ಮಹಾಧರಣಿ | ಮೋದಿ ಸರ್ಕಾರದಲ್ಲಿ ಮಹಿಳೆಯರು ಹೆಚ್ಚು ಸಂಕಷ್ಟಕ್ಕೆ ಸಿಲುಕಿದ್ದಾರೆ: ಮೀನಾಕ್ಷಿ ಬಾಳಿ

Date:

ಮೋದಿ ಸರ್ಕಾರದಲ್ಲಿ ಅತೀ ಹೆಚ್ಚು ಸಂಕಷ್ಟಕ್ಕೆ ಒಳಗಾದವರು ಮಹಿಳೆಯರು. ಹತ್ರಾಸ್, ಉನ್ನೋವೋದಲ್ಲಿ ನಡೆದ ಅತ್ಯಾಚಾರ, ಬಿಲ್ಕೀಸ್‌ ಬಾನೋ ಮೇಲೆ ನಡೆದ ಅತ್ಯಾಚಾರ ಪ್ರಕರಣಗಳಲ್ಲಿ ಇಂದಿಗೂ ನ್ಯಾಯ ಸಿಕ್ಕಿಲ್ಲ. ಆರೋಪಿಗಳನ್ನು ರಕ್ಷಿಸಲಾಗುತ್ತಿದೆ. ‘ಮಹಿಳೆಯರು ಇರುವುದೇ ಬೋಗಿಸಲಿಕ್ಕೆ’ ಅಂತ ಮೋದಿ ಸರ್ಕಾರ ಹೇಳಿದೆ. ಮೋದಿ ಸರ್ಕಾರದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲವಾಗಿದೆ ಎಂದು ಮಹಿಳಾ ಸಂಘಟನೆಗಳ ಮುಖಂಡೆ ಮೀನಾಕ್ಷಿ ಬಾಳಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ನಡೆಯುತ್ತಿರುವ ದುಡಿಯುವ ಜನರ ಮಹಾಧರಣಿಯಲ್ಲಿ ಅವರು ಮಾತನಾಡಿದರು. “ಕೃಷಿಯಲ್ಲಿ ಮಹಿಳೆಯರ ದುಡಿಮೆ ಹೆಚ್ಚಿದೆ. ಎಲ್ಲ ಕ್ಷೇತ್ರಗಳಲ್ಲಿಯೂ ಮಹಿಳೆಯ ಶ್ರಮವಿದೆ. ಕುಟುಂಬದ ನೊಗವನ್ನ ಮಹಿಳೆಯರು ಹೊತ್ತಿದ್ದಾರೆ” ಎಂದರು.

“ಮಹಿಳೆಯರು ನೋವನ್ನು ಅನುಭವಿಸಿಯೂ, ಜಗತ್ತನ್ನು ಸಂಭಾಳಿಸಿಕೊಂಡು ಬಂದಿದ್ದಾರೆ. ಪುರುಷರಿಗಿಂತ ಹೆಚ್ಚು ದುಡಿಯುವವರು ಮಹಿಳೆಯರು. ದುಡಿಯುವ ವರ್ಗದ ವಿಮೋಚನೆಯೊಂದಿಗೆ ಮಹಿಳೆಯರ ವಿಮೋಚನೆಯಾಗುತ್ತದೆ. ಮಹಿಳೆಯನ್ನು ಭೋಗದ ವಸ್ತುವೆಂದು ಮನುಸ್ಮೃತಿ ಹೇಳುತ್ತದೆ. ಮನುಸ್ಮೃತಿಯೇ ಮೋದಿ ಸರ್ಕಾರದ ಜೀವಾಳ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಹೆಣ್ಣು ಸ್ವಾತಂತ್ರ್ಯಕ್ಕೆ ಅರ್ಹಳಲ್ಲ ಎಂದು ಮನುವಾದ ಹೇಳುತ್ತದೆ. ಹೆಣ್ಣನ್ನು ಗಂಡು ರಕ್ಷಿಸುತ್ತಾನೆ ಎಂದು ಹೇಳುತ್ತದೆ. ಆದರೆ, ಮಹಿಳೆಗೆ ರಕ್ಷಣೆ ಎಲ್ಲಿದೆ. ಎಲ್ಲೆಡೆ, ಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯಗಳು ನಡೆಯುತ್ತಿವೆ. ಮೋದಿ ಸರ್ಕಾರ ಅತ್ಯಾಚಾರಿಗಳನ್ನು ರಕ್ಷಿಸುತ್ತಿದೆ. ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಬ್ರಿಜ್ ಭೂಷಣ್‌ ಸಿಂಗ್‌ನನ್ನು ಸರ್ಕಾರ ರಕ್ಷಿಸುತ್ತಿದೆ” ಎಂದು ಕಿಡಿಕಾರಿದರು.

“ಮಹಿಳಾ ಮಿಸಲಾತಿ ಮಸೂದೆಯನ್ನು ಅಂಗೀಕರಿಸಿ, ಮಹಿಳೆಯರ ಮತ ಪಡೆಯಲು ಮೋದಿ ಸರ್ಕಾರ ಹವಣಿಸುತ್ತಿದೆ. ಆದರೆ, ಅವರ ಕಾಯ್ದೆ ಆಟಕ್ಕುಂಟು-ಲೆಕ್ಕಕ್ಕಿಲ್ಲ ಎಂಬಂತಿದೆ. ಕಾಯ್ದೆಯನ್ನು ಜಾರಿಗೆ ತರಲು ಕನಿಷ್ಠ 10 ವರ್ಷ ಸತಾಯಿಸುತ್ತಾರೆ. ಅವರ ಹುನ್ನಾರ ಏನೆಂಬುದು ನನಗೆ ಗೊತ್ತಿಲ್ಲವೆಂದು ಸರ್ಕಾರ ಭಾವಿಸಿದೆ. ಮಹಿಳೆಯರು ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಅವರ ಆಟ ದೇಶದ ಮಹಿಳೆಯರ ಮುಂದೆ ನಡೆಯುವುದಿಲ್ಲ ಎಂಬುದನ್ನು ಕೇಂದ್ರ ಸರ್ಕಾರ ಅರಿತುಕೊಳ್ಳಬೇಕು” ಎಂದು ಎಚ್ಚರಿಕೆ ನೀಡಿದ್ದಾರೆ.

 

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...