‘ನಮ್ಮ ಮೆಟ್ರೋ’ ಪ್ರಯಾಣ ದರ ಏರಿಕೆ | ಕೇಂದ್ರ ಸರ್ಕಾರದ ಸಮಿತಿಯಿಂದಲೇ ದರ ನಿಗದಿ: ಸಿಎಂ ಸ್ಪಷ್ಟನೆ

Date:

- 'ಬಿಜೆಪಿ ನಾಯಕರು ಯಥಾಪ್ರಕಾರ ಸುಳ್ಳು, ತಿರುಚಿದ ಮಾಹಿತಿ ಹೇಳುತ್ತಿದ್ದಾರೆ'
- 'ಜನಾಕ್ರೋಶ ಕಂಡು ಸರ್ಕಾರದ ಗೂಬೆ ಕೂರಿಸುವುದು ಆತ್ಮವಂಚಕ ನಡವಳಿಕೆ'

ದೆಹಲಿ ಮೆಟ್ರೋವನ್ನು ಹೊರತುಪಡಿಸಿ ಉಳಿದೆಲ್ಲ ರಾಜ್ಯಗಳಲ್ಲಿ ಮೊದಲ ಹಂತದ ಪ್ರಯಾಣದರವನ್ನು ಆಯಾ ರಾಜ್ಯಗಳ ಮೆಟ್ರೊ ನಿಗಮಗಳೇ ನಿಗದಿ ಪಡಿಸಿತ್ತು. ಈಗ ಪ್ರಯಾಣ ದರವನ್ನು ಕೇಂದ್ರ ಸರ್ಕಾರ ನೇಮಿಸುವ ಸಮಿತಿ ನಿಗದಿಪಡಿಸುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

‘ನಮ್ಮ ಮೆಟ್ರೋ’ ಪ್ರಯಾಣ ದರ ಹೆಚ್ಚಳ ವಿರೋಧಿಸುತ್ತಿರುವ ವಿರೋಧ ಪಕ್ಷದ ಬಿಜೆಪಿಯ ನಾಯಕರ ಆರೋಪಗಳನ್ನು ಉಲ್ಲೇಖಿಸಿ ಸ್ಪಷ್ಟೀಕರಣ ನೀಡಿರುವ ಅವರು, “ಮೆಟ್ರೋ ರೈಲ್ವೆ (ಕಾರ್ಯಾಚರಣೆ ಮತ್ತು ನಿರ್ವಹಣೆ) ಕಾಯಿದೆಯ ಸೆಕ್ಷನ್ 37ರ ಪ್ರಕಾರ ಪ್ರಯಾಣ ದರ ನಿಗದಿ ಸಮಿತಿ ನೀಡಿದ ವರದಿಯನ್ನು ಮೆಟ್ರೋ ರೈಲು ನಿಗಮಗಳು ( ಈ ಪ್ರಕರಣದಲ್ಲಿ ಬಿಎಂಆರ್ ಸಿಎಲ್ ) ಕಡ್ಡಾಯವಾಗಿ ಅನುಷ್ಠಾನಗೊಳಿಸಬೇಕಾಗಿದೆ. ಆದರೆ, ನಮ್ಮ ಮೆಟ್ರೋ ಪ್ರಯಾಣ ದರ ಹೆಚ್ಚಳ ವಿರೋಧಿಸುತ್ತಿರುವ ವಿರೋಧ ಪಕ್ಷದ ಬಿಜೆಪಿಯ ನಾಯಕರು ಯಥಾಪ್ರಕಾರ ಸುಳ್ಳು ಮತ್ತು ತಿರುಚಿದ ಮಾಹಿತಿಯನ್ನು ಬಳಸಿಕೊಂಡು ರಾಜ್ಯ ಸರ್ಕಾರದ ವಿರುದ್ಧ ಆರೋಪಗಳನ್ನು ಮಾಡುತ್ತಿದ್ದಾರೆ. ಈ ಮೂಲಕ ಸಾರ್ವಜನಿಕರ ಹಾದಿ ತಪ್ಪಿಸುತ್ತಿದ್ದಾರೆ” ಎಂದು ಕಿಡಿಕಾರಿದ್ದಾರೆ.

