ರಂಜಾನ್ | ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆಗೆ ಸಿದ್ಧತೆ, ಸಚಿವ ಜಮೀರ್ ಭಾಗಿ

Date:

ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಯಲಿದೆ. 30 ದಿನಗಳ ಉಪವಾಸ ಇಂದಿಗೆ ಅಂತ್ಯವಾಗಲಿದ್ದು, ಈಗಾಗಲೇ ಈದ್ಗಾ ಮೈದಾನದಲ್ಲಿ ಮುಸ್ಲಿಮ ಸಮುದಾಯದವರು ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಲು ಜಮಾಯಿಸಿದ್ದಾರೆ.

ಸಚಿವ ಜಮೀರ್ ಅಹಮದ್ ಖಾನ್ ಅವರು ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗಿಯಾಗಲಿದ್ದಾರೆ. ಈದ್ಗಾ ಮೈದಾನದ ಸುತ್ತಮುತ್ತಲೂ ಹೆಚ್ಚಿನ ಜನ ಸೇರುವ ಸಾಧ್ಯತೆಯಿದ್ದು, ಬೆಳಗ್ಗೆ 9 ರಿಂದ 12 ಗಂಟೆಯವರೆಗೆ ಗಾಳಿ ಆಂಜನೇಯ ದೇವಸ್ಥಾನದಿಂದ ಟೌನ್ ಹಾಲ್‌ವರೆಗಿನ ರಸ್ತೆಯನ್ನು ಬಂದ್ ಮಾಡಲಾಗಿದೆ. ಈದ್ಗಾ ಮೈದಾನದ ಸುತ್ತಮುತ್ತಲೂ 500ಕ್ಕೂ ಹೆಚ್ಚು ಪೊಲೀಸರು, ಕೆಎಸ್ಆರ್‌ಪಿ ತುಕಡಿಗಳನ್ನು ನಿಯೋಜನೆ ಮಾಡಲಾಗಿದೆ.

ರಸ್ತೆಗಳಲ್ಲಿ ಸಂಚಾರ ನಿರ್ಬಂಧ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬನ್ನೇರುಘಟ್ಟ ರಸ್ತೆಯ ಸಾಗರ್ ಅಪೋಲೋ ಜಂಕ್ಷನ್‌ನಿಂದ ಗುರಪ್ಪನಪಾಳ್ಯ ಜಂಕ್ಷನ್‌ವರೆಗೆ, ಸಾಯಿರಾಂ ಜಂಕ್ಷನ್‌ನಿಂದ ಗುರಪ್ಪನಪಾಳ್ಯ ಜಂಕ್ಷನ್‌ವರೆಗೆ ಹಾಗೂ ಗುರಪ್ಪನಪಾಳ್ಯ ಜಂಕ್ಷನ್‌ನಿಂದ ರೆಡ್ಡಿ ಆಸ್ಪತ್ರೆ ಜಂಕ್ಷನ್‌ವರೆಗೆ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಈ ರಸ್ತೆಗಳಲ್ಲಿ ಸಂಚರಿಸುವವರು ಪರ್ಯಾಯವಾಗಿ ಡೈರಿ ಸರ್ಕಲ್ ಕಡೆಯಿಂದ ತಿಲಕ್ ನಗರ, ಸ್ವಾಗತ್ ಜಂಕ್ಷನ್, ಜಯನಗರ ಈಸ್ಟ್ ಎಂಡ್ ಮೂಲಕ ಜಯದೇವ ಕಡೆ ತಲುಪಲು ಸೂಚಿಸಲಾಗಿದೆ‌. ಅದೇ ರೀತಿ ಬನ್ನೇರುಘಟ್ಟ ರಸ್ತೆಯಿಂದ ಬರುವ ವಾಹನಗಳು ಜೇಡಿಮರ ಜಂಕ್ಷನ್, ಜಯದೇವ, ಈಸ್ಟ್ ಎಂಡ್, ಸ್ವಾಗತ್ ಜಂಕ್ಷನ್ ಮೂಲಕ ಡೈರಿ ಸರ್ಕಲ್ ತಲುಪಲು ಸೂಚಿಸಲಾಗಿದೆ.

ಪೂರ್ವ ವಿಭಾಗದ ನಾಗವಾರ ಪಾಟರಿ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಬದಲಿಯಾಗಿ ನಾಗವಾರ ಕಡೆಯಿಂದ ಬರುವ ವಾಹನಗಳು ಹೆಣ್ಣೂರು ಜಂಕ್ಷನ್, ಕಾಚರಕನಹಳ್ಳಿ, ಲಿಂಗರಾಜಪುರಂ, ಪುಲಕೇಶಿನಗರ ಪೊಲೀಸ್ ಠಾಣೆ, ಹೇನ್ಸ್ ರಸ್ತೆ ಮೂಲಕ ಸಂಚಾರ ಮಾಡಲು ಸೂಚಿಸಲಾಗಿದೆ. ಶಿವಾಜಿನಗರ ಕಡೆಯಿಂದ ಸಂಚರಿಸುವ ವಾಹನಗಳು ಸ್ಪೆನ್ಸರ್ ರಸ್ತೆ, ಕೋಲ್ಸ್ ರಸ್ತೆ, ವೀಲರ್ಸ್ ರಸ್ತೆ ಮೂಲಕ ನಾಗವಾರ, ಬಾಣಸವಾಡಿ ಕಡೆಗೆ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ. ಇಂದು ಬೆಳಗ್ಗೆ 9ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಸಂಚಾರ ನಿರ್ಬಂಧವಿರಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...