ಯಶವಂತಪುರ-ಅರಸೀಕೆರೆ ನಡುವೆ ಸ್ವಯಂಚಾಲಿತ ಸಿಗ್ನಲಿಂಗ್ ಯೋಜನೆಗೆ ರೈಲ್ವೆ ಮಂಡಳಿ ಅನುಮೋದನೆ

Date:

165.86 ಕಿಲೋಮೀಟರ್ ಮಾರ್ಗದ ಯಶವಂತಪುರ-ಅರಸೀಕೆರೆ ನಡುವೆ ಸ್ವಯಂಚಾಲಿತ ಸಿಗ್ನಲಿಂಗ್ ವ್ಯವಸ್ಥೆಯನ್ನು ಜಾರಿಗೊಳಿಸಲು ರೈಲ್ವೆ ಮಂಡಳಿ ಅನುಮೋದನೆ ನೀಡಿದ್ದು, ₹218.75 ಕೋಟಿ ವೆಚ್ಚದಲ್ಲಿ ಈ ಯೋಜನೆ ಅನುಷ್ಠಾನಗೊಳ್ಳಲಿದೆ.

ಬೆಂಗಳೂರು ಮತ್ತು ಮೈಸೂರು ವಿಭಾಗಗಳು ವಿಶೇಷವಾಗಿ ಯಶವಂತಪುರ-ಅರಸೀಕೆರೆ ವಿಭಾಗದಲ್ಲಿ ಹೆಚ್ಚಿದ ಪ್ರಯಾಣಿಕ ರೈಲುಗಳಿಗೆ ಬೇಡಿಕೆ ನಿರಂತರವಾಗಿ ಕೇಳಿ ಬರುತ್ತಿದೆ.

ಈ ಯೋಜನೆಯಿಂದ ಆಹಾರ ಧಾನ್ಯಗಳು, ರಸಗೊಬ್ಬರಗಳು, ಸಿಮೆಂಟ್, ಉಕ್ಕು ಮತ್ತು ವಾಹನಗಳು ಸೇರಿದಂತೆ ಪ್ರಯಾಣಿಕರ ಮತ್ತು ಸರಕು ಸಾಗಣೆ ಎರಡರಲ್ಲೂ ಬಹುಪಟ್ಟು ಹೆಚ್ಚಳವನ್ನು ನಿರೀಕ್ಷಿಸಲಾಗುತ್ತಿದೆ. ಸ್ವಯಂಚಾಲಿತ ಸಿಗ್ನಲಿಂಗ್ ಯೋಜನೆಯು ಲೈನ್ ಸಾಮರ್ಥ್ಯವನ್ನು ಗಮನಾರ್ಹವಾಗಿ ಹೆಚ್ಚಿಸುವ ಗುರಿಯನ್ನು ಹೊಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಡಿಮೆ ಅಂತರದಲ್ಲಿ ಹೆಚ್ಚುವರಿ ರೈಲುಗಳ ತಡೆರಹಿತ ಕಾರ್ಯಾಚರಣೆಯನ್ನು ಸಕ್ರಿಯಗೊಳಿಸುತ್ತದೆ. ಪ್ರಯಾಣಿಕರ ಹೆಚ್ಚುತ್ತಿರುವ ಬೇಡಿಕೆಗಳನ್ನು ಪರಿಹರಿಸುತ್ತದೆ ಮತ್ತು ಪ್ರದೇಶದಲ್ಲಿ ಆರ್ಥಿಕ ಅಭಿವೃದ್ಧಿಯನ್ನು ಉತ್ತೇಜಿಸುತ್ತದೆ ಎಂದು ಇಲಾಖೆ ಹೇಳಿದೆ.

ಈ ಸುದ್ದಿ ಓದಿದ್ದೀರಾ? ಕೆಕೆಆರ್‌ಟಿಸಿ | ಪ್ರೀಮಿಯಂ ರಹಿತ ₹1.20 ಕೋಟಿ ಅಪಘಾತ ಪರಿಹಾರ‌ ವಿಮಾ ಯೋಜನೆ ಜಾರಿ

ಈ ಯೋಜನೆಯು ಮೂರು ವರ್ಷಗಳ ಅವಧಿಯಲ್ಲಿ ಪೂರ್ಣಗೊಳ್ಳುವ ನಿರೀಕ್ಷೆಯಿದೆ. ಸ್ವಯಂಚಾಲಿತ ಸಿಗ್ನಲಿಂಗ್‌ನ ಅನುಷ್ಠಾನವು ರೈಲು ಮೂಲಸೌಕರ್ಯವನ್ನು ಆಧುನೀಕರಿಸುವ ಮತ್ತು ಉತ್ತಮಗೊಳಿಸುವತ್ತ ಪ್ರಮುಖ ಹೆಜ್ಜೆಯಾಗಿದೆ ಎಂದು ನೈರುತ್ಯ ರೈಲ್ವೆ ಇಲಾಖೆ ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...