“ಸರ್ಕಾರದ ಯಾವುದೇ ನೀತಿ-ನಿರ್ಧಾರಗಳನ್ನು ವಿರೋಧಿಸುವ ಅಧಿಕಾರ ಸಾರ್ವಜನಿಕರಿಗೆ ಇದೆ, ಸಂವಿಧಾನಬದ್ಧವಾದ ಅವರ ಹಕ್ಕನ್ನು ನಾನು ಗೌರವಿಸುತ್ತೇನೆ. ಆದರೆ, ವಿರೋಧ ಪಕ್ಷದ ಸ‍್ಥಾನದಲ್ಲಿ ಜನ ಕೂರಿಸಿರುವ ರಾಜ್ಯದ ಬಿಜೆಪಿ ರಾಜಕೀಯ ದುರುದ್ದೇಶದಿಂದ ಸುಳ್ಳು ಮಾಹಿತಿಗಳನ್ನು ನೀಡಿ ಸಾರ್ವಜನಿಕರ ಪ್ರತಿಭಟನೆಗೆ ಕುಮ್ಮಕ್ಕು ನೀಡುತ್ತಿರುವುದು ಅಕ್ಷಮ್ಯ. ವಾಸ್ತವಾಂಶಗಳು ಬೇರೆಯೇ ಇವೆ. ಒಂದೆಡೆ ಮೆಟ್ರೋ ರೈಲು ನಿರ್ಮಾಣದ ಸಾಧನೆ ಕೇಂದ್ರದ ಬಿಜೆಪಿ ಸರ್ಕಾರದ್ದು ಎಂದು ಡಂಗುರ ಬಾರಿಸುತ್ತಿರುವ ಬಿಜೆಪಿ ನಾಯಕರು ದರ ಪರಿಷ್ಕರಣೆ ವಿರುದ್ದ ಜನಾಕ್ರೋಶ ವ್ಯಕ್ತವಾಗುತ್ತಿರುವುದನ್ನು ಕಂಡು ಅದರ ಜವಾಬ್ದಾರಿಯನ್ನು ರಾಜ್ಯ ಸರ್ಕಾರದ ಮೇಲೆ ಹೊರಿಸುತ್ತಿರುವುದು ಆತ್ಮವಂಚಕ ನಡವಳಿಕೆಯಾಗಿದೆ” ಎಂದು ವಾಗ್ದಾಳಿ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೇಂದ್ರ ಮತ್ತು ಕರ್ನಾಟಕ ಸರ್ಕಾರ ಜೊತೆಗೂಡಿ ಬೆಂಗಳೂರು ಮೆಟ್ರೋ ರೈಲು ನಿಗಮವನ್ನು ಸ್ಥಾಪಿಸಿದ್ದು, ಇದರಲ್ಲಿ ಎರಡೂ ಸರ್ಕಾರಗಳ ಸಮ (50:50) ಪಾಲುದಾರಿಕೆ ಇದೆ. ಕೇಂದ್ರ ನಗರ ಮತ್ತು ವಸತಿ ವ್ಯವಹಾರ ಇಲಾಖೆಯ ಕಾರ್ಯದರ್ಶಿಯಾಗಿರುವ ಶ್ರೀನಿವಾಸ ಕಟಿಕಿಥಲ ಅವರು ನಿಗಮದ ಈಗಿನ ಅಧ್ಯಕ್ಷರು. ವ್ಯವಸ್ಥಾಪಕ ನಿರ್ದೇಶಕ ಮತ್ತು ನಿರ್ದೇಶಕರ ಸ‍್ಥಾನದಲ್ಲಿ ಕೇಂದ್ರ ಮತ್ತು ರಾಜ್ಯದ ಅಧಿಕಾರಿಗಳಿದ್ದಾರೆ. ಇದೊಂದು ಸ್ವಾಯತ್ತ ಸಂಸ್ಥೆಯಾಗಿದ್ದು ಇದರ ಮೇಲೆ ರಾಜ್ಯ ಸರ್ಕಾರಕ್ಕೆ ಪೂರ್ಣ ನಿಯಂತ್ರಣಾಧಿಕಾರ ಇಲ್ಲ. ಉಳಿದೆಲ್ಲ ನಗರಗಳ ಮೆಟ್ರೋ ರೈಲು ನಿಗಮಗಳಂತೆ ಬೆಂಗಳೂರು ಮೆಟ್ರೊ ರೈಲು ನಿಗಮ ಕೂಡಾ ಕೇಂದ್ರ ಸರ್ಕಾರದ ಮೆಟ್ರೋ ರೈಲು (ಕಾರ್ಯಾಚರಣೆ ಮತ್ತು ನಿರ್ವಹಣೆ) ಕಾಯ್ದೆ 2002ರ ಅಡಿಯಲ್ಲಿ ಕಾರ್ಯನಿರ್ವಹಿಸಬೇಕಾಗುತ್ತದೆ” ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ‘ನಮ್ಮ ಮೆಟ್ರೋ’ದಿಂದ ಹಗಲು ದರೋಡೆ, ಪ್ರಯಾಣಿಕರಿಗೆ ಆರ್‌ ಅಶೋಕ್‌ ಗುಲಾಬಿ ಹೂ ಕೊಡುವುದು ಯಾವಾಗ?

