ಸಿಸಿಟಿವಿ ಸ್ಥಗಿತಗೊಳಿಸಿ ಹೈಕೋರ್ಟ್ ನೆಲ ಮಹಡಿಯಲ್ಲಿ ಹುಟ್ಟುಹಬ್ಬ ಆಚರಣೆ: ಇಂಜಿನಿಯರ್​​ಗಳು ಸೇರಿ ಐವರ ಅಮಾನತು

Date:

ಕರ್ನಾಟಕ ಹೈಕೋರ್ಟ್‌ನ ಸರ್ಕಾರಿ ಕಚೇರಿಯೊಂದರಲ್ಲಿ ತಮ್ಮ ಇಲಾಖೆಯ ಸಹೋದ್ಯೋಗಿಗಳು ಮತ್ತು ಸ್ನೇಹಿತರ ಜೊತೆಗೂಡಿ ಹುಟ್ಟುಹಬ್ಬ ಆಚರಿಸಿದ ಆರೋಪದ ಮೇಲೆ ನಾಲ್ವರು ಇಂಜಿನಿಯರ್​ಗಳು ಹಾಗೂ ಓರ್ವ ಪ್ರಥಮ ದರ್ಜೆ ಸಹಾಯಕರೊಬ್ಬರನ್ನು ಅಮಾನತು ಮಾಡಿ ಆದೇಶಿಸಲಾಗಿದೆ.

ಸಹಾಯಕ ಇಂಜಿನಿಯರ್​​ಗಳಾದ ಲಾವಣ್ಯ, ಮೀನಾ ಎ.ಟಿ., ನವೀನ್, ಅಮೀನ್ ಎಸ್.ಆನದಿನ್ನಿ ಮತ್ತು ಪ್ರಥಮ ದರ್ಜೆ ಸಹಾಯಕರಾದ ಜಿ.ಹೆಚ್.ಚಿಕ್ಕಪ್ಪೇಗೌಡ ಎಂಬುವರು ಅಮಾನತುಗೊಂಡ ಅಧಿಕಾರಿಗಳಾಗಿದ್ದಾರೆ.

ಹೈಕೋರ್ಟ್ ಆವರಣದಲ್ಲಿರುವ ಲೋಕೋಪಯೋಗಿ ಇಲಾಖೆಯ ವಿಶೇಷ ಕಟ್ಟಡದ ಉಪ ವಿಭಾಗದ ಕಚೇರಿಯಲ್ಲಿ ಕಳೆದ ತಿಂಗಳು ಮಾರ್ಚ್ 10ರಂದು ನಗರಾಭಿವೃದ್ಧಿ ಇಲಾಖೆಯಲ್ಲಿ ಸಹಾಯಕ ಇಂಜಿನಿಯರ್ ಆಗಿರುವ ಮೀನಾ ಎ.ಟಿ. ಅವರ ಹುಟ್ಟುಹಬ್ಬ ಆಚರಿಸಲಾಗಿತ್ತು. ಈ ಸಂದರ್ಭದಲ್ಲಿ ಸರ್ಕಾರದ ಬೇರೆ ಕಚೇರಿಗಳಲ್ಲಿ ಸಹಾಯಕ ಇಂಜಿನಿಯರ್​​ಗಳಾಗಿ ಕಾರ್ಯನಿರ್ವಹಿಸುತ್ತಿದ್ದ ನವೀನ್, ಅಮೀನ್ ಎಸ್. ಆನದಿನ್ನಿ ಮತ್ತು ಇತರರು ಪಾಲ್ಗೊಂಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸೂಕ್ಷ್ಮ ಪ್ರದೇಶ ವ್ಯಾಪ್ತಿಗೆ ಒಳಪಡುವ ಹೈಕೋರ್ಟ್ ಆವರಣದಲ್ಲಿರುವ ಲೋಕೋಪಯೋಗಿ ಇಲಾಖೆ ಕಟ್ಟಡದಲ್ಲಿ ಮೇಲಧಿಕಾರಿಗಳ ಅನುಮತಿ ಪಡೆಯದೇ ಹುಟ್ಟುಹಬ್ಬ ಆಚರಿಸಿದ್ದನ್ನು ಗಂಭೀರವಾಗಿ ಪರಿಗಣಿಸಿದ ಹಿರಿಯ ಅಧಿಕಾರಿಗಳು, ಈ ಬಗ್ಗೆ ತನಿಖೆ ನಡೆಸಿ ವರದಿ ಪಡೆದಿದ್ದರು. ಸರ್ಕಾರಿ ಕಚೇರಿಯಲ್ಲಿ ನಿರ್ದಿಷ್ಟಪಡಿಸಿದ ಗಣ್ಯ ವ್ಯಕ್ತಿಗಳ ಜಯಂತಿ ಮತ್ತು ಕಾರ್ಯಕ್ರಮ ನಡೆಸಲು ಮಾತ್ರ ಅವಕಾಶವಿದ್ದು, ಇತರರ ಜಯಂತಿ ಆಚರಣೆಗೆ ಅವಕಾಶ ಇರುವುದಿಲ್ಲ ಆದೇಶದಲ್ಲಿ ತಿಳಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅತ್ಯಾಚಾರ ಯತ್ನ ಮಾಮೂಲು ಸಂಗತಿಯೇ ಗೃಹಸಚಿವರೇ?

