ʼಪಾಸ್ ವಿತೌಟ್ ಹಿಂದಿ ಕಾನೂನುʼ ಕುರಿತು ಜಾಗೃತಿಗೆ ಮುಂದಾದ ಕನ್ನಡಪರ ಸಂಘಟನೆಗಳು

Date:

ಕರ್ನಾಟಕ ಶಾಲಾ ಶಿಕ್ಷಣದಲ್ಲಿ ʼಪಾಸ್ ವಿತೌಟ್ ಹಿಂದಿ ಕಾನೂನುʼ ಜಾರಿಗೆ ತರಲು ಕನ್ನಡ ಪರ ಸಂಘಟನೆಗಳು ನಾಲ್ಕನೇ ದಿನದ ಸಭೆಯನ್ನು ನಯನ ಸಭಾಂಗಣದಲ್ಲಿ ನಡೆಸಿದರು.

ಹಿಂದಿ ವಿಷಯವನ್ನು ಶಾಲಾ ಶಿಕ್ಷಣದಲ್ಲಿ ಅನವಶ್ಯಕವಾಗಿ ಹೇರಿಕೆ ಮಾಡಿ, ಕಡ್ಡಾಯವಾಗಿ ಪಾಸು ಮಾಡಬೇಕೆಂಬ ಕಾನೂನು ಮಾಡಿದ ಪರಿಣಾಮ ಕರ್ನಾಟಕದಲ್ಲಿ ಪ್ರತಿವರ್ಷ ಒಂದು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಿಂದಿ ವಿಷಯದಲ್ಲಿ ಅನುತ್ತೀರ್ಣರಾಗುತ್ತಿದ್ದಾರೆ. ಅವರಲ್ಲಿ ಸಾಕಷ್ಟು ವಿದ್ಯಾರ್ಥಿಗಳು ಉನ್ನತ ಶಿಕ್ಷಣ ವ್ಯಾಸಂಗದಿಂದ ವಂಚಿತರಾಗುತ್ತಿದ್ದಾರೆ. ಈ ಕಾಲಮಾನದಲ್ಲಿ ಎಜುಕೇಶನ್ ಡ್ರಾಪೌಟ್ ಆಗಿ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುವುದು ಕಷ್ಟಕರ. ಅವರ ಜೀವನ ಸುಸ್ಥಿತಿಗೆ ಬರಲು ಸಾಧ್ಯವಿಲ್ಲ. ಮುಂದಿನ ದಿನಗಳಲ್ಲಿ ಇಂತಹ ವಿದ್ಯಾರ್ಥಿಗಳು ಜಾತಿ ಮತದ ರಾಜಕೀಯಕ್ಕೆ ಬಲಿಯಾಗುತ್ತಾರೆ. ನೆಲದ ನುಡಿಯಾಗಿ ಕನ್ನಡ ಮತ್ತು ಸಂಪರ್ಕ ನುಡಿಯಾಗಿ ಇಂಗ್ಲೀಷನ್ನು ಕಲಿಸುವ ಎರಡು ನುಡಿ ಶಿಕ್ಷಣ ಪದ್ಧತಿ ಜಾರಿಯಾಗಬೇಕು. ಸದ್ಯದ ಪರಿಸ್ಥಿತಿಯಲ್ಲಿ ಮಾರ್ಚ್ 30ನೇ ತಾರೀಕಿನಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಮಂಡಳಿ ಹಿಂದಿ ಪರೀಕ್ಷೆ ನಡೆಸುತ್ತದೆ. ಹಾಗಾಗಿ ಸಾಮಾಜಿಕವಾಗಿ ಜಾಗೃತರಾಗಿ ಸರ್ಕಾರದ ಮೇಲೆ ಒತ್ತಡ ಹೇರಿ ಪಾಸ್ ವಿಥೌಟ್ ಹಿಂದಿ ಕಾನೂನು ಜಾರಿ ಮಾಡಿಸಬೇಕು. ರಾಜ್ಯ ಮಕ್ಕಳಿಗೆ ಹಿಂದಿ ಹೇರಿಕೆಯಿಂದ ಆಗುತ್ತಿರುವ ಅನ್ಯಾಯವನ್ನು ತಡೆಯಬೇಕಿದೆ ಎಂಬ ಅಭಿಪ್ರಾಯವನ್ನು ಪತ್ರಕರ್ತ ಪಾರ್ವತೀಶ್ ವ್ಯಕ್ತಪಡಿಸಿದರು.

