ಕಳೆದ ವರ್ಷ ₹117 ಕೋಟಿ ಮೌಲ್ಯದ ಡ್ರಗ್ಸ್‌ ಜಪ್ತಿ ಮಾಡಿದ ಬೆಂಗಳೂರು ಪೊಲೀಸರು

Date:

  • ಆರೋಪಿಗಳ ದತ್ತಾಂಶ ಸಂಗ್ರಹಕ್ಕೆ ‘ಬಿಸಿಪಿ ಎನ್‌ಡಿಪಿಎಸ್ ಪೋರ್ಟಲ್’ ಪ್ರಾರಂಭ
  • 2022ರ ಜನವರಿಯಿಂದ 2023ರ ಜೂನ್‌ವರೆಗೆ 6,191 ಪ್ರಕರಣ ದಾಖಲು

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವಿಶ್ವ ಮಾದಕ ವಸ್ತುಗಳ ಸೇವನೆ ಮತ್ತು ಕಳ್ಳ ಸಾಗಣೆ ವಿರೋಧಿ ದಿನದ ನಿಮಿತ್ತ ವಿಶೇಷ ಅಭಿಯಾನ ನಡೆಸಿದ ಪೊಲೀಸರು ಸೋಮವಾರ ₹21 ಕೋಟಿ ಮೌಲ್ಯದ 2,117 ಕೆಜಿ ಡ್ರಗ್ಸ್‌ ನಾಶಪಡಿಸಿದರು. ಜತೆಗೆ ಕಳೆದ ಒಂದು ವರ್ಷದಲ್ಲಿ ₹117 ಕೋಟಿ ಮೌಲ್ಯದ 6,261 ಕೆಜಿ ಡ್ರಗ್ಸ್‌ ಜಪ್ತಿ ಮಾಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಬೆಂಗಳೂರು ಪೊಲೀಸ್‌ ಕಮಿಷನರ್ ಬಿ. ದಯಾನಂದ, “ನಗರದ ನಾನಾ ಕಡೆಗಳಲ್ಲಿ ಡ್ರಗ್ಸ್‌ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ 2,053 ಕೆ.ಜಿ ಗಾಂಜಾ, 9 ಕೆ.ಜಿ ಹಶೀಷ್, 12 ಕೆ.ಜಿ ಅಫೀಮು, 9 ಕೆ.ಜಿ ಚರಸ್, 568 ಗ್ರಾಂ ಕೊಕೇನ್, 13 ಗ್ರಾಂ ಹೆರಾಯಿನ್, 5 ಕೆ.ಜಿ ಎಂಡಿಎಂಎ ಅನ್ನು ಕೋರ್ಟ್‌ ಆದೇಶ ಪಡೆದು ನಾಶಪಡಿಸಲಾಗಿದೆ” ಎಂದು ತಿಳಿಸಿದ್ದಾರೆ.

