ರೌಡಿಶೀಟರ್ ಶಿವಪ್ರಕಾಶ್ ಕೊಲೆ ಪ್ರಕರಣ: ಬಿಜೆಪಿ ಶಾಸಕ ಬೈರತಿ ಬಸವರಾಜ್ ಎ5 ಆರೋಪಿ

Date:

ಭಾರತಿನಗರ ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ, ಕೆ ಆರ್‌ ಪುರಂನ ಬಿಜೆಪಿ ಶಾಸಕ ಬೈರತಿ ಬಸವರಾಜ್ ಹೆಸರು ತಳುಕು ಹಾಕಿಕೊಂಡಿದೆ.

ಕೊಲೆ ಸಂಬಂಧ ಶಿವಪ್ರಕಾಶ್‌ ತಾಯಿ ವಿಜಯಕ್ಷ್ಮಿ ಭಾರತಿನಗರ ಠಾಣೆಗೆ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ. ಬೈರತಿ ಬಸವರಾಜ್‌ ಎ5 ಆರೋಪಿಯಾಗಿದ್ದು ಜಗದೀಶ್ ಎ1 , ಕಿರಣ್ ಎ2 ವಿಮಲ್ ಎ3, ಅನಿಲ್ ಎ4 ಆರೋಪಿಗಳಾಗಿದ್ದಾರೆ.

ಕಿತ್ತಕನೂರು ಜಾಗದ ವಿಚಾರವಾಗಿ ಕೊಲೆ ಮಾಡಲಾಗಿದೆ. ಬಿಳಿ ಬಣ್ಣದ ಸ್ಕಾರ್ಪಿಯೋದಲ್ಲಿ 8 ರಿಂದ 9 ಮಂದಿ ಬಂದು ಮಚ್ಚಿನಿಂದ ಹೊಡೆದಿದ್ದಾರೆ. ಕೊಲೆ ಮಾಡಿರುವ ಆರೋಪಿಗಳು ಹಲವು ಬಾರಿ ಮಗನಿಗೆ ಬೆದರಿಕೆ ಹಾಕಿದ್ದರು. ಮಾಜಿ ಸಚಿವ ಬೈರತಿ ಬಸವರಾಜ್ , ಜಗದೀಶ್ ಮತ್ತು ಇತರರಿಂದ ನನಗೆ ಪ್ರಾಣ ಬೆದರಿಕೆಯಿದೆ ಎಂದು ಮಗ ಹಲವು ಬಾರಿ ಹೇಳಿದ್ದ. ಬಸವರಾಜ್ ಕುಮ್ಮಕ್ಕಿನಿಂದಲೇ ಕೊಲೆ ನಡೆದಿದೆ ಎಂದು ಶಿವಪ್ರಕಾಶ್ ತಾಯಿ ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಕಾನೂನು ಅಸ್ತ್ರವಾಗದಿರಲಿ, ಬಡವರ ಬಗ್ಗೆ ವಿವೇಚನೆಯಿಂದ ಬಳಸಲಿ

ಈ ಫೆಬ್ರವರಿ 21 ರಂದು ಶಿವಪ್ರಕಾಶ್‌ ಜಗದೀಶ್‌ ಮತ್ತು ಇತರರ ವಿರುದ್ಧ ಭಾರತಿ ನಗರ ಠಾಣೆಯಲ್ಲಿ ದೂರು ನೀಡಿದ್ದ. ಕಿತ್ತಕನೂರು ಬಳಿ ನಾನು ಜಾಗವನ್ನು ಖರೀದಿಸಿದ್ದೆ. ಈ ಜಾಗವನ್ನು ಮಾರಾಟ ಮಾಡಬೇಕೆಂದು ಜಗದೀಶ್‌ ಮತ್ತು ಇತರರು ನನಗೆ ಜೀವ ಬೆದರಿಕೆ ಹಾಕಿದ್ದಾರೆ. ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ದೂರು ನೀಡಿದ್ದ. ಈ ಸಂಬಂಧ ಜಗದೀಶ್‌ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಾಗಿತ್ತು.

ಬೆದರಿಕೆ ಹಾಕಿದ್ದ ವಿಡಿಯೊ ಸಮೇತ ಬೈರತಿ ಬಸವರಾಜ್, ಜಗದೀಶ್ ಅಲಿಯಾಸ್ ಜಗ್ಗ ಹಾಗೂ ಕಿರಣ್ ಸಹಚರರ ವಿರುದ್ಧ ಶಿವಪ್ರಕಾಶ್ ದೂರು ನೀಡಿದ್ದಾರೆ ಎನ್ನಲಾಗಿದೆ. ಭಾರತಿನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿತ್ತು. ಇದೀಗ ದೂರು ಕೊಟ್ಟ ನಾಲ್ಕು ತಿಂಗಳಲ್ಲಿ ಶಿವಪ್ರಕಾಶ್ ಕೊಲೆಯಾಗಿದ್ದು, ಅದೇ ಗ್ಯಾಂಗ್‌ನಿಂದ ಕೊಲೆಯಾಗಿರುವ ಬಗ್ಗೆ ಪೊಲೀಸರ ಶಂಕೆ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...