ಮಾಲ್‌ ಆಫ್‌ ಏಷ್ಯಾ | ಡಿ.31ರಿಂದ ಜನವರಿ 15ರವರೆಗೆ ಸಾರ್ವಜನಿಕರಿಗೆ ಪ್ರವೇಶ ನಿಷೇಧ

Date:

ರಾಜ್ಯ ರಾಜಧಾನಿ ಬೆಂಗಳೂರಿನ ಯಲಹಂಕ ಹೋಬಳಿ ಬ್ಯಾಟರಾಯನಪುರದ ಮಾಲ್ಆಫ್ಏಷ್ಯಾಗೆ ಡಿ.31ರಿಂದ ಜನವರಿ 15ರವರೆಗೆ ಸಾರ್ವಜನಿಕರಿಗೆ ಪ್ರವೇಶ ನಿಷೇಧಿಸಲಾಗಿದ್ದು, ಬಟ್ಟು 16 ದಿನಗಳ ಕಾಲ ಈ ಮಾಲ್‌ ಬಂದ್ಮಾಡುವಂತೆ ನಗರ ಪೊಲೀಸ್ಆಯುಕ್ತ ಬಿ. ದಯಾನಂದ ಆದೇಶಿಸಿದ್ದಾರೆ.

ಬೆಂಗಳೂರಿನಲ್ಲಿ ಇತ್ತೀಚೆಗಷ್ಟೇ ನಾಮಫಲಕದಲ್ಲಿ ಶೇ. 60ರಷ್ಟು ಕನ್ನಡ ಬಳಸದ ವಾಣಿಜ್ಯ ಅಂಗಡಿಗಳು ಹಾಗೂ ಮಾಲ್‌ಗಳ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಪ್ರತಿಭಟನೆ ನಡೆಸಿತ್ತು. ಅಲ್ಲದೇ, ಬ್ಯಾಟರಾಯನಪುರದ ಫೋನಿಕ್ಸ್ಮಾಲ್ ಆಫ್ ಏಷ್ಯಾ ವಿರುದ್ಧ ಕೂಡ ಪ್ರತಿಭಟನೆ ನಡೆಸಿದ್ದರು. ಈ ವೇಳೆ, ಮಾಲ್ಗೆ ನುಗ್ಗಿ ಗಲಾಟೆ ನಡೆಸಲಾಗಿತ್ತು. ಈ ಹಿನ್ನೆಲೆ, ಸಾರ್ವಜನಿಕ ಶಾಂತಿ ಕಾಪಾಡುವುದು ಹಾಗೂ ಕಾನೂನು ಮತ್ತು ಸುವ್ಯವಸ್ಥೆ ನಿರ್ವಹಿಸುವ ದೃಷ್ಟಿಯಿಂದ ಮಾಲ್ನಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಆದೇಶ ಹೊರಡಿಸಿದ್ದಾರೆ.

ಇನ್ನು ಮಾಲ್ವ್ಯಾಪ್ತಿಯಲ್ಲಿ ಸೆಕ್ಷನ್ 144 ಹಾಕಲಾಗಿದೆ. ಮುಂಜಾಗ್ರತ ಕ್ರಮವಾಗಿ ಮಾಲ್ ಬಳಿ ಭದ್ರತೆಗಾಗಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಆದೇಶದಂತೆ 5 ಕ್ಕಿಂತ ಹೆಚ್ಚು ಜನ ಸೇರುವ ಹಾಗಿಲ್ಲ. ಹಾಗಾಗಿ ಮುಂದಿನ ಹದಿನೈದು ದಿನಗಳ ಕಾಲ ಮಾಲ್ ಆಫ್ ಏಷ್ಯಾ ಕ್ಲೋಸ್ ಆಗಲಿದೆ. ಅಕ್ಟೋಬರ್ ತಿಂಗಳಲ್ಲಿ ಓಪನ್ ಮಾಲ್ ಆಫ್ ಏಷ್ಯಾ ಓಪನ್ ಆಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಾಲ್ ವಿರುದ್ಧ ಪ್ರತಿಭಟನೆ

