ಶನಿವಾರ ಮತ್ತು ಭಾನುವಾರ ರಾಜಧಾನಿಯಲ್ಲಿ ಪ್ರಧಾನಿ ಮೋದಿ ರೋಡ್ ಶೋ

Date:

  • ಒಂದು ದಿನದ ರೋಡ್‌ ಶೋ ಎರಡು ದಿನಕ್ಕೆ ವಿಸ್ತರಣೆ
  • ಮೇ 6, 7ರಂದು ಸಾರ್ವಜನಿಕರ ವಾಹನ ಸಂಚಾರಕ್ಕೆ ನಿರ್ಬಂಧ

ರಾಜ್ಯದಲ್ಲಿ 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆ ಇನ್ನೇನು ಕೆಲವೇ ದಿನಗಳಲ್ಲಿ ನಡೆಯಲಿದ್ದು, ರಾಜಕೀಯ ಪಕ್ಷಗಳ ಘಟಾನುಘಟಿ ನಾಯಕರುಗಳು ಪ್ರಚಾರಕ್ಕೆಂದು ಅಖಾಡಕ್ಕೆ ಇಳಿದಿದ್ದಾರೆ. ಬಿಜೆಪಿ ಮತ್ತೊಮ್ಮೆ ಅಧಿಕಾರದ ಚುಕ್ಕಾಣಿ ಹಿಡಿಬೇಕೆಂದು ಹವಣಿಸುತ್ತಿದ್ದು, ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾರೀ ರೋಡ್‌ ಶೋ ನಡೆಸುತ್ತಿದ್ದಾರೆ. ಸದ್ಯ ಒಂದು ದಿನಕ್ಕೆ ಸೀಮಿತವಾಗಿದ್ದ ರೋಡ್‌ ಶೋ ಅನ್ನು ಎರಡು ದಿನಕ್ಕೆ ವಿಸ್ತರಣೆ ಮಾಡಿದ್ದಾರೆ.

ಬುಧವಾರ ನಡೆಸಿದ ಸುದ್ದಿಗೋಷ್ಠಿಯಲ್ಲಿ ಸಂಸದ ಪಿ.ಸಿ.ಮೋಹನ್ ಅವರು, “ಮೇ 6ರಂದು ‘ನಮ್ಮ ಕರ್ನಾಟಕ ಯಾತ್ರೆ’ ಹೆಸರಿನಡಿ ಮೋದಿ ಬೃಹತ್ ರೋಡ್ ಶೋ ನಡೆಸಲಿದ್ದಾರೆ” ಎಂದು ಮಾಹಿತಿ ನೀಡಿದ್ದರು. ಇದೀಗ ಒಂದು ದಿನದ ರೋಡ್‌ ಶೋ ಎರಡು ದಿನಕ್ಕೆ ವಿಸ್ತರಣೆಯಾಗಿದೆ.

ಮೋದಿ ರೋಡ್‌ ಶೋಗೆ ಮಳೆ ಅಡ್ಡಿಯಾಗುವ ಸಾಧ್ಯತೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೇ 6ರಂದು ಒಂದು ದಿನ ಮಾತ್ರ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನಲ್ಲಿ ಒಟ್ಟು 38 ಕಿ.ಮೀ. ದೂರ ಬೃಹತ್‌ ರೋಡ್‌ ಶೋ ಮಾಡಲಿದ್ದಾರೆ ಎಂದು ಪಕ್ಷದ ಮುಖಂಡರು ಅಧಿಕೃತವಾಗಿ ತಿಳಿಸಿದ್ದರು. ಆದರೆ, ಶನಿವಾರ ಸಾಯಂಕಾಲ ರೋಡ್‌ ಶೋ ವೇಳೆ ಮಳೆಯಾಗುವ ಮುನ್ಸೂಚನೆ ಹಿನ್ನಲೆ, ರೋಡ್‌ ಶೋಗೆ ಮಳೆ ಅಡ್ಡಿಪಡಿಸಬಹುದೆಂದು ಶನಿವಾರ ಸಂಜೆ ನಿಗದಿಯಾಗಿದ್ದ ರೋಡ್​ ಶೋ ಅನ್ನು ಭಾನುವಾರ ಬೆಳಗ್ಗೆಗೆ ನಿಗದಿ ಮಾಡಲಾಗಿದೆ.

