ನೈಜ ಹೋರಾಟಗಾರ ವೇದಿಕೆ ವೆಂಕಟೇಶ್‌ಗೆ ಬೆದರಿಕೆ ಸಂದೇಶ; ರಕ್ಷಣೆ ಒದಗಿಸದ ಪೊಲೀಸರು

Date:

ಸಾಮಾಜಿಕ ಜಾಲತಾಣ ವಾಟ್ಸ್‌ಆಪ್‌ ಮೂಲಕ ಅಪರಿಚಿತ ವ್ಯಕ್ತಿಯೊಬ್ಬ ಬೆದರಿಕೆ ಸಂದೇಶ ಕಳುಹಿಸಿದ್ದಾರೆ. ಹಾಗಾಗಿ, ಪೊಲೀಸ್‌ ಇಲಾಖೆಯಿಂದ ನನಗೆ ರಕ್ಷಣೆ ಕೊಡಿ ಎಂದು ಸಾಮಾಜಿಕ ಹೋರಾಟಗಾರ, ನೈಜ ಹೋರಾಟಗಾರ ವೇದಿಕೆಯ ಎಚ್‌.ಎಂ ವೆಂಕಟೇಶ್ ಅವರು ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಬಿ. ದಯಾನಂದ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ವಾಟ್ಸ್‌ಆಪ್‌ನಲ್ಲಿ ವ್ಯಕ್ತಿಯೊಬ್ಬ ಬೆದರಿಕೆ ಸಂದೇಶಗಳನ್ನು ಕಳುಹಿಸಿದ್ದಾನೆ ಎಂದು ವೆಂಕಟೇಶ್‌ ಅವರು ಆರೋಪಿಸಿದ್ದಾರೆ. ಈ ಬಗ್ಗೆ ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ ಅವರಿಗೆ ಪತ್ರ ಬರೆದಿರುವ ಅವರು, “ನಾನು ಈ ಹಿಂದೆ ಬಹಳಷ್ಟು ಬಾರಿ ಪೊಲೀಸ್ ಇಲಾಖೆಗೆ ರಕ್ಷಣೆ ಕೋರಿ ಮನವಿ ಸಲ್ಲಿಸುತ್ತಲೇ ಬಂದಿದ್ದೇನೆ. ಗುಪ್ತಚರ ಇಲಾಖೆಯವರು ಎರಡು ಮೂರು ಬಾರಿ ನಮ್ಮ ಮನೆಗೆ ಆಗಮಿಸಿ ಹಲವಾರು ವಿವರಗಳನ್ನು ಕಲೆ ಹಾಕಿ ಹೋಗಿದ್ದಾರೆ” ಎಂದು ಬರೆದಿದ್ದಾರೆ.

“ಮುಖ್ಯಮಂತ್ರಿ ಕಚೇರಿಯಿಂದಲೂ ಗುಪ್ತಚರ ಇಲಾಖೆ ಹಿರಿಯ ಅಧಿಕಾರಿಗಳಿಗೆ ರಕ್ಷಣೆ ನೀಡುವಂತೆ ಸೂಚಿಸಲಾಗಿದೆ. ಆದರೆ, ಈವರೆಗೂ ನನಗೆ ಯಾವುದೇ ರೀತಿಯ ರಕ್ಷಣೆ ಒದಗಿಸಿಲ್ಲ. ಆಗಸ್ಟ್‌ 27ರಂದು (ಭಾನುವಾರ) ಸಂಜೆ ಒಂದು ಅಪರಿಚಿತ ಮೊಬೈಲ್ ಸಂಖ್ಯೆಯಿಂದ ಒಬ್ಬ ವ್ಯಕ್ತಿ ವಾಟ್ಸ್‌ಆಪ್ ಗ್ರೂಪ್‌ನಲ್ಲಿ ‘ಏನೆಲ್ಲಾ ಪೋಸ್ಟ್‌ಗಳನ್ನು ಹಾಕುತ್ತೀಯಾ ನಿನ್ನನ್ನು ನಾವು ಗಮನದಲ್ಲಿ ಇಟ್ಟಿದ್ದೇವೆ. ನೀನೊಬ್ಬ ನೀಚ ಇನ್ನು ಮುಂದೆ ಯಾವುದೇ ಪೋಸ್ಟ್‌ಗಳನ್ನು ಹಾಕಿದರೆ ಬಿ ಕೇರ್ ಫುಲ್’ ಎಂದೆಲ್ಲಾ ಬರೆದು ಸಂದೇಶ ಕಳುಹಿಸಿದ್ದಾರೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ವ್ಯಕ್ತಿಯ ಯಾರೆಂದು ಹುಡುಕಿ ಅವನ ಮೇಲೆ ಪ್ರಾರ್ಥಮಿಕ ವರ್ತಮಾನ ವರದಿಯನ್ನು ದಾಖಲಿಸಿ ಅವನ ಮೇಲೆ ಕಾನೂನಿನ ಕ್ರಮವನ್ನು ಜರುಗಿಸಬೇಕು” ಎಂದು ಮನವಿ ಮಾಡಿದ್ದಾರೆ.