“2017ರ ನಂತರ ಮೆಟ್ರೋ ರೈಲಿನ ಪ್ರಯಾಣ ದರ ಪರಿಷ್ಕರಣೆ ಮಾಡದೆ ಇರುವ ಕಾರಣ ದರ ಪರಿಷ್ಕರಣೆ ನಡೆಸುವಂತೆ ಬಿಎಂಆರ್‌ಸಿಎಲ್ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿತ್ತು. ಪ್ರಯಾಣ ದರ ಹೆಚ್ಚಳದ ಅಧಿಕಾರ ರಾಜ್ಯ ಸರ್ಕಾರದ ಕೈಯಲ್ಲೇ ಇದ್ದಿದ್ದರೆ ಬಿಎಂಆರ್‌ಸಿಎಲ್ ನಮಗೆ ಪತ್ರ ಬರೆಯದೆ, ಕೇಂದ್ರ ಸರ್ಕಾರಕ್ಕೆ ಯಾಕೆ ಪತ್ರ ಬರೆಯುತ್ತಿತ್ತು? ಬಿಎಂಆರ್‌ಸಿಎಲ್ ಪತ್ರಕ್ಕೆ ಪ್ರತಿಕ್ರಿಯಿಸಿದ್ದ ಕೇಂದ್ರ ಸರ್ಕಾರ ಮದ್ರಾಸ್ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಆರ್ ಥರಾನಿ ಅವರ ಅಧ್ಯಕ್ಷತೆಯಲ್ಲಿ ದರ ಪರಿಷ್ಕರಣಾ ಸಮಿತಿ ರಚಿಸಿತ್ತು, ಈ ಸಮಿತಿಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಪ್ರತಿನಿಧಿಗಳು ಸದಸ್ಯರಾಗಿದ್ದರು. 2024ರ ಸೆಪ್ಟೆಂಬರ್ 16ರಂದು ಅಧಿಕಾರ ಸ್ವೀಕರಿಸಿದ ಈ ಸಮಿತಿ ಮೂರು ತಿಂಗಳೊಳಗೆ ತನ್ನ ಶಿಫಾರಸನ್ನು ಸಲ್ಲಿಸಬೇಕೆಂದು ಕೇಂದ್ರ ಸರ್ಕಾರ ತನ್ನ ಪತ್ರದಲ್ಲಿ ತಿಳಿಸಿತ್ತು. ಮೂರು ತಿಂಗಳ ಅವಧಿಯಲ್ಲಿ ಸಮಿತಿ ಬಿಎಂಆರ್‌ಸಿಎಲ್ ಅಧಿಕಾರಿಗಳ ಜೊತೆ ಮಾತ್ರವಲ್ಲ ದೆಹಲಿ ಮತ್ತು ಚೆನೈಗಳಿಗೆ ತೆರಳಿ ಅಲ್ಲಿನ ಮೆಟ್ರೋ ಸಂಸ್ಥೆಗಳ ಅಧಿಕಾರಿಗಳ ಜೊತೆಯಲ್ಲಿ ಕೂಡಾ ಕಾರ್ಯಾಚರಣೆ ಮತ್ತು ಪ್ರಯಾಣ ದರದ ಬಗ್ಗೆ ಸಮಾಲೋಚನೆ ನಡೆಸಿತ್ತು” ಎಂದು ಹೇಳಿದ್ದಾರೆ.

