ಬೆಂಗಳೂರು ನಗರದಲ್ಲಿ ಭಾನುವಾರ ಪ್ರಾಣಿವಧೆ, ಮಾಂಸ ಮಾರಾಟ ನಿಷೇಧ ಮಾಡಲಾಗಿದೆ. ಈ ಬಗ್ಗೆ ಬಿಬಿಎಂಪಿ ಪಶುಪಾಲನೆ ವಿಭಾಗದ ಜಂಟಿ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.
ರಾಮನವಮಿ ಹಬ್ಬದ ಕಾರಣದಿಂದಾಗಿ ನಾಳೆ (ಏಪ್ರಿಲ್ 6) ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಮತ್ತು ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ನಿಷೇಧಿಸಲಾಗಿದೆ.
ಇದನ್ನು ಓದಿದ್ದೀರಾ? ಬೆಂಗಳೂರು | ಫೆ.26ರಂದು ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧ
ಕುರಿ, ಕೋಳಿ ಸೇರಿದಂತೆ ಯಾವುದೇ ರೀತಿಯ ಮಾಂಸ ಮಾರಾಟ, ಪ್ರಾಣಿ ವಧೆ ನಿಷೇಧಿಸಲಾಗಿದ್ದು, ಆದೇಶ ಉಲ್ಲಂಘಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿದೆ.
ಇನ್ನು ಶಿವಮೊಗ್ಗದಲ್ಲಿ ಎರಡು ದಿನಗಳ ಕಾಲ ಮಾಂಸ ಮಾರಾಟ ನಿಷೇಧಿಸಲಾಗಿದೆ. ಏಪ್ರಿಲ್ 6ರಂದು ರಾಮನವಮಿ ಕಾರಣ, ಏಪ್ರಿಲ್ 10ರಂದು ಮಹಾವೀರ ಜಯಂತಿ ಕಾರಣ ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಮತ್ತು ಮಾಂಸ ಮಾರಾಟ ನಿಷೇಧಿಸಲಾಗಿದೆ.





