ಕೆ ಷರೀಫಾ ಅವರ ʼನೀರೊಳಗಣ ಕಿಚ್ಚುʼ ಕೃತಿಗೆ ʼಮುಸ್ಲಿಮ್ ಸಾಹಿತ್ಯ ಪ್ರಶಸ್ತಿʼ

Date:

ರಾಜ್ಯೋತ್ಸವ ಪ್ರಶಸ್ತಿ ಪುರಷ್ಕೃತೆ ಕೆ ಷರೀಫಾರವರ ʼನೀರೊಳಗಣ ಕಿಚ್ಚುʼ ಕಥಾಸಂಕಲನವು ‘ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ’ಗೆ ಆಯ್ಕೆಯಾಗಿದೆ. ಕನ್ನಡದಲ್ಲಿ ಪ್ರಕಟಿತ ಮುಸ್ಲಿಮ್ ಬರಹಗಾರರ ಅತ್ಯುತ್ತಮ ಕೃತಿಗೆ ಕರ್ನಾಟಕ ಮುಸ್ಲಿಮ್ ಲೇಖಕರ ಸಂಘವು ಪ್ರತಿ ವರ್ಷ ‘ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ’ಯನ್ನು ನೀಡುತ್ತದೆ. ಈ ಬಾರಿ, ಪ್ರಶಸ್ತಿಗೆ ಕೆ ಷರೀಫಾ ಅವರ ಕೃತಿ ಆಯ್ಕೆಯಾಗಿದೆ.

ಪ್ರಶಸ್ತಿ ನೀಡುವ ಕುರಿತು ಮುಸ್ಲಿಮ್ ಲೇಖಕರ ಸಂಘದ ಅಧ್ಯಕ್ಷ ಉಮರ್ ಯು.ಹೆಚ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ. “ಕೃಷಿ ಮಾರುಕಟ್ಟೆ ಇಲಾಖೆಯಲ್ಲಿ ಮಾರುಕಟ್ಟೆ ಅಧಿಕಾರಿಯಾಗಿ 2017ರಲ್ಲಿ ನಿವೃತ್ತಿಹೊಂದಿರುವ ಕೆ. ಷರೀಫಾ ಮುಸ್ಲಿಮ್ ಸಮುದಾಯದಿಂದ ಕನ್ನಡಕ್ಕೆ ಬಂದ (1975) ಮೊದಲ ಕವಿಯತ್ರಿ. ಕರ್ನಾಟಕ ಉರ್ದು ಸಾಹಿತ್ಯ ಅಕಾಡೆಮಿ, ಹಂಪಿ ಕನ್ನಡ ವಿವಿಯ ಸಿಂಡಿಕೇಟ್‌, ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನದ ಮಹಿಳಾ ಸಮಿತಿ (ಬೆಳಗಾಂ), ರಾಷ್ಟ್ರಕವಿ ಆಯ್ಕೆ ಸಮಿತಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದ ಪುಸ್ತಕ ಆಯ್ಕೆ ಸಮಿತಿಗಳ ಸದಸ್ಯೆಯಾಗಿ, ರಾಜ್ಯ ಬಂಡಾಯ ಸಾಹಿತ್ಯ ಸಂಘಟನೆಯ ಸಂಚಾಲಕಿಯಾಗಿ, ದೇವರಾಜ ಅರಸು ಶತಮಾನೋತ್ಸವ ಸಮಿತಿಯ ಕಾರ್ಯಕಾರಿ ಸಮಿತಿ ಸದಸ್ಯೆಯಾಗಿ ಸೇವೆ ಸಲ್ಲಿಸಿರುವ ಕೆ. ಷರೀಫಾ ಹಲವು ಪ್ರಮುಖ ಸಂಘ-ಸಂಸ್ಥೆಗಳಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿ ಕೊಂಡಿದ್ದಾರೆ” ಎಂದು ತಿಳಿಸಿದ್ದಾರೆ.

