ರಸ್ತೆಗುಂಡಿ ಹಾವಳಿ | ಪದಕಗಳನ್ನೇ ರಸ್ತೆಗುಂಡಿಗೆ ಎಸೆದ ಕಲಾವಿದ ಬಾದಲ್ ನಂಜುಂಡಸ್ವಾಮಿ

Date:

  • ಕಲೆಯನ್ನು ಜನರ ಸಮಸ್ಯೆಗಳ ವಿರುದ್ಧ ಅಸ್ತ್ರವಾಗಿ ಬಳಸಿಕೊಳ್ಳುತ್ತಿರುವ ಬಾದಲ್
  • ಆಡಳಿತದ ಗಮನ ಸೆಳೆಯಲು ಹಲವಾರು ರೀತಿಯಲ್ಲಿ ವಿನೂತವಾಗಿ ಹೋರಾಟ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರಸ್ತೆಗುಂಡಿಗಳ ಸಮಸ್ಯೆಗೆ ಇನ್ನೂ ಪರಿಹಾರ ದೊರೆತಿಲ್ಲ. ಈಗಲೂ ಹಲವು ರಸ್ತೆಗಳಲ್ಲಿ ಗುಂಡಿಗಳು ರಾರಾಜಿಸುತ್ತಿವೆ. ಇತ್ತೀಚೆಗೆ ಮಳೆ ಸುರಿದ ಪರಿಣಾಮ ಅವುಗಳು ಮತ್ತಷ್ಟು ಹಿಗ್ಗಿವೆ. ಮುಖ್ಯರಸ್ತೆಗಳಲ್ಲಿ ದೊಡ್ಡ ಗುಂಡಿಗಳು ವಾಹನ ಸವಾರರನ್ನು ಬಲಿಪಡೆಯಲು ಕಾಯುತ್ತಿವೆ. ನಗರದಲ್ಲಿ ಬಹುತೇಕ ರಸ್ತೆಗುಂಡಿಗಳನ್ನು ಮುಚ್ಚಿದ್ದೇವೆ ಎನ್ನುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕಣ್ಣಿಗೆ ಈ ಗುಂಡಿಗಳು ಕಾಣುತ್ತಿಲ್ಲವೆಂಬುದು ದುರದೃಷ್ಟಕರ ಸಂಗತಿ.

ರಸ್ತೆಗುಂಡಿಗಳ ವಿರುದ್ಧ ಬಿಬಿಎಂಪಿಯ ಅಧಿಕಾರಿಗಳ ಗಮನ ಸೆಳೆಯಲು ಕಲೆಯ ವಿನೂತನ ಪ್ರಯೋಗಗಳ ಮೂಲಕ ಗಮನ ಸೆಳೆಯುತ್ತಾ ಬಂದಿರುವ ಕಲಾವಿದ ಬಾದಲ್‌ ನಂಜುಂಡಸ್ವಾಮಿ, ಇದೀಗ ಮತ್ತೊಂದು ವಿಶೇಷ ಪ್ರಯೋಗಕ್ಕೆ ಕೈಹಾಕಿದ್ದಾರೆ.

ನಗರದ ದಿಣ್ಣೂರು ಮುಖ್ಯ ರಸ್ತೆಯಲ್ಲಿ ದೊಡ್ಡ ಗುಂಡಿಯೊಂದು ಬಿದ್ದಿದ್ದು, ಬಿಬಿಎಂಪಿಯ ಅಧಿಕಾರಿಗಳು ಯಾವುದೇ ರೀತಿಯ ಕ್ರಮ ಕೈಗೊಂಡಿಲ್ಲ, ಗುಂಡಿಯನ್ನೂ ಮುಚ್ಚಿಲ್ಲ. ವಾಹನ ಸವಾರರು ಅದೇ ರಸ್ತೆಗುಂಡಿಯಲ್ಲಿ ವಾಹನ ಚಾಲನೆ ಮಾಡುವಂತಹ ಪರಿಸ್ಥಿತಿ ಎದುರಾಗಿದೆ. ಇದೀಗ ಬಾದಲ್ ನಂಜುಂಡಸ್ವಾಮಿ ಅವರು ರಚಿಸಿರುವ ಚಿತ್ರದಲ್ಲಿ ಮೆಡಲ್‌ಗಳನ್ನು ಬೃಹತ್ ರಸ್ತೆ ಗುಂಡಿಯಲ್ಲಿ ಎಸೆದು ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಕೃತಿಯ ಮೂಲಕ ಜನರ ಗಮನ ಸೆಳೆದಿದ್ದಾರೆ. ಬಾದಲ್ ನಂಜುಡಸ್ವಾಮಿ 2

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಟ್ವೀಟ್‌ ಮಾಡಿರುವ ಬಾದಲ್ ನಂಜುಂಡಸ್ವಾಮಿ ಅವರು, “ನನ್ನನ್ನು ಹೊರತುಪಡಿಸಿ ಈ ಪದಕಗಳನ್ನು ಇಲ್ಲಿ ಎಸೆಯಲು ಯಾರೂ ಇಷ್ಟಪಡುವುದಿಲ್ಲ” ಎಂದು ಬರೆದುಕೊಂಡಿದ್ದಾರೆ.

