ನಮ್ಮ ಮೆಟ್ರೋ | ರಿಯಾಯಿತಿ ದರದಲ್ಲಿ ನ.16 ರಿಂದ ಮೊಬೈಲ್ ಕ್ಯೂಆರ್ ಗ್ರೂಪ್ ಟಿಕೆಟ್‌ ಪರಿಚಯ

Date:

ವಿಶ್ವದಲ್ಲಿ ವಾಹನ ಸಂಚಾರ ದಟ್ಟಣೆಗೆ ರಾಜಧಾನಿ ಬೆಂಗಳೂರು ಕುಖ್ಯಾತಿ ಗಳಿಸಿದೆ. ಸದ್ಯ ನಗರದಲ್ಲಿ ಉಂಟಾಗುವ ವಾಹನ ಸಂಚಾರ ದಟ್ಟಣೆಯನ್ನು ನಿಭಾಯಿಸುವಲ್ಲಿ ‘ನಮ್ಮ ಮೆಟ್ರೋ’ ಪಾತ್ರ ಬಹುದೊಡ್ಡದಾಗಿದೆ. ನಿತ್ಯ ಮೆಟ್ರೋದಲ್ಲಿ 7 ಲಕ್ಷಕ್ಕೂ ಹೆಚ್ಚು ಜನ ಸಂಚರಿಸುತ್ತಿದ್ದಾರೆ. ಹೆಚ್ಚು ಜನಸಂದಣಿ ಇರುವ ನಮ್ಮ ಮೆಟ್ರೋದಲ್ಲಿ ಟಿಕೆಟ್‌ ಖರೀದಿಗಾಗಿ ಜನರು ಸರತಿ ಸಾಲಿನಲ್ಲಿ ನಿಲ್ಲುವುದನ್ನು ತಡೆಯಲು ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್‌) ಮುಂದಾಗಿದ್ದು, ಟೋಕನ್‌ ದರಕ್ಕಿಂತ ಶೇ.5 ರಿಯಾಯಿತಿಯಲ್ಲಿ ನವೆಂಬರ್ 16 ರಿಂದ ಮೊಬೈಲ್ ಕ್ಯೂಆರ್ ಗ್ರೂಪ್ ಟಿಕೆಟ್‌ಗಳ ಪರಿಚಯ ಮಾಡಲಿದೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಬಿಎಂಆರ್‌ಸಿಎಲ್, “ಪ್ರಸ್ತುತ ಮೊಬೈಲ್ ಕ್ಯೂಆರ್ ಟಿಕೆಟ್‌ಗಳನ್ನು ಮೊಬೈಲ್ ಅಪ್ಲಿಕೇಶನ್‌ಗಳ ಮೂಲಕ (ನಮ್ಮ ಮೆಟ್ರೋ, ಪೇಟಿಎಂ, ವಾಟ್ಸ್‌ಆಪ್ ಮತ್ತು ಯಾತ್ರಾ) ಒಬ್ಬ ಪ್ರಯಾಣಿಕನಿಗೆ ಒಂದು ಪ್ರಯಾಣಕ್ಕೆ ನೀಡಲಾಗುತ್ತಿದೆ” ಎಂದು ಹೇಳಿದೆ.

“ಆದರೆ, ಪ್ರಯಾಣಿಕರ ಬೇಡಿಕೆಯ ಆಧಾರದ ಮೇಲೆ ನ.16 ರಿಂದ ಜಾರಿಗೆ ಬರುವಂತೆ ಒಮ್ಮೆ ಆರು ಜನರ ಕುಟುಂಬ/ಗುಂಪು ಪ್ರಯಾಣಿಸಲು ಅನುಕೂಲವಾಗುವಂತೆ ಮೊಬೈಲ್ ಕ್ಯೂಆರ್ ಟಿಕೆಟ್‌ಗಳನ್ನು ಪರಿಚಯಿಸುತ್ತಿದೆ. ಮೊಬೈಲ್ ಕ್ಯೂಆರ್ ಟಿಕೆಟ್‌ಗಳು ಟೋಕನ್ ದರಕ್ಕಿಂತ ಶೇ.5 ರಿಯಾಯಿತಿಯನ್ನು ಹೊಂದಿರುತ್ತವೆ” ಎಂದು ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ಸೌಲಭ್ಯವನ್ನು ಬಳಸುವ ಪ್ರಯಾಣಿಕರು ಪ್ರಯಾಣಿಕರ ಸಂಖ್ಯೆ, ಎನ್‌ಕ್ರಿಪ್ಟ್ ಮಾಡಿದ ಒಂದು ಕ್ಯೂಆರ್ ಟಿಕೆಟ್ ಅನ್ನು ಸ್ವೀಕರಿಸುತ್ತಾರೆ. ಬಳಕೆಗಾಗಿ, ಈ ಕ್ಯೂಆರ್ ಟಿಕೆಟ್ ಅನ್ನು ಗುಂಪಿನ ಪ್ರತಿ ಪ್ರಯಾಣಿಕರ ಪ್ರವೇಶ ಮತ್ತು ನಿರ್ಗಮನಕ್ಕಾಗಿ ಎಫ್ ಸಿ ಗೇಟ್‌ಗಳಲ್ಲಿ ಸ್ಕ್ಯಾನ್ ಮಾಡಬೇಕು” ಎಂದು ಹೇಳಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು ಗ್ರಾಮಾಂತರ | ಎರಡು ಬೈಕ್ ಮುಖಾಮುಖಿ ಢಿಕ್ಕಿ; ಇಬ್ಬರು ಸಾವು

“ಟಿಕೆಟ್ ಕೌಂಟರ್‌ಗಳಲ್ಲಿ ಟೋಕನ್‌ಗಳನ್ನು ಖರೀದಿಸಲು ಸರತಿ ಸಾಲಿನಲ್ಲಿ ನಿಲ್ಲುವುದನ್ನು ತಪ್ಪಿಸಲು, ಪಯಾಣಿಕರು ತಮ್ಮ ಅನೂಕೂಲಕ್ಕೆ ತಕ್ಕಂತೆ ಮನೆ/ಕಚೇರಿಯಿಂದ ಮುಂಗಡವಾಗಿ ಮೊಬೈಲ್ ಕ್ಯೂಆರ್ ಟಿಕೆಟ್‌ಗಳನ್ನು ಪಡೆಯಬಹುದು” ಎಂದು ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...