ಹುಟ್ಟುಹಬ್ಬ ಆಚರಣೆ ವೇಳೆ ಹೈಕೋರ್ಟ್​​ನಲ್ಲಿ ಭದ್ರತೆಗಾಗಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮರಾವನ್ನು ಸ್ವಿಚ್ ಆಫ್ ಮಾಡಿರುವುದು ಸಹ ಗಂಭೀರ ಸ್ವರೂಪದ ಕರ್ತವ್ಯಲೋಪವಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಮೇಲಧಿಕಾರಿಗಳ ಅನುಮತಿ ಪಡೆಯದೇ ಸಿಸಿ ಕ್ಯಾಮರಾ ಬಂದ್ ಮಾಡಿದ್ದು ಮತ್ತು ನಿಯಮಬಾಹಿರವಾಗಿ ಹುಟ್ಟುಹಬ್ಬ ಆಚರಿಸಿರುವುದು ಕರ್ನಾಟಕ ರಾಜ್ಯ ನಾಗರಿಕ (ನಡತೆ) ನಿಯಮಗಳು-2021ರ ನಿಯಮ 3(1)(1ರಿಂದ4) ಉಲ್ಲಂಘನೆಯಾಗಿದೆ ಎಂದು ತಿಳಿಸಿ ಈ ಎಲ್ಲ ಇಂಜಿನಿಯರ್​ಗಳು ಹಾಗೂ ಪ್ರಥಮ ದರ್ಜೆ ಸಹಾಯಕರನ್ನು ಇಲಾಖಾ ವಿಚಾರಣೆ ಬಾಕಿ ಇರಿಸಿ, ಸೇವೆಯಿಂದ ಅಮಾನತು ಮಾಡಲಾಗಿದೆ ಎಂದು ಆದೇಶದಲ್ಲಿ ವಿವರಿಸಲಾಗಿದೆ.

ಸರ್ಕಾರದ ಆದೇಶದಂತೆ ಶಿವಮೊಗ್ಗದ ಲೋಕೋಪಯೋಗಿ ಇಲಾಖೆಯ ಮುಖ್ಯ ಇಂಜಿನಿಯರ್ (ಸಂಪರ್ಕ ಮತ್ತು ಕೇಂದ್ರ) ಅವರು ಸರ್ಕಾರಿ ಕಚೇರಿಯಲ್ಲಿ ಹುಟ್ಟುಹಬ್ಬದ ಆಚರಣೆ ಪ್ರಕರಣದ ಬಗ್ಗೆ ತನಿಖೆ ನಡೆಸಿ, ಶಿಸ್ತುಕ್ರಮ ಜರುಗಿಸುವಂತೆ ಶಿಫಾರಸು ಮಾಡಿದ್ದರು. ಹುಟ್ಟುಹಬ್ಬದ ಸಂದರ್ಭದಲ್ಲಿ ಹೈಕೋರ್ಟ್​​ನ ಭದ್ರತೆಗಾಗಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮರಾ ಸ್ವಿಚ್ ಆಫ್ ಮಾಡಿದ್ದನ್ನು ಗಂಭೀರ ಸ್ವರೂಪದ ಕರ್ತವ್ಯಲೋಪವೆಂದು ಪರಿಗಣಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...