ಬಿಡಿಎ ನೂತನ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ ಎನ್‌.ಜಯರಾಮ್

Date:

ಹಿರಿಯ ಐಎಎಸ್ ಅಧಿಕಾರಿ ಎನ್.ಜಯರಾಮ್ ಅವರನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಆಯುಕ್ತ ಹುದ್ದೆಗೆ ನೇಮಿಸಿ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ.

ಬೆಂಗಳೂರು ಜಲಮಂಡಳಿ ಅಧ್ಯಕ್ಷರಾಗಿದ್ದ ಜಯರಾಮ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರ್ಯದರ್ಶಿಯೂ ಆಗಿದ್ದಾರೆ.

ಸೆಪ್ಟೆಂಬರ್ 30ರಂದು ಬಿಡಿಎ ಆಯುಕ್ತರಾಗಿದ್ದ ಕುಮಾರ ನಾಯಕ್‌ ಅವರು ನಿವೃತ್ತರಾದ ನಂತರ ಆ ಸ್ಥಾನ ಖಾಲಿಯಾಗಿತ್ತು. ಬಳಿಕ ಈ ಹುದ್ದೆಗೆ ಜಯರಾಮ್‌ ಅವರನ್ನು ನಿಯೋಜಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶ ಹೊರಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಯರಾಮ್‌ ಅವರು 2004ರ ಬ್ಯಾಚ್‌ನ ಐಎಎಸ್‌ ಅಧಿಕಾರಿಯಾಗಿದ್ದಾರೆ. ಪ್ರಸ್ತುತ ಮುಖ್ಯಮಂತ್ರಿಗಳ ಕಾರ್ಯದರ್ಶಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಬೆಂಗಳೂರು ಜಲಮಂಡಳಿಯ ಅಧ್ಯಕ್ಷ ಸ್ಥಾನದಿಂದ ಬಿಡಿಎ ಆಯುಕ್ತರ ಹುದ್ದೆಗೆ ಸರ್ಕಾರ ಅ.2ರಂದು ವರ್ಗಾವಣೆ ಮಾಡಿ ಆದೇಶ ನೀಡಿದೆ.

ಅಧಿಕಾರ ಸ್ವೀಕರಿಸಿದ ಜಯರಾಮ್ ಅವರು ಪ್ರಾಧಿಕಾರದ ಅಧಿಕಾರಿಗಳೊಡನೆ ಸಭೆ ನಡೆಸಿದರು. ಬಿಡಿಎ ಕಾರ್ಯವೈಖರಿ, ಪ್ರಸ್ತುತ ಯೋಜನೆಗಳು ಹಾಗೂ ಮುಂಬರುವ ಯೋಜನೆಗಳ ಬಗ್ಗೆ ಮಾಹಿತಿ ಪಡೆದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಬೆಳ್ಳಂಬೆಳಗ್ಗೆ ಭೀಕರ ಅಪಘಾತ; 2 ವರ್ಷದ ಮಗು ಸೇರಿ ಇಬ್ಬರು ಸಾವು

ಈ ಹಿಂದೆ ಮೈಸೂರಿನಲ್ಲಿ ಆಯುಕ್ತರಾಗಿ, ಬೆಳಗಾವಿ ಜಿಲ್ಲಾಧಿಕಾರಿಯಾಗಿ, ಕಂದಾಯ ಇಲಾಖೆಯ ಕಾರ್ಯದರ್ಶಿಯಾಗಿ ಹಾಗೂ ಇತರ ಪ್ರಮುಖ ಹುದ್ದೆಗಳಲ್ಲಿ ಅವರು ಸೇವೆ ಸಲ್ಲಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...