“ಹಲವಾರು ವರ್ಷಗಳಿಂದ ಭ್ರಷ್ಟಾಚಾರದ ವಿರುದ್ಧ ಮತ್ತು ಸರ್ಕಾರಿ ಜಮೀನುಗಳನ್ನು ಅತಿಕ್ರಮ ಮಾಡಿಕೊಂಡವರ ವಿರುದ್ಧ ಹೋರಾಟ ಮಾಡುತ್ತಲೇ ಬಂದಿದ್ದೇನೆ. ಜನಪ್ರತಿನಿಧಿಗಳು ತಮ್ಮ ಚರ ಸ್ಥಿರ ಆಸ್ತಿಗಳ ವಿವರವನ್ನು ಲೋಕಾಯುಕ್ತಕ್ಕೆ ಸಲ್ಲಿಸದೆ, ಆದಾಯಕ್ಕೆ ಮೀರಿದ ಆಸ್ತಿಗಳನ್ನು ಮಾಡುವವರ ವಿರುದ್ಧ ಮತ್ತು ಗ್ರಾಮ ಪಂಚಾಯಿತಿ ಸದಸ್ಯರಿಂದ ಹಿಡಿದು ವಿಧಾನಸಭಾ ಸದಸ್ಯರವರೆಗೆ ಎಲ್ಲರ ಆಸ್ತಿಗಳ ವಿವರವನ್ನು ಲೋಕಾಯುಕ್ತಕ್ಕೆ ಸಲ್ಲಿಸಬೇಕೆಂದು ಹೋರಾಟ ನಡೆಸಿ ಜಯ ಗಳಿಸಿದ್ದೇನೆ” ಎಂದು ಉಲ್ಲೇಖಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಬೀದಿನಾಯಿ ಬೊಗಳಿದ್ದಕ್ಕೆ ದಾರಿಹೋಕನ ಮೇಲೆ ಹಲ್ಲೆ; ಆರೋಪಿ ಬಂಧನ

“ಈ ನನ್ನ ಹೋರಾಟದಿಂದ ಕಾರ್ಪೊರೇಷನ್, ಗ್ರಾಮ ಪಂಚಾಯತಿ, ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ನಿಲ್ಲುವವರಿಗೆ ಈ ಆದೇಶದಿಂದ ಬಹಳಷ್ಟು ತೊಂದರೆ ಉಂಟಾಗಿದೆ. ಹೀಗಾಗಿ, ಬಹಳಷ್ಟು ಜನರು ನನ್ನ ಮೇಲೆ ಮತ್ತು ನನ್ನ ಚಟುವಟಿಕೆಗಳ ಮೇಲೆ ನಿಗಾ ಇಟ್ಟು ಎಲ್ಲೆಲ್ಲಿ ಸಾಧ್ಯವೊ ಅಲ್ಲೆಲ್ಲ ಹೋರಾಟ ನಿಲ್ಲಿಸುವ ಪ್ರಕ್ರಿಯೆ ನಡೆಸುತ್ತಲೇ ಇದ್ದಾರೆ” ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

“ಇದಕ್ಕೆ ಸಂಬಂಧಪಟ್ಟ ಪ್ರತಿಯೊಂದು ದಾಖಲೆಗಳನ್ನು ಪೊಲೀಸ್ ಇಲಾಖೆಗೆ ಈ ಹಿಂದೆಯೇ ಸಲ್ಲಿಸಿದ್ದೇನೆ. ಈ ಎಲ್ಲ ಹಿನ್ನೆಲೆಯಲ್ಲಿ ವಾಟ್ಸ್‌ಆಪ್ ಸಂದೇಶಗಳ ಮೂಲಕ ಬೆದರಿಕೆ ಹಾಕಿರುವ ವ್ಯಕ್ತಿಯನ್ನು ತಕ್ಷಣ ಬಂಧಿಸಬೇಕು. ಪೋಲಿಸ್ ರಕ್ಷಣೆಯನ್ನು ಉಚಿತವಾಗಿ ನೀಡಬೇಕು” ಎಂದು ಮನವಿ ಮಾಡಿದ್ದಾರೆ.

ವಾಟ್ಸ್‌ಆಪ್

ಈ ಬಗ್ಗೆ ಈ ದಿನ.ಕಾಮ್‌ ಜತೆಗೆ ಮಾತನಾಡಿದ ನೈಜ ಹೋರಾಟಗಾರ ವೇದಿಕೆಯ ಎಚ್‌.ಎಂ. ವೆಂಕಟೇಶ್, “ಈ ಹಿಂದೆಯೂ ಕೂಡ ಹಲವು ಬಾರಿ ಬೆದರಿಕೆ ಸಂದೇಶಗಳು ಬಂದಿವೆ. ಆಗ ಅಷ್ಟೊಂದು ತಲೆಕೆಡಿಸಿಕೊಂಡಿರಲಿಲ್ಲ. ಈಗ ಬೆದರಿಕೆ ಸಂದೇಶ ಕಳುಹಿಸಿರುವ ಅಪರಿಚಿತ ವ್ಯಕ್ತಿಯನ್ನು ಬಂಧಿಸುವಂತೆ ಬೆಂಗಳೂರು ನಗರ ಪೊಲೀಸ್‌ ಆಯುಕ್ತರಿಗೆ ಮನವಿ ಮಾಡಿದ್ದೇನೆ ಹಾಗೂ ಪೊಲೀಸ್‌ ಇಲಾಖೆಯಿಂದ ನನಗೆ ರಕ್ಷಣೆ ನೀಡಬೇಕು” ಎಂದು ಕೇಳಿದ್ದೇನೆ” ಎಂದು ತಿಳಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...