ರಸ್ತೆ ಗುಂಡಿಗಳಿಂದ ಹಿಂಸೆ: 50 ಲಕ್ಷ ಪರಿಹಾರ ಕೇಳಿ ಬಿಬಿಎಂಪಿಗೆ ನೋಟಿಸ್ ಕೊಟ್ಟ ಮಹಿಳೆ

Date:

ಬೆಂಗಳೂರಿನಲ್ಲಿ ರಸ್ತೆ ಗುಂಡಿಗಳ ಹಾವಳಿ ಹೆಚ್ಚುತ್ತಲೇ ಇದೆ. ನಗರ ಬಹುಸಂಖ್ಯಾತ ರಸ್ತೆಗಳು ಗುಂಡಿ ಬಿದ್ದಿವೆ. ರಸ್ತೆಗುಂಡಿಗಳಿಂದಾಗಿ ಅಪಘಾತಗಳು ಸಂಭವಿಸುತ್ತಿದ್ದು, ವಾಹನ ಸವಾರರು ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಹಲವರು ಅಂಗ ವೈಕಲ್ಯಕ್ಕೆ ತುತ್ತಾಗಿದ್ದಾರೆ. ದಿನನಿತ್ಯ ಸಂಚರಿಸುವ ಸವಾರರು ರಸ್ತೆಗುಂಡಿಗಳಿಂದಾಗಿ ದೈಹಿಕ ಬೇನೆ, ಮಾನಸಿಕ‌ ಕಿರಿಕಿರಿ ಅನುಭವಿಸಿದ್ದಾರೆ.

ಆ ರೀತಿಯಲ್ಲಿ ರಸ್ತೆಗುಂಡಿಗಳಿಂದ ಬಸವಳಿದ ಬೆಂಗಳೂರಿನ ನಿವಾಸಿ ಮಹಿಳೆಯೊಬ್ಬರು ಬಿಬಿಎಂಪಿಗೆ ಲೀಗಲ್ ನೋಟಿಸ್ ಕಳಿಸಿದ್ದಾರೆ. ರಸ್ತೆಗುಂಡಿಗಳಿಂದ ತಾವು ಅನುಭವಿಸಿದ ಯಾತನೆಗೆ ಪರಿಹಾರವಾಗಿ 50 ಲಕ್ಷ ರೂ. ನೀಡಬೇಕೆಂದು ಕೇಳಿದ್ದಾರೆ. ಪರಿಹಾರ ನೀಡಲು‌15 ದಿನಗಳ ಗಡುವು ನೀಡಿದ್ದಾರೆ.

ಬೆಂಗಳೂರಿನ ರಿಚ್ಯಂಡ್ ಟೌನ್ ನಿವಾಸಿ ದಿವ್ಯ ಕಿರಣ್ ಅವರು ತಮ್ಮ ವಕೀಲ ಕೆ.ವಿ ಲವೀನ್ ಮೂಲಕ ಮೇ 14 ರಂದು ಬಿಬಿಎಂಪಿಗೆ ನೋಟಿಸ್ ಕಳಿಸಿದ್ದಾರೆ. “ಬೆಂಗಳೂರು ನಿವಾಸಿಗಳು ಹೆಚ್ಚು ತೆರಿಗೆ ಪಾವತಿಸುತ್ತಿದ್ದರೂ, ಉತ್ತಮ ಮೂಲಭೂತ ಸೌಲಭ್ಯಗಳುದೊರೆಯುತ್ತಿಲ್ಲ. ರಸ್ತೆ ಸೇರಿದಂತೆ ಮೂಲಭೂತ ಸೌಯರ್ಕಗಳನ್ನು ಉತ್ತಮವಾಗಿ ನಿರ್ವಹಿಸುವಲ್ಲಿ ಬಿಬಿಎಂಪಿ ವಿಫಲವಾಗಿದೆ. ನಗರದಲ್ಲಿ ರಸ್ತೆ ಸರಿ ಇಲ್ಲದ ಕಾರಣ ಮಾನಸಿಕವಾಗಿ ತೊಂದರೆ ಅನುಭವಿಸುತ್ತಿದ್ದೇನೆ. ದೈಹಿಕ ಆರೋಗ್ಯ ಹದಗೆಟ್ಟಿದೆ, ಮಾನಸಿಕವಾಗಿ ತೊಂದರೆಗೆ ಒಳಗಾಗಿದ್ದೇನೆ. ಪರಿಣಾಮ, ವೈದ್ಯಕೀಯ ವೆಚ್ಚ ಹೆಚ್ಚಾಗಿದೆ. ವೈದ್ಯಕೀಯ ವೆಚ್ಚ ಮತ್ತು‌ ಮಾನಸಿಕ‌ ಹಿಂಸೆ ಆನುಭವಿಸಿರುವುದಕ್ಕೆ ಬಿಬಿಎಂಪಿ ಪರಿಹಾರ ನೀಡಬೇಕು” ಎಂದು ಒತ್ತಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಸ್ತೆಗಳನ್ನು ನಿರ್ವಹಿಸುವಲ್ಲಿ ಬಿಬಿಎಂಪಿಯ ವೈಫಲ್ಯ ಎದ್ದುಕಾಣುತ್ತಿದೆ. ರಸ್ತೆಗಳನ್ನು ಸರಿಯಾಗಿ ನಿರ್ವಹಿಸದ ಕಾರಣ ಅನಾರೋಗ್ಯಕ್ಕೆ ತುತ್ತಾಗಿದ್ದೇನೆ. ತೀವ್ರ ನೋವಿನಿಂದಾಗಿ ಚಿಕಿತ್ಸೆಗಾಗಿ ಐದು ಮೂಳೆ ತಜ್ಞರನ್ನು ಭೇಟಿ ಮಾಡಿದ್ದೇನೆ. ಜೊತೆಗೆ, ಹಲವಾರು ಔಷಧಿಗಳು ಮತ್ತು ನೋವು ನಿವಾರಕಗಳನ್ನು ಖರೀದಿಸಿದ್ದೇನೆ. ರಾತ್ರಿಯೆಲ್ಲ ನೋವಿನಿಂದ ಕಣ್ಣೀರು ಹಾಕಿದ್ದೇನೆ, ನಿದ್ರೆಯಿಲ್ಲದೆ ಬಳಲಿದ್ದೇನೆ, ಆತಂಕ ಮತ್ತು ಮಾನಸಿಕ ಯಾತನೆಯನ್ನು ಅನುಭವಿಸಿದ್ದೇನೆ. ಇವೆಲದಲವೂ ನನ್ನ ದೈನಂದಿನ ಕಾರ್ಯನಿರ್ವಹಣೆಯ ಮೇಲೆ ತೀವ್ರ ಪರಿಣಾಮ ಬೀರಿವೆ” ಎಂದು ಹೇಳಿದ್ದಾರೆ.

“ಪರಿಹಾರ ನೀಡಲು 15 ದಿನಗಳ ಒಳಗೆ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು. ಇದು ಕೇವಲ ವೈಯಕ್ತಿಕ ಹೋರಾಟವಲ್ಲ, ಸಾಮಾಜಿಕ ಜವಾಬ್ದಾರಿಯ ಹೋರಾಟ” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...