ಇದಕ್ಕೆ ಹಲವು ಜನ ಪ್ರತಿಕ್ರಿಯೆ ನೀಡಿದ್ದು, “ಬಿಬಿಎಂಪಿ ಅಧಿಕಾರಿಗಳು ಕಣ್ಣಿದ್ದೂ ಕರುಡಾಗಿರುವುದು ಯಾಕೆ? ಕಳಪೆ ಗುಣಮಟ್ಟದ ಕೆಲಸಗಳು, ಅದನ್ನ ರಿಪೇರಿ ಮಾಡಿಸುವ ಹೊಣೆ ಬ್ಲಾಕ್ ಮಟ್ಟದಲ್ಲಿ ಯಾಕೆ ವಹಿಸುತ್ತಿಲ್ಲ? ಎಲ್ಲದಕ್ಕೂ ಹಣವಿಲ್ಲ ಎಂದು ನೆಪವೊಡ್ಡಿ ಕೈಚೆಲ್ಲುವುದೂ ಸರಿಯಲ್ಲ” ಎಂದು ಸಮಂತ್ ಕೆರೂರ ಎಂಬುವವರು ಟ್ವೀಟ್‌ ಮಾಡಿದ್ದಾರೆ.

ಜಗತ್ ಎಂಬುವವರು, “ನಮ್ಮ ಜನ ಇದನ್ನೂ ನಿಜವಾದ ಬಂಗಾರದ ಪದಕ ಎಂದು ಎತ್ತಿಕೊಂಡು ಹೋಗುತ್ತಾರೆ” ಎಂದಿದ್ದಾರೆ.

ಯಾರಿದು ಬಾದಲ್ ನಂಜುಂಡಸ್ವಾಮಿ?

ಕರ್ನಾಟಕ ಮೂಲದ ಬಾದಲ್ ನಂಜುಂಡಸ್ವಾಮಿ ಅವರು ಚಿತ್ರ ಕಲಾವಿದ, ಕಲಾನಿರ್ದೇಶಕನಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದ್ದಾರೆ. ಅನೇಕ ಸಿನಿಮಾಗಳಲ್ಲಿ ಸಣ್ಣಪುಟ್ಟ ಪಾತ್ರ ಮಾಡಿದ್ದಾರೆ, ಕಲಾನಿರ್ದೇಶಕರಾಗಿ ದುಡಿದಿದ್ದಾರೆ.  ಬಾದಲ್ ನಂಜುಡಸ್ವಾಮಿ

ಇವರು ತಮ್ಮ ಕಲೆಯ ಮೂಲಕ ಸಾಮಾಜಿಕ ಸಮಸ್ಯೆಗಳತ್ತ ಬೆಳಕು ಚೆಲ್ಲುತ್ತಿದ್ದಾರೆ. ಪ್ರಭುತ್ವದ ಗಮನ ಸೆಳೆಯುತ್ತಿದ್ದಾರೆ. ಬಾದಲ್ ಅವರು ಸುಮಾರು 12-13 ವರ್ಷಗಳ ಹಿಂದೆ, ಮೈಸೂರು ಅರಮನೆಯ ಸಮೀಪ ನಗರದ ರಸ್ತೆಗಳ ದುಸ್ಥಿತಿಯನ್ನು ಬಿಂಬಿಸುವ ಉದ್ದೇಶದಿಂದ ಈಜುಕೊಳದ ಚಿತ್ರ ಬಿಡಿಸುವ ಮೂಲಕ ಜನಪ್ರಿಯತೆ ಪಡೆದಿದ್ದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಅಪಾರ್ಟ್‌ಮೆಂಟ್‌ನ ಲಿಫ್ಟ್‌ನಲ್ಲಿ 10 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಫುಡ್‌ ಡೆಲಿವರಿ ಬಾಯ್

ರಾಜಧಾನಿಯಲ್ಲಿ ರಸ್ತೆಗುಂಡಿಗಳಿರುವ ಹಲವು ಕಡೆ ಚಿತ್ರಗಳನ್ನು ಬಿಡಿಸುವ ಮೂಲಕ ಅಧಿಕಾರಿಗಳ ಗಮನ ಸೆಳೆದಿದ್ದರು. ನಾಗರಿಕರ ಸಮಸ್ಯೆಗಳ ವಿರುದ್ಧ ಪ್ರತಿಭಟನೆ ಮಾಡಲು ಕಲೆಯನ್ನು ಬಳಸಿಕೊಂಡಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...