ಸಂಬಂಧಿಕರ ಯುವತಿಯನ್ನು ಪ್ರೀತಿಸಿದಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ದುಷ್ಕರ್ಮಿಗಳು

Date:

  • ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳು ಮನು
  • ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ದ ಪ್ರಕರಣ ದಾಖಲು

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಾಲೇಜು ವಿದ್ಯಾರ್ಥಿಯೊಬ್ಬ ತನ್ನ ಸಂಬಂಧಿಕರ ಯುವತಿಯನ್ನು ಪ್ರೀತಿಸಿದ್ದಕ್ಕೆ ದುಷ್ಕರ್ಮಿಗಳು ಆತನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ನಡೆದಿದೆ.

ಕುಂಬಳಗೋಡು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಗಾಯಾಳುವನ್ನು ಮನು ಎಂದು ಗುರುತಿಸಲಾಗಿದೆ.

ರಾಜರಾಜೇಶ್ವರಿನಗರದ ನಿವಾಸಿ ರಂಗನಾಥ್ ಮತ್ತು ಸತ್ಯಪ್ರೇಮ ದಂಪತಿಯ ಮಗ ಮನು. ಈತ ತನ್ನ ಸಂಬಂಧಿಕರ ಯುವತಿಯನ್ನು ಪ್ರೀತಿ ಮಾಡುತ್ತಿದ್ದ. ಯುವತಿಯ ಪೋಷಕರು ಈ ಇಬ್ಬರ ಪ್ರೀತಿಗೆ ವಿರೋಧ ವ್ಯಕ್ತಪಡಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಳೆದ ಜುಲೈ 3ರಂದು ಯುವತಿ ಮೈಸೂರಿನಿಂದ ಬೆಂಗಳೂರಿಗೆ ಬಂದಿದ್ದಳು. ಆಕೆಯನ್ನು ಮನು ತಮ್ಮ ಮನೆಗೆ ಕರೆದುಕೊಂಡು ಹೋಗಿದ್ದ. ಇದನ್ನು ತಿಳಿದ ಯುವತಿಯ ಪೋಷಕರು ಮನು ಅವರ ಮನೆಗೆ ನುಗ್ಗಿ ಹಲ್ಲೆ ಮಾಡಿ ಯುವತಿಯನ್ನು ಕರೆದುಕೊಂಡು ಹೋಗಿದ್ದರು ಎಂದು ತಿಳಿದುಬಂದಿದೆ.

ಈ ಘಟನೆ ನಡೆದ ಬಳಿಕ ಎಂದಿನಂತೆ ಮನು ಅವರ ತಂದೆ ಶನಿವಾರ ಬೆಳಿಗ್ಗೆ ಆತನನ್ನು ಕಾಲೇಜಿಗೆ ಬಿಟ್ಟು ಬಂದಿದ್ದರು. ಕಾಲೇಜು ಮುಗಿಸಿಕೊಂಡು ಮನೆಗೆ ವಾಪಸ್‌ ಆಗಲು ಬಸ್‌ ಸ್ಟಾಪ್ ಬಳಿ ಬಸ್‌ಗಾಗಿ ಕಾಯುತ್ತಿದ್ದಾಗ ಕೆಲವು ದುಷ್ಕರ್ಮಿಗಳು ಮನುವನ್ನು ಅಪಹರಣ ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬಾಲನಟಿ ವಂಶಿಕಾ ಹೆಸರು ಹೇಳಿ ವಂಚನೆ ಮಾಡಿದ್ದ ಆರೋಪಿ ವಿರುದ್ಧ ಮತ್ತಷ್ಟು ದೂರು ದಾಖಲು

ಬಳಿಕ ಯುವಕ ಮನುವಿನ ಮೇಲೆ ಹಲ್ಲೆ ಮಾಡಿ, ಕೈ ಕಾಲು ಕಟ್ಟಿಹಾಕಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಸದ್ಯ ಗಾಯಳು ಮನುನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ದ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...