ರೋಹಿತ್ ವೇಮುಲ ಕಾಯ್ದೆ ಜಾರಿಗೆ ಆಗ್ರಹಿಸಿ ಧರಣಿ

Date:

ಶಿಕ್ಷಣ ಸಂಸ್ಥೆಗಳಲ್ಲಿ ದಲಿತ ಮತ್ತು ಬಹುಜನ ವಿದ್ಯಾರ್ಥಿಗಳ ಮೇಲೆ ಆಗುತ್ತಿರುವ ಜಾತಿ ದೌರ್ಜನ್ಯ ಮತ್ತು ತಾರತಮ್ಯವನ್ನು ತಡೆಗಟ್ಟಲು ರೋಹಿತ್ ವೇಮುಲ ಕಾಯ್ದೆ ಜಾರಿಗೊಳಿಸುವಂತೆ ಆಗ್ರಹಿಸಿ, ರೋಹಿತ್ ಕಾಯ್ದೆಗಾಗಿ ಜನಾಂದೋಲನ ವತಿಯಿಂದ ಶನಿವಾರ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಧರಣಿ ನಡೆಸಲಾಯಿತು.

ಈ ವೇಳೆ ಮಾತನಾಡಿದ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಶೇಷ ಪ್ರತಿನಿಧಿ ಕೆ ಪಿ ಅಶ್ವಿನಿ, ರೋಹಿತ್ ವೇಮುಲ ಅವರ ಸಾಂಸ್ಥಿಕ ಹತ್ಯೆಯನ್ನು ತುಂಬಾ ಗಟ್ಟಿ ಧ್ವನಿಯಲ್ಲಿ ಖಂಡಿಸಬೇಕು. ಹತ್ತು ವರ್ಷದಲ್ಲಿ ವಿಶ್ವವಿದ್ಯಾಲಯಗಳಲ್ಲಿ ನಡೆದ ಆತ್ಮಹತ್ಯೆಗಳಲ್ಲಿ ಶೇ.60ರಷ್ಟು ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಇದ್ದಾರೆ. ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯದ ಬಗ್ಗೆ ಮಾತನಾಡಲು ವೇದಿಕೆಯೇ ಇಲ್ಲ ಎಂದು ಹೇಳಿದರು.

ಜಾತಿ ತಾರತಮ್ಯ ಎಂದಾಕ್ಷಣ ನೂರಾರು ವರ್ಷದ ಹಿಂದೆ ಇತ್ತು. ಈಗ ಅಸಮಾನತೆಯಿಲ್ಲ ಎಂದು ಮಾತಾಡುತ್ತಾರೆ. ಆದರೆ ದಲಿತ, ಹಿಂದುಳಿದ, ಆದಿವಾಸಿ, ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಒಂದು ವೇದಿಕೆಯಾಗಿದೆ. ಶಿಕ್ಷಣದಿಂದ ಸಾಮಾಜಿಕ, ಆರ್ಥಿಕವಾಗಿ ಮೇಲೆ ಬರಲು ಸಾಧ್ಯವಾಗುತ್ತದೆ ಎಂದು ಡಾ ಬಿ ಆರ್ ಅಂಬೇಡ್ಕರ್ ಅವರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ಇನ್‌ಸ್ಟಾ ಹೆಲ್ಪ್‌’ -ಗೃಹ ಕಾರ್ಮಿಕರನ್ನು ಮತ್ತಷ್ಟು ಅಭದ್ರತೆಗೆ ದೂಡುವ ಅಪಾಯ

ದೌರ್ಜನ್ಯ ಕಾಯ್ದೆಯಲ್ಲಿ ಉನ್ನತ ಶಿಕ್ಷಣಗಳಲ್ಲಿ ನಡೆಯುವ ಜಾತಿ ತಾರತಮ್ಯದ ಬಗ್ಗೆ ಸ್ಪಷ್ಟವಾದ ಪರಿಹಾರವಿಲ್ಲ. ಅದರಿಂದ ಏ.14ರಂದು ರೋಹಿತ್ ವೇಮುಲ ಕಾಯ್ದೆಯ ಬಗ್ಗೆ ಸಮಿತಿಯನ್ನು ರಚನೆ ಮಾಡಬೇಕು ಎಂದು ಆಗ್ರಹಿಸಿದರು.

ಶಿಕ್ಷಣ ತಜ್ಞ ಶ್ರೀಪಾದ್ ಭಟ್ ಮಾತನಾಡಿ, ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಆಗುತ್ತಿರುವ ದೌರ್ಜನ್ಯಗಳನ್ನು ಹೇಳಿಕೊಳ್ಳಲು ಎಸ್‌ಸಿ, ಎಸ್‌ಟಿ ಆಯೋಗಕ್ಕೆ ಅಧ್ಯಕ್ಷರು, ಸದಸ್ಯರು ಇಲ್ಲ. ಅದರ ಬಗ್ಗೆಯೂ ಹೋರಾಟ ಮಾಡಬೇಕು. ಯುಜಿಸಿ ಜಾರಿಗೆ ತರಲಾಗುತ್ತಿರುವ ಎಸ್‌ಸಿ, ಎಸ್‌ಟಿ ಜಾತಿ ತಾರತಮ್ಯ ಕಾಯ್ದೆಯನ್ನು ನಾವು ಅರಿತುಕೊಳ್ಳಬೇಕು. ಅದರಲ್ಲಿನ ದೋಷ ಏನೆಂದರೆ ದಲಿತ ಸಮುದಾಯಗಳಿಂದ ಯಾರನ್ನೂ ಒಳಗೊಳ್ಳುತ್ತಿಲ್ಲ. ಅದರಿಂದ ಯಾವುದೇ ಕೆಲಸಕ್ಕೆ ಬಾರದ ಕಾಯ್ದೆಯಾಗುತ್ತದೆ ಎಂದು ತಿಳಿಸಿದರು.

ಪ್ರತಿಭಟನೆಯಲ್ಲಿ ಅಂಕಣಕಾರ ಶಿವಸುಂದರ್, ವಕೀಲ ವಿನಯ್ ಶ್ರೀನಿವಾಸ್, ಹೋರಾಟಗಾರ ಡಾ.ಹುಲಿಕುಂಟೆ ಮೂರ್ತಿ, ಚಿಂತಕ ವಿ.ಎಲ್.ನರಸಿಂಹಮೂರ್ತಿ, ಚಂದ್ರು ತರಹುಣಸೆ, ಅಶ್ವಿನಿ ಬೋಧ್, ಸರೋವರ ಬೆಂಕಿಕೆರೆ ಮತ್ತಿತರರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...