(VIDEO)ಬೆಂಗಳೂರು | ಸಾಲ ವಾಪಸ್‌ ಕೇಳಿದ್ದಕ್ಕೆ ಮನೆಗೇ ಬೆಂಕಿಯಿಟ್ಟ

Date:

ಕೊಟ್ಟ ಸಾಲ ವಾಪಸ್‌ ಕೇಳಿದ್ದಕ್ಕೆ ವ್ಯಕ್ತಿಯೊಬ್ಬ ಮನೆಗೆ ಬೆಂಕಿ ಹಚ್ಚಿದ ಘಟನೆ ವಿವೇಕ್ ನಗರದಲ್ಲಿ ನಡೆದಿದೆ. ಜು.1 ರಂದು ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ಬೆಂಕಿ ಹಚ್ಚಿದ ಆರೋಪಿಯನ್ನು ಸುಬ್ರಮಣಿ ಎಂದು ಗುರುತಿಸಲಾಗಿದೆ. ವೆಂಕಟರಮಣಿ ಎಂಬವರ ಬಳಿ ಆರೋಪಿಯ ಸಹೋದರಿ ತನ್ನ ಮಗಳ ಮದುವೆಗಾಗಿ, 5 ಲಕ್ಷ ರೂ. ಹಣ ಪಡೆದಿದ್ದಳು. ಹಣ ಪಡೆದು ಹಲವು ವರ್ಷಗಳಾದರೂ ಹಣ ವಾಪಸ್‌ ನೀಡಿರಲಿಲ್ಲ. ಇದರಿಂದ ವೆಂಕಟರಮಣಿ ಹಣ ವಾಪಸ್‌ ಕೊಡುವಂತೆ ಕೇಳಿದ್ದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಅಪಾಯಕಾರಿ ಸೈಬರ್ ಅಪರಾಧ ಕುರಿತು ಜನ ಜಾಗೃತರಾಗಬೇಕಿದೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಣ ವಾಪಸ್‌ ಕೇಳಿದ್ದಕ್ಕೆ ಪಾರ್ವತಿ ಹಾಗೂ ಆಕೆಯ ಮಗಳು ವೆಂಕಟರಮಣಿಯವರ ಬಳಿ ಗಲಾಟೆ ಮಾಡಿದ್ದಾರೆ. ಇನ್ನೂ ಇದೇ ವಿಚಾರಕ್ಕೆ ಸಿಟ್ಟಾದ ಆರೋಪಿ, ವೆಂಕಟರಮಣಿ ಮನೆಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ್ದಾನೆ. ಅದೃಷ್ಟವಶಾತ್‌ ಮನೆಯಲ್ಲಿದ್ದವರು ಪಾರಾಗಿದ್ದಾರೆ. ಆರೋಪಿಯ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಈ ಸಂಬಂಧ ವೆಂಕಟರಮಣಿ ಪುತ್ರ ವಿವೇಕ್‌ ನಗರ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಈ ಘಟನೆಯಲ್ಲಿ ಮನೆಯ ಮುಂಭಾಗ ಮತ್ತು ಕಿಟಕಿ ಸುಟ್ಟು ಭಸ್ಮವಾಗಿದೆ. ವಿವೇಕನಗರ ಪೊಲೀಸ್ ಠಾಣೆಯಲ್ಲಿ ಸತೀಶ್ ದೂರು ನೀಡಿದ್ದು, ಎಫ್ಐಆರ್ ದಾಖಲಿಸಲಾಗಿದೆ. ಸುಬ್ರಮಣಿ, ಪಾರ್ವತಿ, ಮಹಾಲಕ್ಷ್ಮಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...