WhatsApp Image 2026 03 01 at 11.59.23 AM

ಪ್ರಸ್ತುತದಲ್ಲಿ ಹಿಂದಿ ಹೇರಿಕೆ ತಡೆಯುವುದು ಮತ್ತು ಶಾಲಾ ಪಠ್ಯಕ್ರಮದಲ್ಲಿ ಹಿಂದಿ ತೆಗೆಸುವುದು ಮುಖ್ಯ ಆದ್ಯತೆ ಆಗಬೇಕು. ಹಿಂದಿ ಹೇರಿಕೆ ಎಲ್ಲ ಮಟ್ಟದಲ್ಲಿಯೂ ಆಗುತ್ತಿದೆ. ಹಿಂದಿ ಅನಾವಶ್ಯಕವಾಗಿ ಹೇರಿಕೆ ಮಾಡಿ ಕನ್ನಡ ಮಕ್ಕಳಿಗೆ ಶಿಕ್ಷಣವನ್ನು ಭಾರಗೊಳಿಸುವ ಕೆಲಸ ರಾಜ್ಯ ಸರ್ಕಾರದಿಂದ ಮತ್ತು ಒಕ್ಕೂಟ ಸರ್ಕಾರದಿಂದ ನಡೆಯುತ್ತಿದೆ. ನಮ್ಮ ಮಕ್ಕಳು ಹಿಂದಿ ಕಲಿತು ನಾರ್ತ್ ಇಂಡಿಯಾಗೆ ಹೋಗುತ್ತಿಲ್ಲ, ನಾರ್ತ್ ಇಂಡಿಯಾದವರೇ ಕರ್ನಾಟಕಕ್ಕೆ ಅತಿಯಾಗಿ ವಲಸೆ ಬರುತ್ತಿದ್ದಾರೆ. ವಲಸಿಗರು ಕನ್ನಡ ಕಲಿಯದೇ ಹಿಂದಿ ಹೇರಿಕೆಯ ಜೊತೆ ದಬ್ಬಾಳಿಕೆಯನ್ನು ಸಹ ಮಾಡುತ್ತಿದ್ದಾರೆ. ಇವುಗಳನ್ನು ತಡೆಯಲು ಮೊದಲ ಹಂತವಾಗಿ ಕರ್ನಾಟಕ ಶಾಲಾ ಶಿಕ್ಷಣದಲ್ಲಿ ಹಿಂದಿ ವಿಷಯವನ್ನು ತೆಗೆಸಬೇಕು ಅದಕ್ಕೆ ಸಂಬಂಧಪಟ್ಟಂತೆ ಈ ವರ್ಷ ಹಿಂದಿ ವಿಥೌಟ್ ಪಾಸ್ ಕಾನೂನು ಜಾರಿ ಮಾಡಿಸುವುದು ಅತ್ಯವಶ್ಯಕ ಎಂದು ನಾವು ದ್ರಾವಿಡ ಕನ್ನಡಿಗರು ಚಳುವಳಿಯ ಮುಖಂಡರಾದ ಅಭಿ ಒಕ್ಕಲಿಗ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಬೆಂಗಳೂರು | ಇಂಗು ಗುಂಡಿ ಸ್ವಚ್ಛತೆ ವೇಳೆ ಉಸಿರುಗಟ್ಟಿ ಮೂವರ ಸಾವು

ಸಭೆಯಲ್ಲಿ ಕೋಡಿಹಳ್ಳಿ ಚಂದ್ರಶೇಖರ್, ಜೈಶಂಕರ್, ರಾಧಾಕೃಷ್ಣ, ಮಂಜು ಗಣಪತಿಪುರ ,ಚೇತನ್ ಕರಪ, ಮಂಜು ಬುದ್ಧಿಸ್ಟ್, ಬಸವರಾಜ್ ನಾಯಕ್, ಸಚಿನ್ ಒಕ್ಕಲಿಗ ಮುಂತಾದ ಕನ್ನಡಪರ ಸಂಘಟನೆಗಳ ಮುಖಂಡರು ಮತ್ತು ಕೆ ಆರ್ ಎಸ್ ಪಕ್ಷದ ಕಾರ್ಯಕರ್ತರು ಉಪಸ್ಥಿತಿಯಲ್ಲಿದ್ದರು.

ವರದಿ: ದರ್ಶನ್ ಕುರುಬಾಸ್
ಸ್ನಾತಕೋತ್ತರ ಪತ್ರಿಕೋದ್ಯಮ ವಿದ್ಯಾರ್ಥಿ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...