ಕಳಂಕಿತ ನೈಸ್ ಕಂಪನಿಗೆ ಯಾವುದೇ ಕಾಮಗಾರಿ ನೀಡದಂತೆ ಸರ್ಕಾರಕ್ಕೆ ನೈಸ್ ಭೂ ಸಂತ್ರಸ್ತ ರೈತರ ಆಗ್ರಹ

Date:

ಬಿಎಂಐಸಿ-ನೈಸ್ ಕಂಪನಿ ಕುರಿತು ಮುಂದಿನ ನಿರ್ಧಾರ ಕೈಗೊಳ್ಳಲು ರಾಜ್ಯ ಸರ್ಕಾರ ಸಲಹಾ ಸಮಿತಿ ನೇಮಕದ ಹಿನ್ನೆಲೆಯಲ್ಲಿ ಕಳಂಕಿತ ನೈಸ್ ಕಂಪನಿಗೆ ಯಾವುದೇ ರೀತಿಯ ಕಾಮಗಾರಿ ನಡೆಸದಂತೆ ನಿರ್ಬಂಧ ವಿಧಿಸಲು ಆಗ್ರಹಿಸಿ, ನೈಸ್ ಆಕ್ರಮ -ಹಗರಣ ಕುರಿತ ಟಿ ಬಿ ಜಯಚಂದ್ರ ನೇತೃತ್ವದ ಸದನ ಸಮಿತಿ ಶಿಪಾರಸ್ಸುಗಳನ್ನು ಜಾರಿಗೊಳಿಸಲು ಒತ್ತಾಯ ಸೇರಿದಂತೆ ಹಲವಾರು ಹಕ್ಕೊತ್ತಾಯಗಳ ಈಡೇರಿಕೆಗೆ ಆಗ್ರಹಿಸಿ ಇಂದು ಬೆಂಗಳೂರಿನ ಪ್ರೀಡಂ ಪಾರ್ಕಿನಲ್ಲಿ ನೈಸ್ ಭೂ ಸಂತ್ರಸ್ತ ನೂರಾರು ರೈತರ ಬೃಹತ್ ಪ್ರತಿಭಟನೆ ನಡೆಸಿದರು.

ಕರ್ನಾಟಕ ಪ್ರಾಂತ ರೈತ ಸಂಘ (ಕೆಆರ್‌ಪಿಎಸ್)ಹಾಗೂ ನೈಸ್ ಭೂ ಸಂತ್ರಸ್ತ ರೈತರ ಹೋರಾಟ ಸಮಿತಿ ಸಂಘಟಿಸಿದ್ದ ಈ ಪ್ರತಿಭಟನೆಗೆ ಆಗಮಿಸಿದ್ದ ಲೋಕೋಪಯೋಗಿ ಸಚಿವರ ಪರವಾಗಿ ಲೋಕೋಪಯೋಗಿ ಇಲಾಖೆ ಮುಖ್ಯ ಇಂಜಿನಿಯರ್ ಮಂಜಪ್ಪ ಅವರು ಮನವಿ ಸ್ವೀಕರಿಸಿ ಮಾನ್ಯ ಮಂತ್ರಿಗಳ ಅಧ್ಯಕ್ಷತೆಯಲ್ಲಿ ಸಭೆ ಕರೆದು ರೈತರ ಆಹವಾಲುಗಳನ್ನು ಪರಿಹರಿಸಲಾಗುವುದು ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಸದನದ ಘನತೆಯನ್ನು ಮಣ್ಣುಪಾಲು ಮಾಡಿದ ಮಹನೀಯರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರತಿಭಟನೆಯನ್ನು ಉದ್ದೇಶಿಸಿ ಕರ್ನಾಟಕ ಪ್ರಾಂತ ರೈತ ಸಂಘ (ಕೆಆರ್‌ಪಿಎಸ್) ರಾಜ್ಯಾಧ್ಯಕ್ಷ ಯು ಬಸವರಾಜ, ರಾಜ್ಯ ಪ್ರಧಾನ ಕಾರ್ಯದರ್ಶಿ ಟಿ ಯಶವಂತ, ರಾಜ್ಯ ಸಹ ಕಾರ್ಯದರ್ಶಿ ಎನ್ ಪ್ರಭಾ ಬೆಳವಂಗಲ, ರಾಜ್ಯ ಸಮಿತಿ ಸದಸ್ಯೆ ಗಾಯಿತ್ರಿ, ಸಿಐಟಿಯು ರಾಜ್ಯ ಕಾರ್ಯದರ್ಶಿ ಮಂಜುನಾಥ್, ಮಹಾಂತೇಶ್, ನೈಸ್ ಭೂ ಸಂತ್ರಸ್ತ ರೈತರ ಹೋರಾಟ ಸಮಿತಿ ಅಧ್ಯಕ್ಷ ಎನ್ ವೆಂಕಟಾಚಲಯ್ಯ ಮಾತಾನಾಡಿದರು.

ನೈಸ್ ಭೂ ಸಂತ್ರಸ್ತ ರೈತರ ಹೋರಾಟ ಸಮಿತಿಯ ಮುಖಂಡರುಗಳಾದ ವೆಂಕಟಾಚಲಪ್ಪ, ಚಂದ್ರಶೇಖರ್, ಸಣ್ಣರಂಗಯ್ಯ, ಗೋಪಾಲ ರೆಡ್ಡಿ, ಹನುಮಂತಪ್ಪ, ಕೃಷ್ಣಪ್ಪ, ಹನುಮಯ್ಯ, ಸುಜಾತ, ರಾಮಯ್ಯ, ಬೆಟ್ಟಪ್ಪ, ನಾರಾಯಣಪ್ಪ, ರಂಗಸ್ವಾಮಿ, ವೆಂಕಟೇಶಪ್ಪ, ಪವನ್, ಅರುಣಮ್ಮ, ಚಂದ್ರಶೇಖರ್, ಕುಂಟೀರಪ್ಪ, ಸತ್ಯನಾರಾಯಣ ಮುಂತಾದವರು ಪ್ರತಿಭಟನೆ ನೇತೃತ್ವ ವಹಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...