“2017ರ ಜೂನ್ ನಲ್ಲಿ ಬೆಂಗಳೂರು ಮೆಟ್ರೋ ರೈಲಿಗೆ ನಿಗದಿಗೊಳಿಸಿದ್ದ ಪ್ರಯಾಣದರ, ಮೆಟ್ರೋದಲ್ಲಿ ಸಂಚರಿಸುತ್ತಿದ್ದ ಪ್ರಯಾಣಿಕರ ಅನುಭವಗಳನ್ನು ದರಪರಿಷ್ಕರಣ ಸಮಿತಿ ಕಲೆ ಹಾಕಿತ್ತು. ಇದರ ಜೊತೆಯಲ್ಲಿ ಬಿಎಂಆರ್‌ಸಿಎಲ್ ನ ಹಣಕಾಸು ಸಾಮರ್ಥ್ಯವನ್ನು ಕೂಡಾ ಸಮಿತಿ ಅಧ್ಯಯನ ಮಾಡಿ 2024ರ ಡಿಸೆಬರ್ 16ರಂದು ಸಮಿತಿ ತನ್ನ ವರದಿನ್ನು ಸಲ್ಲಿಸಿತ್ತು. 2017ರ ಜೂನ್ ತಿಂಗಳಲ್ಲಿ ಬಿಎಂಆರ್‌ಸಿಎಲ್ ಪ್ರಯಾಣ ದರ ನಿಗದಿಪಡಿಸಿದಾಗ ಮೆಟ್ರೋ ಪ್ರಥಮ ಹಂತದ 42.30 ಕಿ.ಮೀ ಮಾರ್ಗ ಮಾತ್ರ ಪೂರ್ಣಗೊಂಡಿತ್ತು. ಮೆಟ್ರೋ ಎರಡನೇ ಹಂತ ಭಾಗಶಃ ಪೂರ್ಣಗೊಂಡ ನಂತರ ಈಗ ಮೆಟ್ರೋ ಮಾರ್ಗ 42.30 ಕಿ.ಮೀಟರ್ ಗೆ ವಿಸ್ತರಣೆ ಗೊಂಡಿದೆ. ಮೆಟ್ರೋ 2, 2ಎ, ಮತ್ತು 2ಬಿ ಮಾರ್ಗಗಳು (96.60 ಕಿ.ಮೀ.) 2026ರ ಡಿಸೆಂಬರ್ ತಿಂಗಳಲ್ಲಿ ಪೂರ್ಣಗೊಳ್ಳುವ ನಿರೀಕ್ಷೆ ಇದ್ದು ಆಗ ಬೆಂಗಳೂರು ಮೆಟ್ರೋ ಮಾರ್ಗ 175,55 ಕಿ.ಮೀ.ಗೆ ವಿಸ್ತರಣೆಯಾಗಲಿದೆ. ಬೆಂಗಳೂರು ಮೆಟ್ರೋ ರೈಲಿಗೆ ಸಂಬಂಧಿಸಿದ ಈ ಎಲ್ಲ ಅಂಶಗಳನ್ನು ಗಮನಕ್ಕೆ ತೆಗೆದುಕೊಂಡು ಚರ್ಚೆ ನಡೆಸಿದ ನಂತರ ಹತ್ತು ಅಧ್ಯಾಯಗಳಲ್ಲಿ ತನ್ನ ವರದಿ ನೀಡಿದೆ. ಸಮಿತಿ ದೇಶದ ಉಳಿದ ಮೆಟ್ರೋ ರೈಲಿನ ಪ್ರಯಾಣದರವನ್ನು ಅಧ್ಯಯನ ಮಾಡಿದೆ. ಸದ್ಯ ಬೆಂಗಳೂರು ಮೆಟ್ರೋ ಪ್ರಯಾಣ ದರ ಕನಿಷ್ಠ 10 ರೂ. ಮತ್ತು ಗರಿಷ್ಠ 60 ರೂ. ಆಗಿದೆ. ಮುಂಬೈ ಮೆಟ್ರೋ ರೈಲಿನ ಕನಿಷ್ಠ ಪ್ರಯಾಣದರ 10 ರೂ. ಮತ್ತು ಗರಿಷ್ಠ ಪ್ರಯಾಣ ದರ 80 ರೂ. ಆಗಿದೆ” ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...