ʼಮಹಿಳೆ ಮತ್ತು ಸಮಾಜʼ, ʼಬಂಡಾಯ ಮುಸ್ಲಿಮ್‌ ಸಂವೇದನೆ, ʼಮುಸ್ಲಿಮ್‌ ಲೋಕದ ತಲ್ಲಣಗಳುʼ, ʼಬತ್ತಳಿಕೆʼ, ʼಅಮ್ಮ ಮತ್ತು ಯುದ್ಧʼ, ʼಮುಸ್ಲಿಂ ಸಂವೇದನೆಯ ಕಾವ್ಯʼ, ಮಹಿಳೆ, ʼಚಳುವಳಿ ಮತ್ತು ರಾಜಕಾರಣʼ, ಮತ್ತು ʼಹಲವು ಹೆಜ್ಜೆಗಳ ಸದ್ದುʼ ಇವು ಕೆ. ಷರೀಫಾರವರ ಪ್ರಕಟಿತ ವಿಮರ್ಶಾ ಕೃತಿಗಳು. ʼಬಿಡುಗಡೆಯ ಕವನಗಳುʼ, ʼನೂರೇನ್‌ಳ ಅಂತರಂಗʼ, ʼಪಾಂಚಾಲಿʼ, ʼಮಮ್ತಾಜಳ ಮಹಲುʼ, ʼಬುರ್ಖಾ ಪ್ಯಾರಡೈಸ್‌ʼ, ʼಸಂತ ಪಕೀರಳ ಜೋಳಿಗೆಯ ರೊಟ್ಟಿʼ ಮತ್ತು ʼಬಯಲಿಗೂ ಬಾಗಿಲುʼ ಇವರ ಪ್ರಕಟಿತ ಕವನ ಸಂಕಲನಗಳು. ʼನೌಕರರ ಮಿಲನʼ, ʼಹೊಸ ಶತಮಾನದ ಕಾವ್ಯʼ, ʼಗೀತಾ ನಾಗಭೂಷಣ ಮಹಿಳಾ ಮಾರ್ಗʼ ಮತ್ತು ʼಒಡನಾಡಿ ಅರಸುʼ ಇವರ ಪ್ರಕಟಿತ ಸಂಪಾದನಾ ಕೃತಿಗಳು. ಹಾಗೂ ʼಮುಸಿಂ ಮಹಿಳಾ ಸಂವೇದನೆʼ (ಸಂಶೋದನೆ), ʼಫೈಜ್‌ ನಾಮಾʼ (ಅನುವಾದ) ಮತ್ತು ʼಮಿರ್ಜಾ ಗಾಲಿಬ್ʼ(ವ್ಯಕ್ತಿ ಚಿತ್ರಣ) ಇವರ ಇತರ ಪ್ರಕಟಿತ ಕೃತಿಗಳು. ಕೆ. ಷರೀಫಾರವರ ಇನ್ನೂ ಆರು ಕೃತಿಗಳು ಮುದ್ರಣ ಹಂತದಲ್ಲಿದ್ದು ಕನ್ನಡ ಓದುಗರ ಕೈಸೇರಬೇಕಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇವರ ಅನೇಕ ಕವಿತೆ ಮತ್ತು ಲೇಖನಗಳು ರಾಜ್ಯದ ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜು ಮತ್ತು ಅನೇಕ ವಿವಿ ಅಧೀನದಲ್ಲಿರುವ ಪದವಿ ಕಾಲೇಜುಗಳ ಪಠ್ಯಗಳಿಗೆ ಸೇರ್ಪಡೆಯಾಗಿದ್ದು, ಕೆ. ಷರೀಫಾ ಅವರ ಸಾಹಿತ್ಯ ಕೃಷಿಯ ಬಗ್ಗೆ ಗುಲ್ಬರ್ಗಾ ಮತ್ತು ತುಮಕೂರು ವಿವಿಗಳ ವಿದ್ಯಾರ್ಥಿಗಳಿಂದ ಪಿಹೆಚ್ಡಿ ಮತ್ತು ಎಂಫಿಲ್‌ ಅಧ್ಯಯನಗಳು ನಡೆದಿವೆ. ʼವನಿತಾ ಸಾಹಿತ್ಯ ಶ್ರೀʼ, ʼಅತ್ತಿಮಬ್ಬೆʼ, ʼನಲ್ಲೂರ್‌ ಪ್ರಸಾದ್‌ʼ, ʼಅಂಕʼ, ಸಿದ್ದಲಿಂಗ ಪಟ್ಟಣ ಶೆಟ್ಟಿʼ, ʼವೀಚಿʼ, ʼಡಾ. ಅನುಪಮಾʼ, ʼಡಾ. ಗೀತಾ ದೇಸಾಯಿʼ, ʼಗಡಿನಾಡ ಗೌರವʼ, ʼನಾಡ ಪ್ರಭು ಕೆಂಪೇಗೌಡʼ, ಕವಿ ಸರ್ವಜ್ಞ ಹಾಗೂ ʼಬಸವ ಚೈತನ್ಯʼ ಮುಂತಾದ ಪ್ರಮುಖ ಪ್ರಶಸ್ತಿಗಳು ಇವರ ಸಾಹಿತ್ಯ ಸಾಧನೆಗೆ ದೊರೆತಿವೆ. ಕರ್ನಾಟಕ ಸಾಹಿತ್ಯ ಅಕಾಡೆಮಿಯು ಕೆ. ಷರೀಫಾ ಅವರ ಜೀವಮಾನದ ಸೇವೆಗಾಗಿ ಗೌರವ ಪ್ರಶಸ್ತಿ ನೀಡಿ ಆದರಿಸಿದೆ.

ದಿವಂಗತ ಯು.ಟಿ. ಫರೀದ್ ಸ್ಮರಣಾರ್ಥ ನೀಡಲಾಗುವ ʼಮುಸ್ಲಿಮ್‌ ಸಾಹಿತ್ಯ ಪ್ರಶಸ್ತಿʼಯು ಹತ್ತು ಸಾವಿರ ನಗದು ಮತ್ತು ಪ್ರಶಸ್ತಿ ಫಲಕಗಳನ್ನೊಳಗೊಂಡಿದ್ದು, ನವೆಂಬರ್‌ 23ರಂದು ಬೆಂಗಳೂರಿನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಶಸ್ತಿಗೆ 39 ಕೃತಿಗಳು ಬಂದಿದ್ದು, ಹಿರಿಯ ಚಿಂತಕ ಪ್ರೊ. ಮುಝಪ್ಫರ್‌ ಅಸಾದಿ, ಹಿರಿಯ ಸಾಹಿತಿ ಬಾನು ಮುಷ್ತಾಕ್‌ ಮತ್ತು ಪ್ರಾಧ್ಯಾಪಕ ಪ್ರೊ. ಹೈದರ್‌ ಅಲಿ ತೀರ್ಪುಗಾರರಾಗಿ ಸಹಕರಿಸಿದ್ದಾರೆ ಎಂದು ಉಮರ್ ಅವರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...