ಶೀಘ್ರದಲ್ಲೇ ಶುಚಿತ್ವದ ಇತರ ನೌಕರರ ಖಾಯಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ

Date:

ಪೌರಕಾರ್ಮಿಕರನ್ನು ಪ್ರಸ್ತುತ ಖಾಯಂ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಸುಮಾರು 9000 ಸಂಖ್ಯೆಯಷ್ಟಿರಬಹುದಾದ ವಾಹನಚಾಲಕರು, ಸಹಾಯಕರು ಹಾಗೂ ಆಪರೇಟರ್ಸ್‌ಗಳನ್ನೂ ಕೂಡ ಖಾಯಂ ಮಾಡಲಾಗುವುದು. ಶುಚಿತ್ವದ ಕಾಯಕದಲ್ಲಿ ತೊಡಗಿರುವವರನ್ನು ಖಾಯಂ ನೇಮಕಾತಿ ಮಾಡಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು ಬಿಬಿಎಂಪಿ ವತಿಯಿಂದ ಆಯೋಜಿಸಲಾಗಿದ್ದ ಪೌರ ಕಾರ್ಮಿಕರ ದಿನಾಚರಣೆ ಹಾಗೂ ಪೌರ ಕಾರ್ಮಿಕರಿಗೆ ನೇಮಕಾತಿ ಪತ್ರ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಪೌರ ಕಾರ್ಮಿಕರಿಗೆ ನೇಮಕಾತಿ ಪತ್ರ ವಿತರಿಸಿನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಮದ್ಯವರ್ತಿಗಳ ಹಾವಳಿಯಿಂದ ಪೌರಕಾರ್ಮಿಕರು ಮುಕ್ತ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಾನು ಹಿಂದೆ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ, ಪೌರಕಾರ್ಮಿಕರನ್ನು ಗುತ್ತಿಗೆದಾರರು ಶೋಷಣೆ ಮಾಡುತ್ತಿದ್ದು, ನ್ಯಾಯಯುತವಾದ ಸಂಬಳ ಕೊಡದೇ ಇದ್ದುದ್ದನ್ನು ಗಮನಿಸಿದ್ದೆ. ಅದಕ್ಕಾಗಿ ಶೋಷಣೆಗೊಳಗಾದ ಪೌರಕಾರ್ಮಿಕರ ಸಹಾಯಕ್ಕಾಗಿ ಕನಿಷ್ಟ ವೇತನ ಕಾಯ್ದೆ ಪ್ರಕಾರ ದೊರೆಯಬೇಕಾದ ಕನಿಷ್ಟ ಸಂಬಳವನ್ನು ಕಡ್ಡಾಯವಾಗಿ ದೊರೆಯುವ ವ್ಯವಸ್ಥೆಯನ್ನು ಮಾಡಿದೆ. ಮೊದಲು 7000 ರೂ. ದೊರೆಯುತ್ತಿದ್ದ ಸಂಬಳವನ್ನು 17000 ಕ್ಕೆ ಹೆಚ್ಚಿಸಿ, ನೇರವಾಗಿ ಬ್ಯಾಂಕ್ ಖಾತೆಗೆ ಪಾವತಿಯಾಗುವ ವ್ಯವಸ್ಥೆಯನ್ನು ಮಾಡಲಾಯಿತು. ಈ ರೀತಿ ಪೌರಕಾರ್ಮಿಕರಿಗೆ ಮಧ್ಯವರ್ತಿಗಳ ಹಾವಳಿಯಿಂದ ಮುಕ್ತಗೊಳಿಸಲಾಯಿತು ಎಂದರು.

