ಸೌಜನ್ಯ ಪರ ಸಭೆಯನ್ನೂ ನಡೆಸುವಂತಿಲ್ಲ ಎಂದ ಪೊಲೀಸರು: ಸಭೆ ನಡೆದೇ ತೀರುತ್ತದೆಂದ ಸಂಘಟಕರು

Date:

ಹೈಕೋರ್ಟ್ ಆದೇಶವನ್ನು ತಿರುಚಿ ಸೌಜನ್ಯ ಪರ ಹೋರಾಟವನ್ನು ನಿಲ್ಲಿಸಲು ಹೊರಟ ಪೊಲೀಸರ ವಿರುದ್ಧ ‘ಸಮಾನ ಮನಸ್ಕರ ವೇದಿಕೆ’ ಮುಖಂಡರು ಆಕ್ರೋಶ ವ್ಯಕ್ರಪಡಿಸಿದ್ದು, ತಾವು ಇಂದು (ಮಾರ್ಚ್‌ 18) ಸಂಜೆ 5 ಗಂಟೆಗೆ ಬೆಂಗಳೂರಿನ ಶೇಷಾದ್ರಿಪುರದ ಎಐಟಿಯುಸಿ ಸಭಾಂಗಣದಲ್ಲಿ ಸಭೆ ನಡದೇ ತೀರುತ್ತೇವೆ ಎಂದು ಹೇಳಿದ್ದಾರೆ.

ಕರ್ನಾಟಕದಲ್ಲಿ ಫ್ಯೂಡಲ್ ಅಧೀನದ ಪೊಲೀಸ್ ವ್ಯವಸ್ಥೆ ಜಾರಿಯಲ್ಲಿದೆಯೇ ? ಹೈಕೋರ್ಟ್ ಆದೇಶವನ್ನು ತಿರುಚಿ ಸೌಜನ್ಯ ಪರ ಹೋರಾಟವನ್ನು ನಿಲ್ಲಿಸಲು ಪೊಲೀಸರು ರಾತ್ರಿ ಹಗಲು ಶ್ರಮಿಸುತ್ತಿರುವುದೇಕೆ ? ಕಚೇರಿಯೊಳಗೆ ಸಮಾಲೋಚನಾ ಸಭೆ/ದಿಕ್ಸೂಚಿ ಸಭೆ ನಡೆಸುವಂತಿಲ್ಲವೇ ಎಂದು ವೇದಿಕೆಯ ನಾಯಕರು ಪ್ರಶ್ನಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮುಸ್ಲಿಮರಿಗೆ ಗುತ್ತಿಗೆಯಲ್ಲಿ ಮೀಸಲಾತಿ; ಬಿಜೆಪಿ ವಿರೋಧವೇ ಅಸಾಂವಿಧಾನಿಕ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಾಳೆ ಮನೆಯೊಳಗೂ ಮನೆ ಮಂದಿಯ ಜೊತೆಗೂ ಸೌಜನ್ಯ ಬಗ್ಗೆ ಮಾತನಾಡಬಾರದು ಎಂದು ಪೊಲೀಸರು ನೋಟಿಸ್ ನೀಡಬಹುದೇ ? ಯಾರದ್ದೇ ವಿರುದ್ದ ಅವಹೇಳನಕಾರಿಯಾಗಿ ಮಾತನಾಡಿದರೆ ಪೊಲೀಸರು ಕ್ರಮ ತೆಗೆದುಕೊಳ್ಳಬಹುದೇ ವಿನಃ ಸಮಾಲೋಚನಾ ಸಭೆಗಳ ಮೇಲಲ್ಲ. ಹಾಗಾಗಿ ಕಾನೂನು ತಜ್ಞರು ನಮಗೆ ನೀಡಿದ ವ್ಯಾಖ್ಯಾನದಂತೆ ಮಾ.18 ರಂದು ಮಂಗಳವಾರ ಸಂಜೆ ಸಭೆ ನಡೆಸಲಿದ್ದೇವೆ. ಸಾಹಿತಿ-ಚಿಂತಕ- ಹೋರಾಟಗಾರರ ದಿಕ್ಸೂಚಿ ಸಭೆ ಸಾಂಗವಾಗಿ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ಸೌಜನ್ಯ ಸಭೆ ನಡೆಸಬಾರದೆಂದು ಸಾರಿಗೆ ನೌಕರರ ಹಿತ ರಕ್ಷಣಾ ವೇದಿಕೆಯ ವಿನಯ್‌ ಶ್ರೀನಿವಾಸ್, ಕರ್ನಾಟಕ ರಣಧೀರ ಪಡೆಯ ಭೈರಪ್ಪ ಹರೀಶ್ ಕುಮಾರ್, ವಕೀಲರಾದ ಮೈತ್ರಿ, ಎಐಟಿಯುಸಿ ಅಧ್ಯಕ್ಷರಾದ ಆನಂದ್‌ ಸುಬ್ಬರಾವ್‌ ಹಾಗೂ ಎಐಟಿಯುಸಿನ ವಿಜಯ್‌ ಭಾಸ್ಕರ್‌ ಅವರಿಗೆ ಸಭೆ ನಡೆಸಬಾರದೆಂದು ಶೇಷಾದ್ರಿಪುರಂ ಪೊಲೀಸ್‌ ಇನ್ಸ್‌ಪೆಕ್ಟ್‌ರ್‌ ಅವರು ನೋಟಿಸ್‌ ನೀಡಿದ್ದರು.

ಸಂಘಟಕರು ‘ಸೌಜನ್ಯ ನ್ಯಾಯಕ್ಕೆ ಆಗ್ರಹಿಸಿ, ಊಳಿಗೆಮಾನ್ಯ ದರ್ಪದ ವಿರುದ್ಧ ಸಾಹಿತಿ ಚಿಂತಕ ಹೋರಾಟದ ದಿಕ್ಕೂಚಿ ಸಭೆ ಹಮ್ಮಿಕೊಂಡಿದ್ದು, ಪ್ರಸ್ತುತ ಸಭೆಯಲ್ಲಿ ಸಮಾಜದಲ್ಲಿ ಸಂವಿಧಾನ ವಿರೋಧಿ ಚಟುವಟಿಕೆ ಹೆಚ್ಚಾಗುತ್ತಿರುವ ಕುರಿತು ಮತ್ತು ಸೌಜನ್ಯ ಪ್ರಕರಣದ ಕಾನೂನು ಹೋರಾಟದ ರೂಪುರೇಷೆ ಚರ್ಚೆಯಾಗಲಿದೆ. ಸಭೆಯಲ್ಲಿ 40-50 ಜನರು ಭಾಗವಹಿಸಲಿದ್ದಾರೆ ಎಂಬ ಮಾಹಿತಿ ಇದೆ. ಹೈಕೋರ್ಟ್ ಆದೇಶದಂತೆ ಪ್ರತಿಭಟನೆ/ಹೋರಾಟಕ್ಕೆ ಅವಕಾಶವಿಲ್ಲ. ಒಂದು ವೇಳೆ ಕಾನೂನು ಉಲ್ಲಂಘನೆ ಮಾಡಿ ಪ್ರತಿಭಟನೆ ಮಾಡಿದ್ದಲ್ಲಿ, ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ನೋಟಿಸ್‌ನಲ್ಲಿ ತಿಳಿಸಲಾಗಿದೆ.

image 46 3
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...