ವಾಣಿಜ್ಯ ಉದ್ದೇಶಕ್ಕೆ ಪುರಸಭೆ, ಪಾಲಿಕೆ ವ್ಯಾಪ್ತಿಯ ಭೂಮಿ ಪರಿವರ್ತನೆ ಅಗತ್ಯವಿಲ್ಲ: ಹೈಕೋರ್ಟ್‌

Date:

ಪುರಸಭೆ, ನಗರಸಭೆ ಹಾಗೂ ಮಹಾನಗರ ಪಾಲಿಕೆ ವ್ಯಾಪ್ತಿಗೆ ಒಳಪಡುವ ಕೃಷಿ ಭೂಮಿಯನ್ನು ಕೃಷಿಯೇತರ ಅಥವಾ ವಾಣಿಜ್ಯ ಉದ್ದೇಶಕ್ಕೆ ಬಳಸಿಕೊಳ್ಳಲು ಪ್ರತ್ಯೇಕ ಭೂ ಪರಿವರ್ತನೆಯ ಅಗತ್ಯವಿಲ್ಲ ಎಂದು ಹೈಕೋರ್ಟ್‌ ಹೇಳಿದೆ.

ಕರ್ನಾಟಕ ಭೂ ಕಂದಾಯ ಕಾಯಿದೆ-1964ರ ಸೆಕ್ಷನ್ 95, 96, 97ರ ಪ್ರಕಾರ, ಪುರಸಭೆ, ನಗರಸಭೆ ಹಾಗೂ ಮಹಾನಗರ ಪಾಲಿಕೆ ವ್ಯಾಪ್ತಿಗೆ ಬರುವ ಜಮೀನುಗಳು ಕೃಷಿಯೇತರ ಚಟುವಟಿಕೆಗಳಿಗೆ ಒಳಪಡುತ್ತವೆ ಎಂದು ಸ್ಪಷ್ಟವಾಗಿ ಹೇಳಲಾಗಿದೆ. ಹೀಗಾಗಿ, ಆ ಜಮೀನನ್ನು ಪ್ರತ್ಯೇಕವಾಗಿ ವಾಣಿಜ್ಯ ಉದ್ದೇಶಕ್ಕೆಂದು ಪರಿವರ್ತಿಸುವ ಅಗತ್ಯವಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪುರಸಭೆ ವ್ಯಾಪ್ತಿಯ ಉದ್ಯಮಿ ಶ್ರೀಶೈಲ್ ಎಂಬುವರು ತಮ್ಮ ಪಿತ್ರಾರ್ಜಿತ ಆಸ್ತಿಯಲ್ಲಿ ಪೆಟ್ರೋಲ್ ಬಂಕ್ ತೆರೆದಿದ್ದಾರೆ. ಆ ಸಮಯದಲ್ಲಿ ಜಮೀನನ್ನು ಕೃಷಿಯೇತರ ಚಟುವಟುಕೆಗಳಿಗೆ ಬಳಕೆ ಮಾಡಲು ಜಿಲ್ಲಾಧಿಕಾರಿಗಳಿಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ಪರಿಗಣಿಸಿದ್ದ ಜಿಲ್ಲಾಧಿಕಾರಿಗಳು ಕೃಷಿಯೇತರ ಚಟುವಟಿಕೆಗಳಿಗೆ ಬಳಕೆ ಅನುಮತಿ ನೀಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪೆಟ್ರೋಲ್ ಬಂಕ್‌ ತೆರೆದು ಉಳಿದ ಜಮೀನಿನಲ್ಲಿ ವಾಣಿಜ್ಯ ಕಟ್ಟಡ ನಿರ್ಮಾಣಕ್ಕೆ ಮುಂದಾಗಿದ್ದರು. ಅದಕ್ಕಾಗಿ, ವಾಣಿಜ್ಯ ಕಟ್ಟಡಗಳಿಗೆ ನಕ್ಷೆ ಮಂಜೂರು ಮಾಡುವಂತೆ ಬೈಲಹೊಂಗಲ ಪುರಸಭೆಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಅವರ ಅರ್ಜಿಯನ್ನು 2022ರ ಅಕ್ಟೋಬರ್ 13ರಂದು ಪುರಸಭೆ ತಿರಸ್ಕರಿಸಿತ್ತು.

ಶ್ರೀಶೈಲ್ ಅವರು ಪುರಸಭೆಯ ನಡೆಯನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿರುವ ನ್ಯಾಯಮೂರ್ತಿ ಸೂರಜ್ ಗೋವಿಂದರಾಜು ಅವರಿದ್ದ ಏಕಸದಸ್ಯ ಪೀಠ, “ಭೂ ಪರಿವರ್ತನೆಯ ಅಗತ್ಯವಿಲ್ಲ” ಎಂದು ಸ್ಪಷ್ಟವಾಗಿ ಹೇಳಿದೆ.

ಈ ಸುದ್ದಿ ಓದಿದ್ದೀರಾ?: ಕೆಆರ್‌ಎಸ್‌ ಜಲಾಶಯದ 20 ಕಿ.ಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧ: ಹೈಕೋರ್ಟ್‌

ಕೃಷಿಯೇತರ ಉದ್ದೇಶಕ್ಕಾಗಿ (ಪೆಟ್ರೋಲ್ ಬಂಕ್‌) ಪರಿವರ್ತಿಸಲಾದ ಭೂಮಿಯು ಕೃಷಿಯೇತರ ವಾಣಿಜ್ಯ ಬಳಕೆಗೂ ಲಭ್ಯವಾಗುತ್ತದೆ. ಪೆಟ್ರೋಲ್ ಬಂಕ್‌ಗಾಗಿ ಭೂಮಿಯನ್ನು ಪರಿವರ್ತಿಸಿ ಜಿಲ್ಲಾಧಿಕಾರಿಗಳ ಆದೇಶಿಸಿದ್ದಾರೆ. ಆದರೆ, ಪರಿವರ್ತಿತ ಭೂಮಿಯನ್ನು ವಾಣಿಜ್ಯ ಕಟ್ಟಡ ಹಾಗೂ ಪೆಟ್ರೋಲ್ ಬಂಕ್ ನಿರ್ಮಾಣ ಸಂಬಂಧ ಪ್ರತ್ಯೇಕಿಸಿ ನೋಡಲು ಅವಕಾಶ ಇಲ್ಲ ಎಂದು ಹೈಕೋರ್ಟ್‌ ಹೇಳಿದೆ.

ಮುಂದಿನ 60 ದಿನಗಳ ಒಳಗಾಗಿ ಅರ್ಜಿದಾರರ ಆಸ್ತಿಗೆ ಸಂಬಂಧಿಸಿದಂತೆ ನಿಯಮಗಳ ಅನುಸಾರ ಕಟ್ಟಡ ನಿರ್ಮಾಣಕ್ಕೆ ಪರವಾನಗಿ ನೀಡುವಂತೆ ಪುರಸಭೆಗೆ ಹೈಕೋರ್ಟ್‌ ನಿರ್ದೇಶನ ನೀಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...