ ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡಲು ಕ್ರಮ ತೆಗೆದುಕೊಳ್ಳಬೇಕು.
  2. ಕರ್ನಾಟಕ ರಾಜ್ಯ ಶಿಕ್ಷಣ ನೀತಿ ಆಯೋಗ ರೂಪಿಸಿದ ರಾಜ್ಯ ಶಿಕ್ಷಣ ನೀತಿ (ಎಸ್‌ಇಪಿ)ಯ ಶಿಫಾರಸುಗಳನ್ನು ಸಾರ್ವಜನಿಕವಾಗಿ ಪ್ರಕಟಿಸಬೇಕು ಮತ್ತು ಪರಾಮರ್ಶಿಸಬೇಕು. ಹಾಗೂ ಮುಂದಿನ ವಿಧಾನಮಂಡಲ ಅಧಿವೇಶನದಲ್ಲಿ ಮಂಡಿಸಿ ಚರ್ಚಿಸಿ ಅನುಷ್ಠಾನಗೊಳಿಸಬೇಕು.
  3. ಎಸ್‌ಇಪಿ ಜಾರಿಗೊಳಿಸುವವರೆಗೂ ಶಿಕ್ಷಣ ನೀತಿಗಳಿಗೆ ಸಂಬಂಧಿಸಿದಂತೆ ಯಾವುದೇ ಹೊಸ ಆದೇಶ ಹೊರಡಿಸಬಾರದು.
  4. ಕೆಪಿಎಸ್ ಕುರಿತು ನಮ್ಮ ವಿರೋಧವಿಲ್ಲ. ಆದರೆ ಯಾವುದೇ ಶಾಲೆಯನ್ನು ಕೆಪಿಎಸ್‌ನಲ್ಲಿ ವಿಲೀನಗೊಳಿಸುವುದನ್ನು ವಿರೋಧಿಸುತ್ತೇವೆ.
  5. ಪ್ರಾಥಮಿಕ ಮತ್ತು ಪ್ರೌಢ ಶಾಲಾ ಸಚಿವರನ್ನು ಅವರ ಹುದ್ದೆಯಿಂದ ತೆರವುಗೊಳಿಸಬೇಕು. ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯ ಕುರಿತು ಆಳವಾದ ಒಳನೋಟ, ಬದ್ಧತೆ ಇರುವ ಶಾಸಕರನ್ನು ಸಚಿವರನ್ನಾಗಿ ನೇಮಿಸಬೇಕು.
  6. ಎನ್‌ಇಪಿಯನ್ನು ಬೆಂಬಲಿಸುವ ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳನ್ನು ಬದಲಾಯಿಸಬೇಕು
  7. 6ನೇ ತರಗತಿಯಿಂದ ವೃತ್ತಿಪರ ಶಿಕ್ಷಣ ತರಬೇತಿಯ ನಿರ್ಧಾರವನ್ನು ಈ ಕೂಡಲೇ ಹಿಂಪಡಿಯಬೇಕು. 9ನೇ ತರಗತಿಯಿಂದ ಪಠ್ಯಕ್ರಮದ ಭಾಗವಾಗಿ ಅಳವಡಿಸಿಕೊಳ್ಳಬೇಕು
  8. 10 ಮತ್ತು 12ನೇ ತರಗತಿಗಳಲ್ಲಿ ನಿರ್ಗಮನ ನೀತಿಯನ್ನು ರದ್ದುಪಡಿಸಬೇಕು.
  9. ಸಿಎಸ್‌ಆರ್ ಅನುದಾನದ ಹಂಚಿಕೆಯನ್ನು ಖಾಸಗಿಯವರಿಗೆ ವಹಿಸದೆ ಸ್ವತಃ ಶಿಕ್ಷಣ ಇಲಾಖೆ ಸ್ವೀಕರಿಸಿ ಹಂಚಿಕೆ ಮಾಡಬೇಕು.
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...