ಮೆಟ್ರೋ ಪಿಲ್ಲರ್ ಕುಸಿದು ಸಾವು; ಐದು ತಿಂಗಳ ಬಳಿಕ ಚಾರ್ಜ್‌ಶೀಟ್ ಸಲ್ಲಿಸಿದ ಪೊಲೀಸರು

Date:

  • ಸುಮಾರು 1,100 ಪುಟಗಳ ದೋಷಾರೋಪಣೆ ಪಟ್ಟಿ ಸಲ್ಲಿಸಿದ ಪೊಲೀಸರು
  • ಪಿಲ್ಲರ್ ನಿರ್ಮಾಣ ವೇಳೆ ಸುರಕ್ಷತಾ ಕ್ರಮಗಳ ವೈಫಲ್ಯದ ಬಗ್ಗೆ ಉಲ್ಲೇಖ

ರಾಜ್ಯ ರಾಜಧಾನಿ ಬೆಂಗಳೂರಿನ ಹೆಣ್ಣೂರು ಕ್ರಾಸ್ ಬಳಿ ಮೆಟ್ರೋ ಪಿಲ್ಲರ್ ಕುಸಿದು ತಾಯಿ-ಮಗ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಗೋವಿಂದಪುರ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ.

ಘಟನೆ ನಡೆದು ಐದು ತಿಂಗಳ ನಂತರ ಪೊಲೀಸರು ಸುಮಾರು 1100 ಪುಟಗಳ ದೋಷಾರೋಪಣೆ ಪಟ್ಟಿಯಲ್ಲಿ ಗುತ್ತಿಗೆ ಕಂಪನಿ ಎಂಜಿನಿಯರ್ ಹಾಗೂ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್) ಎಂಜಿನಿಯರ್ ಸೇರಿ ಒಟ್ಟು 11 ಅಧಿಕಾರಿಗಳ ಮೇಲೆ ಚಾರ್ಜ್‌ಶೀಟ್‌ ಸಲ್ಲಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋವಿಂದಪುರ ಪೊಲೀಸರು ತಜ್ಞರ ವರದಿಗಳು, ಪೊಲೀಸ್‌ ತನಿಖೆ ಹಾಗೂ ಎಫ್‌ಎಸ್‌ಎಲ್‌ ವರದಿ ಆಧಾರದ ಮೇಲೆ ತನಿಖೆ ನಡೆಸಿದ್ದಾರೆ. ಜತೆಗೆ ಐಐಟಿ ಮತ್ತು ಎಫ್‌ಎಸ್‌ಎಲ್‌ ನೀಡಿದ ವರದಿಯನ್ನು ಚಾರ್ಜ್‌ಶೀಟ್‌ ಜತೆಗೆ ಲಗತ್ತಿಸಿದ್ದಾರೆ. ಅಧಿಕಾರಿಗಳ ಲೋಪ ಹಾಗೂ ಪಿಲ್ಲರ್ ನಿರ್ಮಾಣ ವೇಳೆ ಸುರಕ್ಷತಾ ಕ್ರಮಗಳ ವೈಫಲ್ಯದ ಬಗ್ಗೆ ಉಲ್ಲೇಖ ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಕರಣದ ಹಿನ್ನೆಲೆ?

ಇಬ್ಬರು ಮಕ್ಕಳೊಂದಿಗೆ ದಂಪತಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ, ಕಲ್ಯಾಣನಗರದಿಂದ ಹೆಚ್‌ಆರ್‌ಬಿಆರ್‌ ಲೇಔಟ್‌ಗೆ ಹೋಗುವ ರಸ್ತೆಯಲ್ಲಿ ಮೆಟ್ರೋ ಕಾಮಗಾರಿ ನಡೆಯುತ್ತಿತ್ತು. ಈ ವೇಳೆ, ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ಕುಸಿದು ದ್ವಿಚಕ್ರ ವಾಹನದ ಮೇಲೆ ಬಿದ್ದಿತ್ತು. ಈ ಘಟನೆಯಲ್ಲಿ ತಾಯಿ-ಮಗ ಸಾವನ್ನಪ್ಪಿದ್ದರು.

ಈ ಸುದ್ದಿ ಓದಿದ್ದೀರಾ? ಶಾಲಾ ಮಕ್ಕಳ ಬ್ಯಾಗ್‌ ತೂಕ ಕಡಿತ: ಶಿಕ್ಷಣ ಇಲಾಖೆ ಆದೇಶ

ತಾಯಿ ತೇಜಸ್ವಿನಿ (28) ಮತ್ತು ಮಗ ವಿಹಾನ್ (2) ಸಾವನ್ನಪ್ಪಿದ್ದರು. ಮತ್ತೊಂದು ಮಗು ಮತ್ತು ಪತಿ ಲೋಹಿತ್ ಕುಮಾರ್ ಗಂಭೀರವಾಗಿ ಗಾಯಗೊಂಡಿದ್ದರು.ಈ ಘಟನೆಗೆ ಸಂಬಂಧಿಸಿದಂತೆ ಗೋವಿಂದಪುರ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...