ಮಹಾಧರಣಿ | ‘ಜನದ್ರೋಹಿ ಕೇಂದ್ರ ಸರ್ಕಾರ, ಜಗಮೊಂಡ ರಾಜ್ಯ ಸರ್ಕಾರ’ ನಮ್ಮ ಮುಂದಿವೆ: ನೂರ್ ಶ್ರೀಧರ್

Date:

ಜನದ್ರೋಹಿ ಕೇಂದ್ರ ಸರ್ಕಾರ, ಜಗಮೊಂಡ ರಾಜ್ಯ ಸರ್ಕಾರಗಳಿವೆ. ಕೇಂದ್ರ ಸರ್ಕಾರ ಜನ ವಿರೋಧಿ ನೀತಿಗಳ ಮೂಲಕ ಜನರನ್ನು ಶೋಷಿಸುತ್ತಿದೆ. ಬಿಜೆಪಿಯನ್ನು ಮಣಿಸಿ ಜನರು ಅಧಿಕಾರಕ್ಕೆ ತಂದ ರಾಜ್ಯ ಸರ್ಕಾರ ಜನರ ಮಾತಿಗೆ ಕಿವಿಗೊಡದೆ ಮೊಂಡುತನ ಮೆರೆಯುತ್ತಿದೆ ಎಂದು ಕರ್ನಾಟಕ ಜನಶಕ್ತಿಯ ರಾಜ್ಯಾಧ್ಯಕ್ಷ ನೂರ್ ಶ್ರೀಧರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ವಿವಿಧ ಸಂಘಟನೆಗಳು ನಡೆಸುತ್ತಿರುವ ದುಡಿಯುವ ಜನರ ಮಹಾಧರಣಿಯಲ್ಲಿ ಅವರು ಮಾತನಾಡಿದರು. “ನಮ್ಮೆಲ್ಲ ಸಮಸ್ಯೆಗಳಿಗೂ ಮೂಲ ಕಾರಣ ನಮ್ಮನ್ನಾಳುತ್ತಿರುವ ಸರ್ಕಾರಗಳು. ಬಲಾಢ್ಯರು ಜನರನ್ನು ದೋಚುತ್ತಿದ್ದಾರೆ. ಅವರಿಗೆ ಸರ್ಕಾರಗಳು ದಳ್ಳಾಳಿಗಳಂತೆ ಕೆಲಸ ಮಾಡುತ್ತಿವೆ. ಸರ್ಕಾರಗಳು ಬಲಾಢ್ಯರನ್ನು ನಿಯಂತ್ರಿಸಿ ಜನರನ್ನು ರಕ್ಷಿಸಬೇಕು. ಆದರೆ, ಆ ಕೆಲಸವನ್ನು ಯಾವ ಸರ್ಕಾರಗಳೂ ಮಾಡುತ್ತಿಲ್ಲ. ಬದಲಾಗಿ, ಬಲಾಢ್ಯರಿಂದ ಹಣ ಪಡೆದು, ಜನರನ್ನು ಶೋಷಿಸುತ್ತಿವೆ” ಎಂದರು.

