ಅಕ್ಕಿ ಕೊರತೆ ನೀಗಿಸಲು ಪಂಜಾಬ್ ರಾಜ್ಯ ಸಿದ್ಧವಿದೆ: ಆಪ್ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ

Date:

  • ರಾಜ್ಯದ ಬಡ ಜನತೆಯ ಸಂಕಷ್ಟವನ್ನು ನಿವಾರಿಸುವುದು ನಮ್ಮ ಪಕ್ಷದ ಗುರಿ
  • ಕೇಂದ್ರ ಸರ್ಕಾರದ ಧೋರಣೆ ಬಡವರ ವಿರೋಧಿ. ಇದು ದುಃಖದ ಸಂಗತಿ

ರಾಜ್ಯದಲ್ಲಿ ಅನ್ನಭಾಗ್ಯ ಯೋಜನೆಗೆ ತಲೆದೋರಿರುವ ಅಕ್ಕಿ ಕೊರತೆಯ ಸಮಸ್ಯೆಯನ್ನು ನಿವಾರಿಸಲು ಪಂಜಾಬ್‌ ಸರ್ಕಾರ ಸಿದ್ಧವಿದೆ. ಕೊರತೆಯಾಗಿರುವ ಹೆಚ್ಚುವರಿ ಅಕ್ಕಿಯನ್ನು ಪಂಜಾಬ್‌ನಿಂದ ಪಡೆದುಕೊಂಡು ಸಂಕಷ್ಟವನ್ನು ಬಗೆಹರಿಸಿಕೊಳ್ಳಲು ಮುಂದಾಗಬೇಕು ಎಂದು ಆಪ್ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಹೇಳಿದರು.

ಈ ಬಗ್ಗೆ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಈಗಾಗಲೇ ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪಮುಖ್ಯಮಂತ್ರಿ ಡಿಕೆಶಿ ಹಾಗೂ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆಯಲಾಗಿದೆ. ಪಂಜಾಬ್ ಮುಖ್ಯಮಂತ್ರಿ ಭಗವಂತ ಮಾನ್ ಅವರೊಂದಿಗೆ ನಾನು ಭಾನುವಾರ ಸಂಭಾಷಣೆ ನಡೆಸಿದ್ದೇನೆ. ಇದಕ್ಕೆ ಪಂಜಾಬ್ ಮುಖ್ಯಮಂತ್ರಿ ಸಂಪೂರ್ಣ ಸಹಾಯ ಹಸ್ತ ನೀಡಲು ತಾತ್ವಿಕವಾಗಿ ಸಿದ್ದರಿದ್ದೇವೆ ಎಂದು ಹೇಳಿದ್ದಾರೆ. ಹಾಗಾಗಿ, ರಾಜ್ಯದ ಮುಖ್ಯಮಂತ್ರಿಗಳು ಕೂಡಲೇ ಪಂಜಾಬ್ ಮುಖ್ಯಮಂತ್ರಿಗಳೊಂದಿಗೆ ಮಾತುಕತೆಯನ್ನು ನಡೆಸಬೇಕು. ಇದಕ್ಕೆ ಬೇಕಾಗಿರುವ ಸಂಪೂರ್ಣ ತಾಂತ್ರಿಕ ಬೆಂಬಲವನ್ನು ನಾವು ನೀಡಲು ಸಿದ್ಧರಿದ್ದೇವೆ” ಎಂದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ಕೆಲವೇ ಗಂಟೆಗಳಲ್ಲಿ ಸ್ಥಗಿತ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಯಾವುದೇ ಪೂರ್ವಸಿದ್ಧತೆಗಳಿಲ್ಲದೆ, ಆಮ್ ಆದ್ಮಿ ಪಕ್ಷದ ಕಾರ್ಯಕ್ರಮಗಳನ್ನು ಸಂಪೂರ್ಣ ನಕಲು ಮಾಡಿ ಕೇವಲ ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಹಲವು ತರಾತುರಿ ಗ್ಯಾರಂಟಿಗಳನ್ನು ಘೋಷಿಸಿ ಇಂದು ಅಧಿಕಾರಕ್ಕೆ ಬಂದಿದೆ. ಈ ಅರೆಬೆಂದ ಗ್ಯಾರಂಟಿಗಳಿಂದಾಗಿ ರಾಜ್ಯದ ಬಡ ಜನತೆಯನ್ನು ಇಕ್ಕಟ್ಟಿಗೆ ಸಿಲುಕಿಸುತ್ತಿರುವ ಈ ಸಂದರ್ಭದಲ್ಲಿ ನಾವುಗಳು ಯಾವುದೇ ರಾಜಕೀಯ ಕುಹಕಕ್ಕೆ ಕೈ ಹಾಕುವುದಿಲ್ಲ. ಈಗ ತಲೆದೋರಿರುವ ರಾಜ್ಯದ ಬಡ ಜನತೆಯ ಸಂಕಷ್ಟವನ್ನು ನಿವಾರಿಸುವುದು ನಮ್ಮ ಪಕ್ಷದ ಗುರಿ. ಕೇಂದ್ರದ ಬಿಜೆಪಿ ಸರ್ಕಾರದ ಧೋರಣೆ ಬಡವರ ವಿರೋಧಿಯಾಗಿದೆ. ಇದು ದುಃಖದ ಸಂಗತಿ” ಎಂದು ಖಂಡಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...