ಡಿ.17 ರಿಂದ ರಾಜ್ಯದ ನಾನಾ ಭಾಗಗಳಲ್ಲಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ

Date:

ಬೆಂಗಳೂರು ಸೇರಿದಂತೆ ರಾಜ್ಯದ ನಾನಾ ಜಿಲ್ಲೆಗಳಲ್ಲಿ ಚಳಿಯ ಪ್ರಮಾಣ ವಿಪರೀತವಾಗಿ ಏರಿಕೆಯಾಗಿದೆ. ಇನ್ನು ಕೆಲವು ದಿನ ಈ ಚಳಿ ವಾತಾವರಣ ಹೀಗೇ ಮುಂದುವರಿಯಲಿದೆ. ಇನ್ನು ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಿದ್ದು, ಡಿಸೆಂಬರ್ 17ರಿಂದ ಎರಡು ದಿನಗಳ ಕಾಲ ರಾಜ್ಯದ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡು ಜಿಲ್ಲೆಗಳಾದ ಚಾಮರಾಜನಗರ, ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳು, ಹಾಸನ, ಚಿಕ್ಕಮಗಳೂರು, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ದಿನ ಬಿಟ್ಟು ದಿನ ಮಳೆಯಾಗಲಿದೆ. ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಚಾಮರಾಜನಗರ, ಹಾಸನ, ಕೊಡಗು, ಶಿವಮೊಗ್ಗದಲ್ಲೂ ಮಳೆಯಾಗುವ ಸಾಧ್ಯತೆಯಿದೆ. ಒಂದೆರಡು ಕಡೆಗಳಲ್ಲಿ ಸಾಧಾರಣಕ್ಕಿಂತ ಅತ್ಯಧಿಕ ಪ್ರಮಾಣದ ಮಳೆ ಆಗಲಿದೆ ಎಂದು ಹೇಳಿದೆ.

ಕರ್ನಾಟಕ ಕರಾವಳಿಯ ಮೂರು ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆ ಆಗುವ ಲಕ್ಷಣಗಳಿವೆ ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸದ್ಯ ಕರ್ನಾಟಕದಲ್ಲಿ ಅಲ್ಲಲ್ಲಿ ಹಿಂಗಾರು ಮಳೆ ಚುರುಕುಗೊಳ್ಳುವ ಜತೆಗೆ ಚಳಿ ಹೆಚ್ಚಾಗುವ ಮುನ್ಸೂಚನೆ ಇದೆ. ಉತ್ತರ ಒಳನಾಡಿನಲ್ಲಿ ಈ ವಾರಪೂರ್ತಿ ಶುಷ್ಕ ವಾತಾವರಣವೇ ಮುಂದುವರಿಯಲಿದೆ. ಹೀಗಿದ್ದರೂ ಈ ಭಾಗದಲ್ಲಿ ಚಳಿಯ ಪ್ರಮಾಣ ಹೆಚ್ಚಿರಲಿದೆ ಎಂದು ವರದಿ ತಿಳಿಸಿದೆ.

ರಾಜ್ಯದಲ್ಲಿ ಚಳಿಯ ವಾತಾವರಣ ಹೆಚ್ಚಳ

ಕರ್ನಾಟಕದಲ್ಲಿ ಚಳಿಯ ವಾತಾವರಣ ಕಂಡು ಬಂದಿದ್ದು. ಹಾವೇರಿ, ಧಾರವಾಡ, ವಿಜಯಪುರ, ಗದಗ, ಕೊಪ್ಪಳ, ರಾಯಚೂರು ಭಾಗಗಳಲ್ಲಿ 17 ಡಿಗ್ರಿ ಸೆಲ್ಸಿಯಸ್‌ಗಿಂತಲೂ ಕಡಿಮೆ ತಾಪಮಾನ ದಾಖಲಾಗಿದೆ. ಚಿಕ್ಕಮಗಳೂರಿನಲ್ಲಿ 15 ಡಿಗ್ರಿ ಸೆಲ್ಸಿಯಸ್ ಮತ್ತು ವಿಜಯಪುರದಲ್ಲಿ 12 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ರಾಜ್ಯದಲ್ಲಿ ಸರಾಸರಿ ಗರಿಷ್ಠ ತಾಪಮಾನ 28 ಹಾಗೂ ಕನಿಷ್ಠ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ಹವಾಮಾನ ಇಲಾಖೆ ವರದಿ ಪ್ರಕಾರ, ರಾಜ್ಯದ ಬಹುತೇಕ ಕಡೆ ಗರಿಷ್ಠ ತಾಪಮಾನ ಮತ್ತು ಕನಿಷ್ಠ ತಾಪಮಾನ ಇಳಿಕೆ ಆಗಿದೆ. ಹೀಗಾಗಿ ಚಳಿಗಾಲ ಆರಂಭವಾದ ಅನುಭವವಾಗುತ್ತಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮಲಗುವ ವಿಚಾರಕ್ಕೆ ಜಗಳ: ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಬರ್ಬರ ಹತ್ಯೆ

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ಮಳೆಬರುವ ಸಾಧ್ಯತೆ ಕಡಿಮೆ ಇದೆ. ಎಚ್​ಎಎಲ್​ನಲ್ಲಿ 27.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 26.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಂಗಳೂರು ನಗರ ಸೇರಿದಂತೆ ರಾಜ್ಯದ ಒಳನಾಡು ಭಾಗದಲ್ಲಿ ಚಳಿ ಆವರಿಸುತ್ತಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...