“ಕಾಂಗ್ರೆಸ್‌ ಭ್ರಷ್ಟಾಚಾರ ಮಾಡುತ್ತಿದೆ ಎಂದು ಮೋದಿಗೆ ಅಧಿಕಾರ ಕೊಟ್ಟೆವು. ಮೋದಿ ಸರ್ಕಾರ ಅಧಿಕಾರಕ್ಕೆ ಬಂದರೆ, ಯುವಜನರಿಗೆ ಉದ್ಯೋಗ ಸಿಗುತ್ತೆ, ಕೃಷಿಗೆ ಬೆಂಬಲ ಬೆಲೆ ಸಿಗುತ್ತೆ, ಜನರಿಗೆ ಉತ್ತಮ ಜೀವನ ಸಿಗುತ್ತೆ ಅಂತ ನಾವು ಅವರಿಗೆ ಮತ ಹಾಕಿದೆವು. ಆದರೆ, ಆಗಿದ್ದೇನು, ಜನರು ಮತ್ತಷ್ಟು ಬಡವರಾದರು. ಅಂಬಾನಿ-ಅದಾನಿಗಳು ಮತ್ತಷ್ಟು ಶ್ರೀಮಂತರಾದರು. ಕೊರೊನಾ ಸಂದರ್ಭದಲ್ಲೂ ಜನರನ್ನು ಶೋಷಿಸಲಾಯಿತು” ಎಮದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೊರೊನಾ ಸಂದರ್ಭದಲ್ಲೂ ಜಗ್ಗದೆ ಹೋರಾಟ ಮಾಡಿದವರು ರೈತರು. ಅವರ ಹೋರಾಟಕ್ಕೆ ಮೋದಿ ಸರ್ಕಾರ ಮಣಿಯಿತು. ರೈತ ವಿರೋಧಿ ಕೃಷಿ ನೀತಿಗಳನ್ನು ಹಿಂಪಡೆಯಿತು. ಆದರೆ, ಕಾರ್ಮಿಕರು ಅಂತದ್ದೊಂದು ಹೋರಾಟ ಮಾಡಲು ಸಾಧ್ಯವಿಲ್ಲ. ಅದರೂ, ಸರ್ಕಾರಕ್ಕೆ ತಕ್ಕ ಪಾಠ ಕಲಿಸಬಹುದು. ಹಾಗಾಗಿ, ರಾಜ್ಯದಲ್ಲಿ ಬಿಜೆಪಿಯನ್ನು ಸೋಲಿಸಿದೆವು. ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದಿತು. ಆದರೆ, ಈ ಸರ್ಕಾರ ಏನು ಮಾಡುತ್ತಿದೆ. ರೈತರು, ಕಾರ್ಮಿಕರು, ದಲಿತರ ಜೊತೆ ಒಂದೇ ಒಂದು ಸಭೆಯನ್ನೂ ಮಾಡಲಿಲ್ಲ. ಯಾರ ಸಮಸ್ಯೆಗಳನ್ನೂ ಕೇಳಲಿಲ್ಲ. ಈ ಆಳುವವರಿಗೆ ಸರಿಯಾದ ಪಾಠ ಕಲಿಸಬೇಕಿದೆ. ನಾವು ಕೇಂದ್ರ ಸರ್ಕಾರದ ವಿರುದ್ಧ ಏನು ಮಾಡಬೇಕು. ರಾಜ್ಯ ಸರ್ಕಾರಕ್ಕೆ ಪಾಠ ಕಲಿಸಲು ಏನು ಮಾಡಬೇಕು ಎಂಬ ಬಗ್ಗೆ ನಿರ್ಧಾರ ಮಾಡಬೇಕಿದೆ” ಎಂದು ಹೇಳಿದರು.

“ನಮ್ಮ ಸಮಸ್ಯೆಗಳ ಬಗ್ಗೆ ಚರ್ಚಿಸಲು ರಾಜ್ಯದ ಎಲ್ಲ ಸಚಿವರು ಇರುವಂತೆ ಸಿಂಗಲ್ ವಿಂಡೋ ಸಭೆಯನ್ನು ರಾಜ್ಯ ಸರ್ಕಾರ ಕರೆಯಬೇಕು. ಎಲ್ಲ ಸಮುದಾಯಗಳು, ಕ್ಷೇತ್ರಗಳ ಜನರ ಸಮಸ್ಯೆಗಳ ಬಗ್ಗೆ ಆ ಸಭೆಯಲ್ಲಿ ಚರ್ಚೆ ನಡೆಯಬೇಕು. ಅಂತಹ ಸಭೆಗೆ ಸರ್ಕಾರ ದಿನಾಂಕ ನಿಗದಿ ಮಾಡಬೇಕು. ನಮ್ಮ ಮುಂದೆ ಜನದ್ರೋಹಿ ಕೇಂದ್ರ ಸರ್ಕಾರ, ಜಗಮಂಡ ರಾಜ್ಯ ಸರ್ಕಾರಗಳಿವೆ. ಅವುಗಳ ವಿರುದ್ಧ ನಾವೆಲ್ಲರೂ ಒಟ್ಟುಗೂಡಬೇಕು. ಗಟ್ಟಿ ಹೋರಾಟವನ್ನು ಮಾಡಬೇಕು” ಎಂದು ಕರೆಕೊಟ್ಟರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...