ಸಂಕ್ರಾಂತಿ ಹಬ್ಬ | ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಿದ ಕೆಎಸ್‌ಆರ್‌ಟಿಸಿ: ಖಾಸಗಿ ಬಸ್ ದರ ದುಪ್ಪಟ್ಟು

Date:

ಸಂಕ್ರಾಂತಿ ಹಬ್ಬದ ಹಿನ್ನೆಲೆ, ಬೆಂಗಳೂರಿನಿಂದ ತಮ್ಮ ತಮ್ಮ ಊರುಗಳಿಗೆ ತೆರಳುತ್ತಿರುವ ಜನರಿಗೆ ಅನುಕೂಲವಾಗಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಹೆಚ್ಚುವರಿಯಾಗಿ 400 ಬಸ್‌ಗಳ ವ್ಯವಸ್ಥೆ ಮಾಡಿದೆ ಎಂದು ತಿಳಿದುಬಂದಿದೆ.

ಹಬ್ಬದ ಹಿನ್ನೆಲೆ, ಸಂಭ್ರಮಾಚರಣೆ ಮಾಡಲು ಜನರು ತಮ್ಮ ಊರುಗಳತ್ತ ಮುಖ ಮಾಡಿದ್ದಾರೆ. ಕೆಂಪೇಗೌಡ ಬಸ್‌ ನಿಲ್ದಾಣದಲ್ಲಿ ಬಸ್‌ಗಾಗಿ ಜನ ಕಾಯುತ್ತಿದ್ದಾರೆ. ಅಲ್ಲದೇ ಕೆಲವು ಊರುಗಳಿಗೆ ತೆರಳುವ ಬಸ್‌ಗಳು ಕೂಡ ತುಂಬಿದ್ದು, ಜನರು ಆರಾಮವಾಗಿ ಪ್ರಯಾಣ ಬೆಳೆಸಲು ತೊಂದರೆ ಉಂಟಾಗಿದೆ.

ಕೆಎಸ್‌ಆರ್‌ಟಿಸಿ ಶಿವಮೊಗ್ಗ, ಬೆಂಗಳೂರು, ಉಡುಪಿ, ಬಳ್ಳಾರಿ, ಬೆಳಗಾವಿ ಕಡೆಗೆ ಹೆಚ್ಚಿನ ಜನ ಪ್ರಯಾಣಿಸುತ್ತಿದ್ದು, ಬಸ್‌ ವ್ಯವಸ್ಥೆ ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಖಾಸಗಿ ಬಸ್‌ಗಳ ದುಪ್ಪಟ್ಟು ದರ

ಹಬ್ಬ-ಹರಿದಿನ ಹಾಗೂ ರಜಾ ದಿನಗಳನ್ನು ಬಂಡವಾಳ ಮಾಡಿಕೊಂಡ ಖಾಸಗಿ ಬಸ್‌ಗಳು ದುಪ್ಪಟ್ಟು ದರ ನಿಗದಿ ಮಾಡಿ ಸಾರ್ವಜನಿಕರಿಂದ ಹಣ ವಸೂಲಿ ಮಾಡುತ್ತಿದ್ದಾರೆ.

ಈ ವರ್ಷದ ಮೊದಲ ಹಬ್ಬ ಸಂಕ್ರಾಂತಿ ಜನವರಿ 15ರಂದು ರಜೆ ಇದೆ. ಜನವರಿ 14 ರಂದು ರವಿವಾರ ರಜೆಯಿದೆ. ಇನ್ನು ಜನವರಿ 13ರಂದು ತಾರೀಕು ಎರಡನೇ ಶನಿವಾರದ ಹಿನ್ನೆಲೆ ರಜೆಯಿದೆ. ಮೂರು ದಿನ ರಜೆ ಸಿಕ್ಕ ಹಿನ್ನೆಲೆ, ಜನರು ತಮ್ಮ ಊರುಗಳತ್ತ ತೆರಳುತ್ತಿದ್ದಾರೆ.

ಆದರೆ, ಖಾಸಗಿ ಬಸ್‌ಗಳ ದರ ದುