ನಮ್ಮ ಮೆಟ್ರೋ | 100 ದಿನದಲ್ಲಿ 718 ಮೀಟರ್ ಸುರಂಗ ಕೊರೆದು ಹೊರಬಂದ ‘ಟಿಬಿಎಂ ರುದ್ರ’

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವಾಹನ ಸಂಚಾರ ದಟ್ಟಣೆಗೆ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್‌) ಮದ್ದಾಗಿ ಕಾರ್ಯ ನಿರ್ವಹಿಸುತ್ತಿದೆ. ನಮ್ಮ ಮೆಟ್ರೋ ಎರಡನೇ ಹಂತದ ಕಾಮಗಾರಿ ಭಾಗವಾಗಿ ಇದೀಗ 718 ಮೀಟರ್ ಸುರಂಗ ಮಾರ್ಗ ಕೊರೆದು ರುದ್ರ ಹೆಸರಿನ ಸುರಂಗ ಕೊರೆಯುವ ಯಂತ್ರ ಯಶಸ್ವಿಯಾಗಿ ಹೊರಬಂದಿದೆ.

ನಮ್ಮ ಮೆಟ್ರೋ ಎರಡನೇ ಹಂತದ ಕಾಮಗಾರಿ ನಡೆಯುತ್ತಿದೆ. ರುದ್ರ ಎಂಬ ಹೆಸರಿನ ಟಿಬಿಎಂ ಲಕ್ಕಸಂದ್ರ ನಿಲ್ದಾಣದಿಂದ ಜು.14 ರಂದು ಸುರಂಗ ಕೊರೆಯುವ ಕಾಮಗಾರಿ ಆರಂಭಿಸಿತ್ತು. ಲಕ್ಕಸಂದ್ರ ನಿಲ್ದಾಣದಿಂದ ಲ್ಯಾಂಗ್ಫೋರ್ಡ್ಟೌನ್ ನಿಲ್ದಾಣದವರೆಗೆ ಬರೋಬ್ಬರಿ 718 ಮೀಟರ್ ಸುರಂಗ ಕೊರೆದು ಯಶಸ್ವಿಯಾಗಿ ಅ.26 ರಂದು ಹೊರಬಂದಿದೆ ಎಂದು ಬಿಎಂಆರ್‌ಸಿಎಲ್‌ ಮಾಹಿತಿ ನೀಡಿದೆ.

ರುದ್ರ ಟಿಬಿಎಂ ಬರೋಬ್ಬರಿ 100 ದಿನಗಳ ಕಾಲ ಕಾರ್ಯಾಚರಣೆ ನಡೆಸಿ ಸಂಪೂರ್ಣವಾಗಿ ಸುರಂಗ ಕೊರೆದು ಹೊರಬಂದಿದೆ. ಲಕ್ಕಸಂದ್ರದಿಂದ ಲ್ಯಾಂಗ್ ಫೋರ್ಡ್ ವರೆಗೆ ಎರಡನೇ ಹಂತದ ಮೆಟ್ರೋ ಸುರಂಗ ಮಾರ್ಗ ಕಾಮಗಾರಿ ನಡೆಯುತ್ತಿದೆ. ಎರಡನೇ ಹಂತದ ಕಾಮಗಾರಿಯಲ್ಲಿ ಇದು ಏಳನೇ ಟಿಬಿಎಂ ಕಾರ್ಯಾಚರಣೆಯಾಗಿದೆ ಎಂದು ಮಾಹಿತಿ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಮಿಕಾ ಹೆಸರಿನ ಸುರಂಗ ಕೊರೆಯುವ ಯಂತ್ರ ಕಳೆದ ತಿಂಗಳು ಆಗಸ್ಟ್ನಲ್ಲಿ ಕಾಳೇನ ಅಗ್ರಹಾರನಾಗವಾರ ಗುಲಾಬಿ ಮಾರ್ಗದಲ್ಲಿ 721 ಮೀಟರ್ಮೆಟ್ರೋ ಸುರಂಗ ಕೊರೆದು ಹೊರ ಬಂದಿತ್ತು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ರೈಡ್ ಕ್ಯಾನ್ಸಲ್ ಆಗದ ರ‍್ಯಾಪಿಡೋದಿಂದ ‘ಆಟೋ ಪ್ಲಸ್’ ಹೊಸ ಸೇವೆ ಆರಂಭ

ಹಿಂದೆ ಟಿಬಿಎಂ ಯಂತ್ರವು ಸೌತ್ ರ‍್ಯಾಂಪ್ ಮತ್ತು ಡೈರಿ ಸರ್ಕಲ್ ನಿಲ್ದಾಣದ ಮಧ್ಯೆ ಒಟ್ಟು 613.2 ಮೀಟರ್ ಸುರಂಗ ಕೊರೆದಿತ್ತು. ನಂತರ ಡೇರಿ ವೃತ್ತದ ನಿಲ್ದಾಣದಿಂದ ಲಕ್ಕಸಂದ್ರ ಮೆಟ್ರೋ ನಿಲ್ದಾಣದ ಮಧ್ಯದವರೆಗಿನ 746.2 ಮೀಟರ್ಉದ್ದದ ಸುರಂಗ ಕೊರೆದು ಟಿಬಿಎಂ ಯಶಸ್ವಿಯಾಗಿ ಹೊರಬಂದಿತ್ತು ಎಂದು ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...