ಇನ್ನು ಮಾಲ್ ನಿರ್ಮಾಣದಿಂದ ಸಂಚಾರಕ್ಕೆ ಅನಾನೂಕೂಲ ಆಗಿದೆ ಎಂದು ಸಾರ್ವಜನಿಕರು ಪ್ರತಿಭಟನೆ ಸಹ ನಡೆಸಿದ್ದರು. ಮಾಲ್ಭಾಗದಲ್ಲಿ ಸುಗಮ ಸಂಚಾರಕ್ಕೆ ಅವಕಾಶ ಆಗುತ್ತಿಲ್ಲ. ವಿಮಾನ ನಿಲ್ದಾಣಕ್ಕೆ ಹೋಗುವ ವಾಹನಗಳು, ಅಂಬುಲೆನ್ಸ್‌ಗಳ ಓಡಾಟಕ್ಕೂ ಕಷ್ಟ ಆಗಲಿದೆ ಎಂಬ ದೂರುಗಳು ಮಾಲ್ ವಿರುದ್ಧ ದಾಖಲಾಗಿದ್ದವು.

ಸಾಲು ಸಾಲು ದೂರುಗಳು ದಾಖಲಾದ ಹಿನ್ನೆಲೆ ಇದನ್ನು ಗಂಭೀರವಾಗಿ ಪರಿಗಣಿಸಿದ ಆಯುಕ್ತರು ಖುದ್ದು ಮಾಲ್‌ಗೆ ತೆರಳಿ ಪರಿಶೀಲನೆ ನಡೆಸಿದ್ದರು. ಈ ವೇಳೆ, ಪಾರ್ಕಿಂಗ್ ಸೇರಿದಂತೆ ಕೆಲವು ನ್ಯೂನ್ಯತೆಗಳು ಕಂಡು ಬಂದಿದ್ದವು. ಜತೆಗೆ, ಸಂಚಾರ ದ್ಟಟಣೆ ಕುರಿತು ಜಂಟಿ ಆಯುಕ್ತರ ವರದಿ, ಕಾನೂನು ಸುವ್ಯವಸ್ಥೆ ಬಿಗಡಾಯಿಸುತ್ತಿರುವ ಸಂಬಂಧ ಈಶಾನ್ಯ ವಿಭಾಗದ ಡಿಸಿಪಿ ನೀಡಿದ್ದ ವರದಿ ಪರಿಗಣಿಸಿ ಮಾಲ್ಆಫ್ಏಷಿಯಾವನ್ನು ತಾತ್ಕಾಲಿಕವಾಗಿ ಬಂದ್ಮಾಡಲು ಆದೇಶಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ರೈಲಿನ ಮೂಲಕ ಮಾದಕ ವಸ್ತು ಕಳ್ಳಸಾಗಣೆ ಮಾಡುತ್ತಿದ್ದ ಏಳು ಮಂದಿ ಬಂಧನ

ಬಂದ್ ವೇಳೆ, ಮಾಲ್ಸಿಬ್ಬಂದಿ ಹಾಗೂ ಮಳಿಗೆಗಳ ಸಿಬ್ಬಂದಿ ಕಾರ್ಯಚಟುವಟಿಕೆ ನಡೆಸಬಹುದು. ಮುಂಜಾಗ್ರತಾ ಕ್ರಮವಾಗಿ ಮಾಲ್ಸುತ್ತಮುತ್ತಲೂ ಹೆಚ್ಚಿನ ಪೊಲೀಸ್ಭದ್ರತೆ ಕಲ್ಪಿಸಲಾಗಿದೆ ಎಂದು ಹಿರಿಯ ಪೊಲೀಸ್ಅಧಿಕಾರಿಯೊಬ್ಬರು ತಿಳಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...