‘ನಮ್ಮ ಕರ್ನಾಟಕ ಯಾತ್ರೆ’ ಹೆಸರಿನಡಿ ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 29ರಿಂದ ರೋಡ್‌ ಶೋ ಆರಂಭಿಸಿದ್ದು, ಇದು ಮೇ 7ರವರೆಗೂ ನಡೆಯಲಿದೆ.

ಮೇ 6 ಮತ್ತು 7 ರಂದು 28 ವಿಧಾನಸಭಾ ಕ್ಷೇತ್ರಗಳನ್ನು ಪ್ರತಿನಿಧಿಸುವ ರಾಜಧಾನಿ ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬೃಹತ್‌ ರೋಡ್‌ ಶೋ ನಡೆಸಲಿದ್ದಾರೆ. ಈ ವೇಳೆ, ತಮ್ಮ ಅಭ್ಯರ್ಥಿಗಳನ್ನು ಪ್ರತಿನಿಧಿಸುವ ಮೂಲಕ ಮತಯಾಚನೆ ಮಾಡಲಿದ್ದಾರೆ.

ಮೇ 6ರಂದು ಬೆಳಿಗ್ಗೆ ಪ್ರಧಾನಿಯವರ ರೋಡ್‌ ಶೋ

ಪ್ರಧಾನಿ ನರೇಂದ್ರ ಮೋದಿ ಅವರ ಶನಿವಾರದ ರೋಡ್‌ ಶೋ ಮಹದೇವಪುರ, ಕೆ.ಆರ್.ಪುರ, ಸಿ.ವಿ.ರಾಮನ್ ನಗರ, ಶಿವಾಜಿನಗರ, ಶಾಂತಿನಗರ ಸೇರಿದಂತೆ ಒಟ್ಟು ಐದು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ನಡೆಯಲಿದೆ.

ಬೆಳಿಗ್ಗೆ 10 ಗಂಟೆಯಿಂದ 1 ಗಂಟೆಯವರೆಗೂ ಹಳೆ ವಿಮಾನ ನಿಲ್ದಾಣ ಜಂಕ್ಷನ್‌ ಬಳಿಯ ಸುರಂಜನ್‌ದಾಸ್‌ ರಸ್ತೆ, ಬೆಮಲ್‌ ಕಾರ್ಖಾನೆ ಜಂಕ್ಷನ್‌, ತಿಪ್ಪಸಂದ್ರ ಮುಖ್ಯ ರಸ್ತೆ, ಎಚ್‌ಎಎಲ್‌ 2ನೇ ಹಂತದ 80 ಅಡಿ ಜಂಕ್ಷನ್‌, ಸಾಯಿ ರಸ್ತೆ ಜಂಕ್ಷನ್‌, ಇಂದಿರಾನಗರ, ಚಿನ್ಮಯ ಮಿಷನ್‌ ಆಸ್ಪತ್ರೆ ರಸ್ತೆ, ಹಳೆ ಮದ್ರಾಸ್‌ ರಸ್ತೆಯ ಸ್ವಾಮಿ ವಿವೇಕಾನಂದ ರಸ್ತೆ, ಟ್ರಿನಿಟಿ ವೃತ್ತ, ಎಂ.ಜಿ.ರಸ್ತೆ, ಬ್ರಿಗೇಡ್‌ ರಸ್ತೆಗಳಲ್ಲಿ ರೋಡ್‌ ಶೋ ನಡೆಯಲಿದೆ.

