ಬೆಂಗಳೂರು: ಆರ್‌ಟಿಒ ಕಣ್ತಪ್ಪಿಸಿ ಓಡಾಡುತ್ತಿದ್ದ ಫೆರಾರಿ ಕಾರಿಗೆ 1.58 ಕೋಟಿ ರೂ. ದಂಡ

Date:

ಕೋಟ್ಯಂತರ ರೂ. ತೆರಿಗೆ ವಂಚಿಸಿ ಬೆಂಗಳೂರು ನಗರದಲ್ಲಿ ಓಡಾಡಿಕೊಂಡಿದ್ದ ಐಷಾರಾಮಿ ಕಾರು ಮಾಲೀಕನಿಗೆ ಆರ್‌ಟಿಓ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ. 1.58 ಕೋಟಿ ರೂ. ಬಾಕಿ ತೆರಿಗೆ ಪಾವತಿಸಲು ಸೂಚನೆ ನೀಡಿದ್ದು, ನಿಗದಿತ ಅವಧಿಯೊಳಗೆ ತೆರಿಗೆ ಪಾವತಿಸದಿದ್ದರೆ ಕಾನೂನು ಕ್ರಮ ಜರುಗಿಸುವುದಾಗಿ ಎಚ್ಚರಿಸಿದ್ದಾರೆ.

ಸುಮಾರು ಏಳುವರೆ ಕೋಟಿ ರೂ. ಮೌಲ್ಯದ ಫೆರಾರಿ ಕಾರು ಖರೀಸಿದಿದ್ದ ಮಾಲೀಕನೊಬ್ಬ ತೆರಿಗೆ ಪಾವತಿಸದೇ ಓಡಾಡಿಕೊಂಡಿದ್ದ. ಮಹಾರಾಷ್ಟ್ರ ನೋಂದಣಿ ಹೊಂದಿದ ಕಾರು ಇದಾಗಿದೆ.

ಮಹಾರಾಷ್ಟ್ರದಲ್ಲಿ 20 ಲಕ್ಷ ರೂ. ತೆರಿಗೆ ಪಾವತಿಸಿ 2023ರ ಸೆಪ್ಟೆಂಬರ್‌ನಿಂದಲೂ ರಾಜ್ಯದಲ್ಲಿ ಅನಧಿಕೃತವಾಗಿ ಓಡಾಟ ನಡೆಸುತ್ತಿದ್ದ. ಕಾರಿನ ಅನಧಿಕೃತ ಓಡಾಟದ ಬಗ್ಗೆ ಆರ್‌ಟಿಓಗೆ ಸಂಚಾರಿ ಪೊಲೀಸರು ಮಾಹಿತಿ ನೀಡಿದ್ದರು. ಬುಧವಾರ (ಜು.2) ಬೆಂಗಳೂರಿನ ಲಾಲ್‌ ಬಾಗ್‌ ಬಳಿ ಕಾರನ್ನು ತಡೆಹಿಡಿದ ಆರ್‌ಟಿಓ ಅಧಿಕಾರಿಗಳು ತಪಾಸಣೆ ನಡೆಸಿದಾಗ ತೆರಿಗೆ ವಂಚನೆ ಮಾಡಿರುವುದು ಬೆಳಕಿಗೆ ಬಂದಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಅಪಾಯಕಾರಿ ಸೈಬರ್ ಅಪರಾಧ ಕುರಿತು ಜನ ಜಾಗೃತರಾಗಬೇಕಿದೆ

ನಂತರ ಕಾರನ್ನು ವಶಕ್ಕೆ ಪಡೆದ ಅಧಿಕಾರಿಗಳು ಜಯನಗರ 5ನೇ ಬ್ಲಾಕ್‌ನಲ್ಲಿರುವ ಮಾಲೀಕನ ನಿವಾಸದ ಮುಂದೆಯೇ ಮನೆ ಮುಂದೆಯೇ ಕಾರು ನಿಲ್ಲಿಸಿದ್ದಾರೆ. ಅಧಿಕಾರಿಗಳು ಸ್ಥಳದಲ್ಲೇ ಇದ್ದು ತೆರಿಗೆ ಪಾವತಿಸಲು ಸಂಜೆ ವರೆಗೆ ಕಾಲಾವಕಾಶ ನೀಡಲಾಗಿದೆ.

ಟ್ಯಾಕ್ಸ್ ಕಟ್ಟಲು ಕಾರು ಮಾಲೀಕರು ಸಮಯಾವಕಾಶ ಕೇಳಿದ ಹಿನ್ನೆಲೆ ಗಡುವು ನೀಡಿದ್ದಾರೆ. ಆದಷ್ಟು ಬೇಗ 1.58 ಕೋಟಿ ತೆರಿಗೆ ಪಾವತಿಸದಿದ್ದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ಅಲ್ಲಿಯ ತನಕ ಕಾರು ಆರ್‌ಟಿಓ ಅಧಿಕಾರಿಗಳ ಸುಪರ್ದಿಯಲ್ಲೇ ಇರಲಿದೆ ಎಂದು ಆರ್‌ಟಿಓ ಅಧಿಕಾರಿಗಳು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...