“ಅಕ್ರಮ ಮಾದಕ ದ್ರವ್ಯಗಳ ವಿರುದ್ಧ ನಡೆಸಿದ ಕಾರ್ಯಾಚರಣೆಯಲ್ಲಿ 2022ರ ಜನವರಿಯಿಂದ 2023ರ ಜೂನ್‌ವರೆಗೆ 6,191 ಪ್ರಕರಣ ದಾಖಲಾಗಿದೆ. ಈ ಸಂಬಂಧ 7,723 ಭಾರತೀಯರು, 159 ವಿದೇಶಿಯರನ್ನು ಬಂಧಿಸಲಾಗಿದೆ. 6,191 ಪ್ರಕರಣಗಳಲ್ಲಿ 5,248 ಮಾದಕವಸ್ತು ಗ್ರಾಹಕರು ಮತ್ತು 943 ಪೆಡ್ಲರ್‌ಗಳನ್ನು ಒಳಗೊಂಡಿವೆ. ಒಟ್ಟು ₹117 ಕೋಟಿ ಮೌಲ್ಯದ 6,261 ಕೆಜಿ ಡ್ರಗ್ಸ್‌ ವಶಪಡಿಸಿಕೊಳ್ಳಲಾಗಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇತರ ರಾಜ್ಯಗಳು ಮತ್ತು ದೇಶಗಳಿಂದ ನಡೆಸಲ್ಪಡುವ ಮಾದಕವಸ್ತು ಕಳ್ಳಸಾಗಣೆ ಜಾಲಗಳನ್ನು ಭೇದಿಸಿದ್ದೇವೆ. ಕೆಲವು ನೆಟ್‌ವರ್ಕ್‌ಗಳನ್ನು ಯಶಸ್ವಿಯಾಗಿ ಬೇರು ಸಮೇತ ನಿರ್ಮೂಲನೆ ಮಾಡಿದ್ದೇವೆ. ಮಾದಕ ದ್ರವ್ಯ ದಂಧೆ ಜಾಲಕ್ಕೆ ಕಡಿವಾಣ ಹಾಕಿದ್ದೇವೆ” ಎಂದು ಜಂಟಿ ಪೊಲೀಸ್ ಆಯುಕ್ತ (ಅಪರಾಧ) ಎಸ್ ಡಿ ಶರಣಪ್ಪ ತಿಳಿಸಿದ್ದಾರೆ.

ಕಳೆದ ವರ್ಷ ವಶಪಡಿಸಿಕೊಂಡ ಸುಮಾರು 2,117 ಕೆಜಿ ಅಕ್ರಮ ವಸ್ತುಗಳನ್ನು ನ್ಯಾಯಾಲಯದಿಂದ ಅನುಮತಿ ಪಡೆದು ವೈಜ್ಞಾನಿಕ ವಿಲೇವಾರಿಗಾಗಿ ಔಷಧ ವಿಲೇವಾರಿ ಸಮಿತಿಗೆ ಹಸ್ತಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಅಕ್ರಮ ಸಂಬಂಧ ಶಂಕಿಸಿ ಪತ್ನಿಗೆ ಚಾಕುವಿನಿಂದ ಇರಿದ ರೌಡಿ ಪತಿ

ಡ್ರಗ್ಸ್‌ ಸಾಗಣೆ ಹಾಗೂ ಮಾರಾಟ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ಆರೋಪಿಗಳ ದತ್ತಾಂಶ ಸಂಗ್ರಹಕ್ಕೆ ‘ಬಿಸಿಪಿ ಎನ್‌ಡಿಪಿಎಸ್ ಪೋರ್ಟಲ್’ ಪ್ರಾರಂಭಿಸಲಾಗಿದೆ. ಇದು ಕ್ರಿಮಿನಲ್ ದಾಖಲೆಗಳ ಬಗ್ಗೆ ಮಾಹಿತಿ ನೀಡಲು ಪೊಲೀಸರಿಗೆ ಸಹಾಯ ಮಾಡುತ್ತದೆ.

ನಗರದಾದ್ಯಂತ ಶಾಲಾ ಕಾಲೇಜುಗಳು ಮತ್ತು ವಿಶ್ವವಿದ್ಯಾನಿಲಯಗಳಿಗೆ ಭೇಟಿ ನೀಡಿ ಡ್ರಗ್ಸ್ ಮತ್ತು ಎನ್‌ಡಿಪಿಎಸ್ ಕಾಯ್ದೆಯ ಬಗ್ಗೆ ಪೊಲೀಸರು ಜಾಗೃತಿ ಮೂಡಿಸಿದರು. https://pledge.cybersapiens.in/ ಗೆ ಭೇಟಿ ನೀಡಿ ಮಾದಕ ದ್ರವ್ಯ ಸೇವನೆಯ ವಿರುದ್ಧ ಪ್ರತಿಜ್ಞೆ ಮಾಡಲು ನಾಗರಿಕರಲ್ಲಿ ಪೊಲೀಸರು ವಿನಂತಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...