ನಮ್ಮ ಮೆಟ್ರೋಗೆ ಪೂರ್ಣಾವಧಿ ವ್ಯವಸ್ಥಾಪಕ ನಿರ್ದೇಶಕರಾಗಿ ಮಹೇಶ್ವರ ರಾವ್ ನೇಮಕ

Date:

ಬೆಂಗಳೂರಿನ ನಮ್ಮ ಮೆಟ್ರೋಗೆ ಪೂರ್ಣಾವಧಿ ವ್ಯವಸ್ಥಾಪಕ ನಿರ್ದೇಶಕರಾಗಿ ಮಹೇಶ್ವರ ರಾವ್ ಅವರನ್ನು ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್ಸಿಎಲ್) ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಅಜುಂ ಪರ್ವೇಜ್ ಅವರನ್ನು ವರ್ಗಾವಣೆ ಮಾಡಿ, ಆ ಸ್ಥಾನಕ್ಕೆ 1995ನೇ ಬ್ಯಾಚ್‌ನ ಐಎಎಸ್‌ ಅಧಿಕಾರಿ ಮಹೇಶ್ವರ ರಾವ್ ಅವರನ್ನು ನೇಮಕ ಮಾಡಿ ಕೇಂದ್ರದ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಜನವರಿ 11ರಂದು ಪತ್ರ ಬರೆದಿದೆ.

ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕರನ್ನು ಕೇಂದ್ರ ಸರ್ಕಾರದ ಅನುಮತಿ ಇಲ್ಲದೇ, ಕರ್ನಾಟಕ ಸರ್ಕಾರ ವರ್ಗಾವಣೆ ಮಾಡುವಂತಿಲ್ಲ ಹಾಗೂ ಅವರನ್ನು ತೆಗೆದು ಹಾಕುವಂತಿಲ್ಲ. ಹೊಸ ವ್ಯವಸ್ಥಾಪಕ ನಿರ್ದೇಶಕರಿಗೆ ಯಾವುದೇ ಹೆಚ್ಚುವರಿ ಜವಾಬ್ದಾರಿಯನ್ನು ಕೇಂದ್ರದ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಒಪ್ಪಿಗೆ ಇಲ್ಲದೇ ನೀಡುವಂತಿಲ್ಲ ಎಂದು ಆದೇಶದಲ್ಲಿ ಸೂಚಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕೋವಿಡ್‌ನಿಂದ ಮೃತಪಟ್ಟವರ ಅಂತ್ಯಕ್ರಿಯೆ ನಿರಾಕರಿಸದಂತೆ ಆರೋಗ್ಯ ಇಲಾಖೆ ಸುತ್ತೋಲೆ

ಈ ಬಗ್ಗೆ ಟ್ವೀಟ್ ಮಾಡಿರುವ ಸಂಸದ ತೇಜಸ್ವಿ ಸೂರ್ಯ, “ಅಂತಿಮವಾಗಿ, ನಮ್ಮ ಮೆಟ್ರೋಗೆ ಪೂರ್ಣ ಪ್ರಮಾಣದ ವ್ಯವಸ್ಥಾಪಕ ನಿರ್ದೇಶಕರನ್ನು ನೇಮಕ ಮಾಡಲಾಗಿದೆ. ನಗರದ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ತ್ವರಿತವಾಗಿ ನೇಮಕ ಮಾಡಿದ್ದಕ್ಕಾಗಿ ಕೇಂದ್ರ ಸಚಿವ ಹರ್ದಿಪ್ ಸಿಂಗ್ ಪುರಿ ಅವರಿಗೆ ಧನ್ಯವಾದ ತಿಳಿಸಿದ್ದಾರೆ. ಅಲ್ಲದೇ, ಪೂರ್ಣ ಸಮಯದ ನಿರ್ದೇಶಕರ ನೇಮಕದೊಂದಿಗೆ, ನಮ್ಮ ನಗರದ ಉನ್ನತ ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳು ಅವರ ಗಮನಕ್ಕೆ ಬರುತ್ತವೆಂದು ನಾವು ಭಾವಿಸುತ್ತೇವೆ” ಎಂದು ಬರೆದುಕೊಂಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...