ಬೆಂಗಳೂರು | ಹೆಬ್ಬಾಳ ಸರ್ವೀಸ್ ರಸ್ತೆಯಲ್ಲಿ ಮುಂದಿನ ವಾರ ಸಂಚಾರ ಆರಂಭ ಸಾಧ್ಯತೆ

Date:

  • ಸರ್ವಿಸ್‌ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧ
  • ಮಳೆಯ ಕಾರಣ ವಿಳಂಬವಾಗುತ್ತಿರುವ ಕಾಮಗಾರಿ

ಬೆಂಗಳೂರಿನ ಹೆಬ್ಬಾಳ ಮೇಲ್ಸೇತುವೆಗೆ ಮತ್ತೊಂದು ರ‍್ಯಾಂಪ್ ಅಳವಡಿಕೆ ಕಾಮಗಾರಿ ಜುಲೈ 19 ರೊಳಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಪೂರ್ಣಗೊಳಿಸುವುದರಿಂದ ಮುಂದಿನ ವಾರ ಹೆಬ್ಬಾಳ ಸರ್ವೀಸ್ ರಸ್ತೆಯಲ್ಲಿ ಸಂಚಾರ ಪುನರಾರಂಭವಾಗಬಹುದು.

ಶನಿವಾರ ಬಿಡಿಎ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದರು. “ಸರ್ವಿಸ್ ರಸ್ತೆಯಲ್ಲಿ ಡೌನ್ ರ‍್ಯಾಂಪ್ ಕಾಮಗಾರಿ ತ್ವರಿತಗತಿಯಲ್ಲಿ ನಡೆಯುತ್ತಿದೆ. ಜುಲೈ 19 ರೊಳಗೆ ಸರ್ವಿಸ್ ರಸ್ತೆಯ ಎರಡು ಸ್ಥಳಗಳಲ್ಲಿ ಅಡಿಪಾಯ ಕಾಮಗಾರಿಯನ್ನು ಪೂರ್ಣಗೊಳಿಸಿ ಮುಚ್ಚಲಾಗುವುದು. ನಂತರ, ಶೀಘ್ರದಲ್ಲೇ ಸಂಚಾರ ಪುನರಾರಂಭಿಸಬಹುದು” ಎಂದು ಬಿಡಿಎ ಸಹಾಯಕ ಕಾರ್ಯಪಾಲಕ ಎಂಜಿನಿಯರ್ (ಎಇಇ) ಸುರೇಶ್ ಆರ್ ತಿಳಿಸಿದರು.

“ರಸ್ತೆ ಪಕ್ಕದ ಗೋಡೆಗಳ ನಿರ್ಮಾಣ ಸೇರಿದಂತೆ ಇನ್ನಿತರ ಕೆಲಸಗಳು ನಡೆಯಬೇಕಿದ್ದು, ಇಡೀ ಯೋಜನೆ ಪೂರ್ಣಗೊಳ್ಳಲು ಕನಿಷ್ಠ ಒಂದೂವರೆ ವರ್ಷ ಬೇಕಾಗುತ್ತದೆ. ಮಳೆಯ ಕಾರಣ ಪ್ರತಿದಿನ ಕೆಲಸ ಕೆಲವು ಗಂಟೆಗಳ ಕಾಲ ವಿಳಂಬವಾಗುತ್ತಿದೆ. ಕಾಂಕ್ರೀಟ್ ಸುರಿದು ಎರಡು ಸ್ಥಳಗಳನ್ನು ಮುಚ್ಚಲು ಮೂರು ದಿನ ಸಮಯ ತೆಗೆದುಕೊಳ್ಳುತ್ತದೆ” ಎಂದು ಗುತ್ತಿಗೆದಾರರು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕರ್ನಾಟಕದಲ್ಲಿ ದಾಖಲಾದ ಪ್ರಕರಣಗಳಲ್ಲಿ ಸೈಬರ್ ಕ್ರೈಮ್ ಶೇ. 20 ರಷ್ಟಿದೆ: ಎಂ ಎ ಸಲೀಂ

ಸಂಚಾರ ದಟ್ಟಣೆ ತಗ್ಗಿಸುವ ಸಲುವಾಗಿ ಮೇಲ್ಸೇತುವೆಗೆ ಸುಮಾರು 700 ಅಡಿ ಉದ್ದದ ಮತ್ತೊಂದು ರ‍್ಯಾಂಪ್ ಅಳವಡಿಕೆ ಕಾಮಗಾರಿಯನ್ನು ಬಿಡಿಎ ಕೈಗೆತ್ತಿಕೊಂಡಿದೆ. ಹೆಚ್ಚುವರಿ ರ‍್ಯಾಂಪ್ ಕೊನೆಯಾಗುವ ಬ್ಯಾಪ್ಟಿಸ್ಟ್‌ ಆಸ್ಪತ್ರೆ ಮುಂಭಾಗ ಕಾಮಗಾರಿ ಸಲುವಾಗಿ ರಸ್ತೆ ಗುಂಡಿ ಅಗೆಯಲಾಗಿದೆ. ಹೀಗಾಗಿ, ಹೆಬ್ಬಾಳ ಪೊಲೀಸ್‌ ಠಾಣೆ ಮುಂಭಾಗದಿಂದ ಬ್ಯಾಪ್ಟಿಸ್ಟ್‌ ಆಸ್ಪತ್ರೆವರೆಗಿನ ಸರ್ವೀಸ್ ರಸ್ತೆಯಲ್ಲಿ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...