ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿ ಸ್ಥಳೀಯ ಪತ್ರಿಕೆಗಳಲ್ಲಿ ಜಾಹೀರಾತು ಪ್ರಕಟಿಸಿದ ಕಾರಣಕ್ಕಾಗಿ ಕರ್ನಾಟಕ ಬಿಜೆಪಿ ಘಟಕ ದಾಖಲಿಸಿದ್ದ ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್‌ಗೆ ಹಾಜರಾಗಲಿದ್ದಾರೆ.
ಈ ಮೊದಲು ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರಿಗೆ ಸಿಟಿ ಸಿವಿಲ್ ಕೋರ್ಟ್ ಜಾಮೀನು ನೀಡಿತ್ತು. ರಾಹುಲ್ ಗಾಂಧಿ ಈ ಪ್ರಕರಣದಲ್ಲಿ ಮೂರನೇ ಆರೋಪಿಯಾಗಿದ್ದು ಡಿ ಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರು ಮೊದಲು ಹಾಗೂ ಮೂರನೇ ಆರೋಪಿಯಾಗಿದ್ದಾರೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಿತ್ರಪಕ್ಷಗಳಿಗೆ ಮಣಿಯುವರೇ ಅಥವಾ ‘ಆಪರೇಷನ್ ಕಮಲ’ಕ್ಕೆ ಶರಣಾಗುವರೇ?
ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಅವರಿಗೆ ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ಜಾಮೀನು ರಹಿತ ವಾರಂಟ್ ಜಾರಿಗೊಳಿಸಿ ಜೂನ್ 7ರೊಳಗೆ ಹಾಜರಾಗಬೇಕೆಂದು ಆದೇಶಿಸಿತ್ತು.
ಬಿಜೆಪಿ ವಿಧಾನ ಪರಿಷತ್ ಸದಸ್ಯ ಕೇಶವ್ ಪ್ರಸಾದ್ ಕಾಂಗ್ರೆಸ್ ನಾಯಕರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಕಾಂಗ್ರೆಸ್ ಪಕ್ಷ ಅಂದಿನ ಸಂದರ್ಭದಲ್ಲಿ ರಾಜ್ಯದ ಪತ್ರಿಕೆಗಳಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಶೇ.40 ಕಮಿಷನ್ ಸರ್ಕಾರ ಎಂದು ಪ್ರಕಟಣೆ ಹೊರಡಿಸಿತ್ತು.





