ಪಿಎಸ್‍ಐ ಮರು ಪರೀಕ್ಷೆ | ಜ.23 ರಂದು ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ

Date:

ಜನವರಿ 23 ರಂದು 545 ಪಿಎಸ್​ಐ ನೇಮಕಾತಿ ಲಿಖಿತ ಮರು ಪರೀಕ್ಷೆ ನಡೆಯಲಿದೆ. ಈ ಹಿನ್ನೆಲೆ, ಮುಂಜಾಗೃತಾ ಕ್ರಮವಾಗಿ ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತ-ಮುತ್ತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಈ ಬಗ್ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು ಶನಿವಾರ ಆದೇಶ ಹೊರಡಿಸಿದ್ದಾರೆ. ಪಿಎಸ್​ಐ ಮರು ಪರೀಕ್ಷೆ ಬೆಂಗಳೂರು ನಗರದಲ್ಲಿ ಮಾತ್ರ ನಡೆಯಲಿದ್ದು, ಒಟ್ಟು 117 ಕೇಂದ್ರಗಳಲ್ಲಿ ಸಿದ್ಧತೆಗಳನ್ನು ನಡೆಸಲಾಗುತ್ತಿದೆ. ಈ ನಿಟ್ಟಿನಲ್ಲಿ ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ ಬೆಳಗ್ಗೆ 7 ಗಂಟೆಯಿಂದ ಪರೀಕ್ಷೆ ಮುಗಿಯುವವರೆಗೆ ಜೆರಾಕ್ಸ್‌ ಅಂಗಡಿಗಳನ್ನು ಬಂದ್ ಮಾಡುವಂತೆ ಆದೇಶದಲ್ಲಿ ಸೂಚಿಸಲಾಗಿದೆ.

545 ಪಿಎಸ್​ಐ ಮರು ಪರೀಕ್ಷೆಗೆ ಪೊಲೀಸ್ ಇಲಾಖೆ ಹಾಗೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಎಲ್ಲಾ ತಯಾರಿಗಳನ್ನು ನಡೆಸುತ್ತಿದ್ದು, ಅಭ್ಯರ್ಥಿಗಳು ಕೂಡ ಪರೀಕ್ಷೆ ಬರೆಯಲು ಸಜ್ಜಾಗಿದ್ದರು. ಈ ನಡುವೆ ಮತ್ತೆ ಮರು ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ ಕೇಳಿಬಂದಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ರಾಜ್ಯದಲ್ಲಿ ಸರ್ಕಾರಿ ರಜೆ ಇಲ್ಲ: ಸಿಎಂ ಸಿದ್ಧರಾಮಯ್ಯ

ಈ ಆರೋಪಕ್ಕೆ ಸಂಬಂಧಿಸಿದಂತೆ, ಇಂಟೆಲಿಜೆನ್ಸ್ ವಿಭಾಗದ ಸಬ್​ ಇನ್ಸ್​ಪೆಕ್ಟರ್​ ಲಿಂಗಯ್ಯ ಅವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಲಿಂಗಯ್ಯ ಅವರು ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದೆ. ಜತೆಗೆ, ಅವರು ವಾಟ್ಸ್‌ಆಪ್‌ನಲ್ಲಿ ಚಾಟ್‌ ಮಾಡಿದ ಸಂದೇಶಗಳು ವೈರಲ್‌ ಆಗಿವೆ. ಈ ಸಂಬಂಧ ಅಭ್ಯರ್ಥಿಗಳು ಪ್ರತಿಭಟನೆಗಿಳಿದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...