ವೇತನ ಬಾಕಿ | ಜು. 8ರಿಂದ ಸಾಮೂಹಿಕ ರಜೆಗೆ ನಿರ್ಧರಿಸಿದ 108 ಆ್ಯಂಬುಲೆನ್ಸ್​ ಸಿಬ್ಬಂದಿ

Date:

  • ಸರ್ಕಾರದಿಂದ ಹಣ ಬಂದಿಲ್ಲ ಎನ್ನುತ್ತಿರುವ ಜಿವಿಕೆ ಕಂಪನಿ
  • ಜೂನ್ ತಿಂಗಳು ಸೇರಿ ನಾಲ್ಕು ತಿಂಗಳು ವೇತನ ಬಾಕಿ

ರಾಜ್ಯ ಸರ್ಕಾರದ 108-ಆರೋಗ್ಯ ಕವಚ ಯೋಜನೆಯಡಿ ಆ್ಯಂಬುಲೆನ್ಸ್​ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗೆ ಕಳೆದ ನಾಲ್ಕು ತಿಂಗಳಿನಿಂದ ವೇತನ ಪಾವತಿಯಾಗಿಲ್ಲ. ಜು. 7ರೊಳಗೆ ಬಾಕಿ ಉಳಿಸಿಕೊಂಡಿರುವ ವೇತನ ಪಾವತಿಯಾಗಬೇಕು. ಇಲ್ಲದಿದ್ದರೆ, ಜು. 8ರಿಂದ ಸಾಮೂಹಿಕ ರಜೆ ಹಾಕಲಾಗುವುದು ಎಂದು ನೌಕರರು ಎಚ್ಚರಿಕೆ ನೀಡಿದ್ದಾರೆ.

ಈ ಬಗ್ಗೆ ಈ ದಿನ.ಕಾಮ್‌ ಜತೆಗೆ ಮಾತನಾಡಿದ 108 ಆಂಬ್ಯುಲೆನ್ಸ್‌ ಸೇವೆಯ ನೌಕರರ ಸಂಘದ ರಾಜ್ಯಾಧ್ಯಕ್ಷ ಶ್ರೀಶೈಲ ಹಳ್ಳೂರು, “ಈ ಯೋಜನೆಯನ್ನು ನಿರ್ವಹಣೆ ಮಾಡುತ್ತಿರುವ ಜಿವಿಕೆ-ಇಎಂಆರ್‌ಐ ಸಂಸ್ಥೆಯು ಕಳೆದ ನಾಲ್ಕು ತಿಂಗಳಿನಿಂದ ನಮಗೆ ವೇತನ ಪಾವತಿ ಮಾಡಿಲ್ಲ. ಎರಡು ತಿಂಗಳು ವೇತನ ನೀಡದಿದ್ದರೆ, ಹೇಗೋ ಒದ್ದಾಡಿ ಜೀವನ ನಡೆಸಬಹುದು. ಆದರೆ, ಕಳೆದ ನಾಲ್ಕು ತಿಂಗಳಿನಿಂದ ನಮಗೆ ವೇತನವಾಗಿಲ್ಲ. ಇದರಿಂದ ನಾವು ದುಡಿದು ಉಪಯೋಗವಿಲ್ಲದಂತಾಗಿದೆ. ಜೀವನ ನಡೆಸುವುದು ತುಂಬಾ ಕಷ್ಟವಾಗಿದೆ” ಎಂದು ತಿಳಿಸಿದರು.

“ಈ ಜೂನ್‌ ತಿಂಗಳಿನಲ್ಲಿ ಶಾಲೆಗಳ ಆರಂಭವಾಗಿದೆ. ಮಕ್ಕಳ ಶಾಲೆಯ ಶುಲ್ಕ, ಪುಸ್ಕಕ ಸೇರಿದಂತೆ ಹೆಚ್ಚಿನ ಹೊರೆ ನಮ್ಮ ಮೇಲೆ ಇರುತ್ತದೆ. ಈ ಬಗ್ಗೆ ಸಂಸ್ಥೆಯ ಪ್ರತಿನಿಧಿಗಳಿಗೆ ಹಲವು ಬಾರಿ ಮನವಿ ಮಾಡಿದ್ದೇವೆ. ಆದರೂ ಏನು ಪ್ರಯೋಜನವಾಗಿಲ್ಲ. ಈ ಜೂನ್ ತಿಂಗಳು ಸೇರಿ ನಮಗೆ ನಾಲ್ಕು ತಿಂಗಳು ವೇತನ ನೀಡಬೇಕು. ಜುಲೈ 7ರೊಳಗೆ ವೇತನ ನೀಡಬೇಕು. ಇಲ್ಲದಿದ್ದರೆ, ಜು.8ರಿಂದ ನಾವು ಸಾಮೂಹಿಕವಾಗಿ ರಜೆ ಹಾಕಿ ವೇತನ ಹಾಕುವವರೆಗೂ ಕೂಲಿ ಕೆಲಸಕ್ಕೆ ತೆರಳುತ್ತೇವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಆರೋಗ್ಯ ಕವಚ ಯೋಜನೆಯಡಿ 3,500 ನೌಕರರು ಕಾರ್ಯನಿರ್ವಹಿಸುತ್ತಿದ್ದಾರೆ. ಜಿವಿಕೆ ಗುತ್ತಿಗೆ ಕಂಪನಿ ಬಳಿ ಹೋಗಿ ವೇತನ ಕೇಳಿದರೆ, ಅವರು ಸರ್ಕಾರ ಇನ್ನೂ ಹಣ ಹಾಕಿಲ್ಲ ಎಂದು ಹೇಳುತ್ತಾರೆ. ಸರ್ಕಾರದ ಬಳಿ ಹೋಗಿ ಕೇಳಿದರೆ ಅವರಿಗೆ ಹಣ ಕಳುಹಿಸಿದ್ದೇವೆ ಎಂದು ಹೇಳುತ್ತಾರೆ. ಆದರೆ, ನಮಗೆ ವೇತನ ಇಲ್ಲ. ನಮಗೆ ಸರ್ಕಾರ ಹಿಂಬಾಕಿಯನ್ನು ಸಹ ಕೂಡಲೇ ಪಾವತಿ ಮಾಡಬೇಕು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಮಹಿಳಾ ಸೆಕ್ಯುರಿಟಿ ಗಾರ್ಡ್‌ಗೆ ಕೊಳಚೆ ನೀರು ಕುಡಿಯುವಂತೆ ಒತ್ತಾಯ: ಅಪಾರ್ಟ್‌ಮೆಂಟ್ ನಿವಾಸಿ ಕಿರುಕುಳ

ಕರ್ನಾಟಕದಲ್ಲಿ 108 ಆಂಬ್ಯುಲೆನ್ಸ್ ಕಾರ್ಯಾಚರಣೆಯನ್ನು ನಿರ್ವಹಿಸುವ ಜಿವಿಕೆ-ಇಎಂಆರ್‌ಐನ ಅಧಿಕಾರಿಯೊಬ್ಬರು ಮಾತನಾಡಿ, “ಮಾರ್ಚ್‌ನಿಂದ ಸರ್ಕಾರದಿಂದ ಯಾವುದೇ ಹಣ ಬಂದಿಲ್ಲ, ಇದರಿಂದಾಗಿ ವೇತನ ಪಾವತಿಯಾಗುತ್ತಿಲ್ಲ” ಎಂದು ತಿಳಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...