ಈ ಸುದ್ದಿ ಓದಿದ್ದೀರಾ? ರಾಜಧಾನಿಯಲ್ಲಿ ಮೇ 6ರಂದು 36.6 ಕಿ.ಮೀ ಮೋದಿ ರೋಡ್‌ ಶೋ

ಮೇ7ರಂದು ಬೆಳಗ್ಗೆ ರೋಡ್ ಶೋ ಸಾಗುವ ಮಾರ್ಗ

ಶನಿವಾರ ಸಂಜೆ ನಿಗದಿಯಾಗಿದ್ದ ರೋಡ್‌ ಶೋ ಭಾನುವಾರ ಬೆಳಗ್ಗೆ ನಡೆಯಲಿದೆ. ಬೆಂಗಳೂರು ದಕ್ಷಿಣ, ಬೊಮ್ಮನಹಳ್ಳಿ, ಜಯನಗರ, ಪದ್ಮನಾಭನಗರ, ಬಸವನಗುಡಿ, ಚಿಕ್ಕಪೇಟೆ, ಚಾಮರಾಜಪೇಟೆ, ಗಾಂಧಿನಗರ, ಮಹಾಲಕ್ಷ್ಮಿ ಲೇಔಟ್, ವಿಜಯನಗರ, ಗೋವಿಂದರಾಜನಗರ, ರಾಜಾಜಿನಗರ, ಮಲ್ಲೇಶ್ವರಂ ಸೇರಿದಂತೆ ಒಟ್ಟು 13 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಈ ರೋಡ್‌ ಶೋ ನಡೆಯಲಿದೆ.

ಬೆಳಿಗ್ಗೆ 10 ಗಂಟೆಯಿಂದ 1 ಗಂಟೆಯವರೆಗೂ ಜೆ.ಪಿ.ನಗರದ ಆರ್‌ಬಿಐನಿಂದ ಪ್ರಾರಂಭವಾಗಿ ಬೊಮ್ಮನಹಳ್ಳಿ, ಜೆ.ಪಿನಗರ, ಜಯನಗರ, ಅರಬಿಂದೊ ಮಾರ್ಗ, ಕೂಲ್‌ ಜಾಯಿಂಟ್‌, ಮಯ್ಯಾಸ್‌, ಕರಿಸಂದ್ರ, ಸೌತ್‌ ಎಂಡ್‌ ಸರ್ಕಲ್‌, ನೆಟ್ಕಲ್ಲಪ್ಪ ಸರ್ಕಲ್‌, ಎನ್‌.ಆರ್‌.ಕಾಲೋನಿ, ಬಸವನಗುಡಿ, ರಾಮಕೃಷ್ಣ ಆಶ್ರಮ, ಉಮಾ ಥಿಯೇಟರ್‌, ಟಿ.ಆರ್‌.ಮಿಲ್‌, ಸಿರ್ಸಿ ಸರ್ಕಲ್, ಈಟಾ ಮಾಲ್‌, ಮಾಗಡಿ ರಸ್ತೆ, ಬಸವೇಶ್ವರ ನಗರ, ವೆಸ್ಟ್‌ ಆಫ್‌ ಕಾರ್ಡ್‌ ರೋಡ್‌, ಮೋದಿ ಆಸ್ಪತ್ರೆ, ನವರಂಗ್‌ ಸರ್ಕಲ್‌, ಸಂಪಿಗೆ ರಸ್ತೆ, ಮಲ್ಲೇಶ್ವರಂ, ಮಾರಮ್ಮ ದೇವಸ್ಥಾನ ಬಳಿ ರೋಡ್‌ ಶೋ ಅಂತ್ಯವಾಗಲಿದೆ.

ಮೇ6 ಹಾಗೂ 7ರಂದು ಬೆಳಗ್ಗೆ ನಡೆಯಲಿರುವ ಪ್ರಧಾನಮಂತ್ರಿ ರೋಡ್‌ ಶೋ ವೇಳೆ ಈ ಮಾರ್ಗದಲ್ಲಿ ಸಾರ್ವಜನಿಕರ ವಾಹನ ಸಂಚಾರಕ್ಕೆ ನಿರ್ಬಂಧವಿರಲಿದೆ. ವಾಹನಗಳ ಸಂಚಾರಕ್ಕೆ ಬದಲಿ ಮಾರ್ಗ ಸೂಚಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...