ಪರಿಶಿಷ್ಟರ ₹11,130 ಕೋಟಿ ಹಣ ದುರ್ಬಳಕೆ ವಿರುದ್ಧ ಎಎಪಿಯಿಂದ ಬೃಹತ್ ಪ್ರತಿಭಟನೆ

Date:

  • ಹೇಳುವುದು ಒಂದು ಮಾಡುವುದು ಇನ್ನೊಂದು ಕಾಂಗ್ರೆಸ್ ಸರ್ಕಾರದ ಪರಿಪಾಠ
  • ಕಾಂಗ್ರೆಸ್‌ಗೆ ಮತನೀಡಿದ ದಲಿತ ವರ್ಗ ಮಹಾಮೋಸಕ್ಕೆ ಒಳಗಾಗುತ್ತಿರುವುದು ದುರಂತ

“ದಲಿತ ವರ್ಗಕ್ಕೆ ಮೀಸಲಿಟ್ಟಿರುವ ₹11,130 ಕೋಟಿಯನ್ನು ಗ್ಯಾರಂಟಿ ಯೋಜನೆಗಳಿಗೆ ಉಪಯೋಗ ಮಾಡುತ್ತಿರುವುದು ಮಹಾ ಅನ್ಯಾಯ. ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಎರಡೇ ತಿಂಗಳಿಗೆ ದಲಿತ ವಿರೋಧಿ ಎಂಬುದನ್ನು ಸಾಬೀತು ಪಡಿಸಲು ಹೊರಟಿದೆ” ಎಂದು ಎಎಪಿ ಎಸ್‌ಸಿ/ಎಸ್‌ಟಿ ವಿಭಾಗದ ರಾಜ್ಯಾಧ್ಯಕ್ಷ ಪುರುಷೋತ್ತಮ ತಿಳಿಸಿದರು.

ಗುರುವಾರ ಎಎಪಿ ಕೇಂದ್ರ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ದಲಿತ ವರ್ಗದ ಶ್ರೇಯೋಭಿವೃದ್ಧಿಗಾಗಿ ಮೀಸಲಿಟ್ಟಿರುವ ಎಸ್‌ಸಿ-ಎಸ್‌ಪಿ/ಟಿಎಸ್‌ಪಿ ಯೋಜನೆಯ ₹11,130 ಕೋಟಿಯನ್ನು ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ. ಇದೇ ರೀತಿಯಾಗಿ ಬಿಜೆಪಿ ಸರ್ಕಾರವು ಕೂಡ ದಲಿತರ ಹಣವನ್ನು ದುರ್ಬಳಕೆ ಮಾಡಿಕೊಂಡು ಬಂದಿದೆ. ಕಾಂಗ್ರೆಸ್‌ಗೆ ಮತನೀಡಿದ ದಲಿತ ವರ್ಗ ಮಹಾಮೋಸಕ್ಕೆ ಒಳಗಾಗುತ್ತಿರುವುದು ದುರಂತ” ಎಂದರು.

“14 ಬಾರಿ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿಗಳು ಈ ಬಾರಿ ₹4,079 ಕೋಟಿಯನ್ನು ಹೆಚ್ಚುವರಿಯಾಗಿ ಈ ಯೋಜನೆಯಲ್ಲಿ ಇಟ್ಟಿದ್ದೇವೆಂದು ತಮ್ಮ ಬಜೆಟ್ ಭಾಷಣದಲ್ಲಿ ಹೇಳಿ, ಚಪ್ಪಾಳೆ ಗಿಟ್ಟಿಸಿಕೊಂಡಿದ್ದರು. ಇದೀಗ ದಲಿತ ವರ್ಗದಿಂದ ಛೀಮಾರಿ ಹಾಕಿಸಿಕೊಳ್ಳುವ ಪರಿಸ್ಥಿತಿ ಬಂದಿದೆ. ಯಾವುದೇ ಕಾರಣಕ್ಕೂ ದಲಿತ ವರ್ಗಕ್ಕೆ ಈ ರೀತಿ ಅನ್ಯಾಯವಾಗುವುದನ್ನು ನಾವು ಸಹಿಸುವುದಿಲ್ಲ. ಸರ್ಕಾರದ ಈ ನಡೆಯ ವಿರುದ್ಧ ಹೋರಾಟದ ಹಾದಿಯಲ್ಲಿ ಇಳಿಯುತ್ತೇವೆ” ಎಂದು ಎಚ್ಚರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಜಗಳ ಮಾಡುವಾಗ ಪತ್ನಿಯ ಬೆರಳನ್ನೆ ಕಚ್ಚಿ ತಿಂದ ಪತಿರಾಯ

“ಹೇಳುವುದು ಒಂದು ಮಾಡುವುದು ಇನ್ನೊಂದು ಕಾಂಗ್ರೆಸ್ ಸರ್ಕಾರದ ಪರಿಪಾಠ. ಈ ಬಗ್ಗೆ ರಾಜ್ಯ ವ್ಯಾಪಿ ಹೋರಾಟವನ್ನು ರೂಪಿಸುತ್ತೇವೆ. ಇದೇ ತಿಂಗಳ ಆಗಸ್ಟ್ 5ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸುವ ಮೂಲಕ ಸರ್ಕಾರದ ದಲಿತ ನೀತಿಯ ವಿರುದ್ಧ ಹೋರಾಟ ಮಾಡಲಿದ್ದೇವೆ. ನಮ್ಮ ಪ್ರತಿಭಟನೆಗೆ ಅನೇಕ ದಲಿತ ಸಂಘಟನೆಗಳು ಬೆಂಬಲ ಸೂಚಿಸಿವೆ” ಎಂದು ಎಎಪಿ ಉಪಾಧ್ಯಕ್ಷ ಸುರೇಶ್ ರಾಥೋಡ್  ತಿಳಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...