ಪೌರಕಾರ್ಮಿಕರ ಬೇಡಿಕೆ ಈಡೇರಿಸಿದ್ದು ಕಾಂಗ್ರೆಸ್ ಸರ್ಕಾರ

ವಿರೋಧ ಪಕ್ಷದ ನಾಯಕನಾಗಿದ್ದ ಸಂದರ್ಭದಲ್ಲಿ ಪೌರಕಾರ್ಮಿಕರ ಬಹುದಿನಗಳ ಬೇಡಿಕೆಯಾಗಿದ್ದ ಖಾಯಂ ನೇಮಕಾತಿಯನ್ನು ಬೆಂಬಲಿಸಿ, ಆಗಿನ ಸರ್ಕಾರ ಖಾಯಂ ನೇಮಕಾತಿ ಬೇಡಿಕೆಯನ್ನು ಈಡೇರಿಸದಿದ್ದಲ್ಲಿ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗ ಪೌರ ಕಾರ್ಮಿಕರ ಈ ಬೇಡಿಕೆಯನ್ನು ಪೂರೈಸುವುದಾಗಿ ನೀಡಲಾಗಿದ್ದ ಭರವಸೆಯನ್ನು ಇಂದು ಈಡೇರಿಸಲಾಗಿದೆ. ಇದರಿಂದ 4ನೇ ದರ್ಜೆಯ ಪೌರಕಾರ್ಮಿಕನ ವೇತನ, ಅವರ ಖಾತೆಗೆ ನೇರವಾಗಿ 39000 ರೂ.ಗಳು ಪಾವತಿಯಾಗಲಿದೆ ಎಂದು ಮುಖ್ಯಮಂತ್ರಿಗಳು ವಿವರಿಸಿದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮರ್ಯಾದೆಗೇಡು ಹತ್ಯೆಗಳು ನಿಲ್ಲಬೇಕಿದ್ದರೆ ಜಾತಿವಿನಾಶ ಆಗಲೇಬೇಕು

ಕಾಯಕದಲ್ಲಿ ಮೇಲು-ಕೀಳು ಇಲ್ಲ

ಶುಚಿತ್ವದಲ್ಲಿ ದೈವತ್ವವನ್ನು ಕಾಣಬೇಕು ಎಂದು ಮಹಾತ್ಮಾಗಾಂಧೀಜಿಯವರು ನುಡಿದಿದ್ದರು. ಪರಿಸರದ ಸ್ವಚ್ಛತೆಯನ್ನು ಕಾಪಾಡುವುದು ಶ್ರೇಷ್ಠವಾದ ಕೆಲಸ. ಬಸವಣ್ಣನವರು ಕಾಯಕವೇ ಕೈಲಾಸ ಎಂದು ತಿಳಿಸಿದ್ದು, ಯಾವುದೇ ಕೆಲಸದಲ್ಲಿ ಮೇಲು ಕೀಳೆಂಬುದು ಇಲ್ಲ ಎಂದರು.

ಪೌರಕಾರ್ಮಿಕರ ಮಕ್ಕಳು ವಿದ್ಯಾವಂತರಾಗಿ ಸಮಾಜದ ಮುಖ್ಯವಾಹಿನಿಗೆ ಬರುವಂತಾಬೇಕು

1000 ಪೌರಕಾರ್ಮಿಕರನ್ನು ವಿದೇಶಕ್ಕೆ ಕಳಿಸುವ ಯೋಜನೆ ಸೇರಿದಂತೆ ಹಲವಾರು ಕಲ್ಯಾಣ ಯೋಜನೆಗಳನ್ನು ಪೌರಕಾರ್ಮಿಕರಿಗಾಗಿ ಹಮ್ಮಿಕೊಳ್ಳಲಾಗಿದೆ. ಪೌರಕಾರ್ಮಿಕರು, ಅವರ ಕುಟುಂಬದವರೂ ಮುಖ್ಯವಾಹಿನಿಗೆ ಬರಬೇಕು, ತನ್ಮೂಲಕ ಸಮಸಮಾಜವನ್ನು ನಿರ್ಮಿಸುವ ಉದ್ದೇಶ ಸರ್ಕಾರದ್ದಾಗಿದೆ. ರಾಜ್ಯದ ಎಲ್ಲ ವರ್ಗದ ಜನರಿಗೆ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸಮಾನತೆ ದೊರೆಯುವಂತಾಗಬೇಕು. ಪೌರಕಾರ್ಮಿಕ ವರ್ಗದ ಕಲ್ಯಾಣಕ್ಕಾಗಿ ಶ್ರಮಿಸುತ್ತಿರುವ ಸರ್ಕಾರಕ್ಕೆ ಬೆಂಬಲವಾಗಿ ನಿಲ್ಲಬೇಕೆಂದು ಕೋರಿದರು. ಪೌರಕಾರ್ಮಿಕರ ಮಕ್ಕಳು ವಿದ್ಯಾವಂತರಾಗಿ ಸಮಾಜದ ಮುಖ್ಯವಾಹಿನಿಗೆ ಬರುವಂತಾಗಬೇಕು. ಸಾರ್ವಜನಿಕರೂ ತಮ್ಮ ಪರಿಸರದ ಸ್ವಚ್ಛತೆ ಬಗ್ಗೆ ಸ್ವಯಂಪ್ರೇರಣೆಯಿಂದ ಗಮನಹರಿಸಬೇಕು ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...