ಆದಾಯ ಹೆಚ್ಚಳಕ್ಕೆ ಕಟ್ಟಡಗಳನ್ನು ಬಾಡಿಗೆಗೆ ನೀಡಲು ಯೋಜಿಸಿದ ರಸ್ತೆ ಸಾರಿಗೆ ನಿಗಮಗಳು

Date:

  • ಕೆಎಸ್‌ಆರ್‌ಟಿಸಿಯ 1,640 ಅಂಗಡಿ ಮತ್ತು ಕಟ್ಟಡಗಳ ಪೈಕಿ 360 ಖಾಲಿ ಇವೆ
  • ಅಂಗಡಿ ಮತ್ತು ಕಟ್ಟಡಗಳ ಬಾಡಿಗೆಯು ಸಾರಿಗೆ ನಿಗಮಗಳಿಗೆ ಆದಾಯದ ಪ್ರಮುಖ ಮೂಲ

ರಾಜ್ಯಾದ್ಯಂತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ), ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಕೆಕೆಆರ್‌ಟಿಸಿ), ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಹಾಗೂ ಟ್ರಾಫಿಕ್ ಟ್ರಾನ್ಸಿಟ್ ಮ್ಯಾನೇಜ್‌ಮೆಂಟ್ ಸೆಂಟರ್‌ಗಳ (ಟಿಟಿಎಂಸಿ) ವಾಣಿಜ್ಯ ಸಂಕೀರ್ಣಗಳು ಮತ್ತು ಕಟ್ಟಡಗಳಲ್ಲಿ ಅನೇಕ ಅಂಗಡಿಗಳು ಖಾಲಿ ಇದ್ದು, ಇವುಗಳನ್ನು ಬಾಡಿಗೆಗೆ ನೀಡಲು ನಿಗಮಗಳು ಯೋಜಿಸಿವೆ ಎಂದು ತಿಳಿದುಬಂದಿದೆ.

ಹಣದ ಕೊರತೆಯಿರುವ ಹಿನ್ನೆಲೆ ಆದಾಯದ ಮೂಲವನ್ನು ಹೆಚ್ಚಿಸಿಕೊಳ್ಳುವ ನಿಟ್ಟಿನಲ್ಲಿ ಬಸ್ ನಿಗಮಗಳು ಅಂಗಡಿಗಳು ಮತ್ತು ಕಟ್ಟಡಗಳನ್ನು ಬಾಡಿಗೆಗೆ ನೀಡಲು ಯೋಜನೆ ಪ್ರಾರಂಭಿಸಿವೆ.

ಕೆಎಸ್‌ಆರ್‌ಟಿಸಿಯ 1,640 ಅಂಗಡಿ ಮತ್ತು ಕಟ್ಟಡಗಳ ಪೈಕಿ 360 ಖಾಲಿ ಇವೆ. ಬಿಎಂಟಿಸಿಯ 363 ಕಟ್ಟಡ ಮತ್ತು ಅಂಗಡಿ ಇದ್ದು, ಅವುಗಳಲ್ಲಿ 105 ಖಾಲಿ ಇವೆ. ಕೆಕೆಆರ್‌ಟಿಸಿಯಲ್ಲಿ 988 ಅಂಗಡಿ ಮತ್ತು ಕಟ್ಟಡಗಳಿದ್ದು, ಈ ಪೈಕಿ 222 ಖಾಲಿ ಇವೆ. ಆದರೆ, ಎನ್‌ಡಬ್ಲೂಕೆಎಸ್‌ಆರ್‌ಟಿಸಿ ಅಡಿಯಲ್ಲಿ ಯಾವುದೇ ಅಂಗಡಿಗಳು ಮತ್ತು ಕಟ್ಟಡಗಳು ಖಾಲಿ ಇಲ್ಲ ಎಂದು ರಾಜ್ಯ ಸಾರಿಗೆ ಬಸ್ ನಿಗಮದ ಮೂಲಗಳು ತಿಳಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಂಗಡಿಗಳು ಮತ್ತು ಕಟ್ಟಡಗಳ ಬಾಡಿಗೆಯು ಸಾರಿಗೆ ನಿಗಮಗಳಿಗೆ ಆದಾಯದ ಪ್ರಮುಖ ಮೂಲವಾಗಿದೆ. ಈ ಜಾಗಗಳನ್ನು ಬಾಡಿಗೆಗೆ ನೀಡಲು ಆನ್‌ಲೈನ್‌ನಲ್ಲಿ ಟೆಂಡರ್ ಆಹ್ವಾನಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಸ್ನೇಹಿತನ ಪ್ರೀತಿಗೆ ಹತ್ಯೆಯಾದ ಮಾರ್ವೇಶ್

“2022-23ರಲ್ಲಿ ಅಂಗಡಿ, ಕಟ್ಟಡ ಹಾಗೂ ಕಾರ್ಗೋ ಬಾಡಿಗೆ ನೀಡುವ ಮೂಲಕ ಕೆಎಸ್‌ಆರ್‌ಟಿಸಿ ₹234 ಕೋಟಿ ಗಳಿಸಿದೆ. ಖಾಲಿ ಇರುವ ಅಂಗಡಿ, ಕಟ್ಟಡಗಳನ್ನು ಬಾಡಿಗೆಗೆ ನೀಡಿದರೆ ಆದಾಯ ಹೆಚ್ಚುತ್ತದೆ” ಎಂದು ಮೂಲಗಳು ತಿಳಿಸಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...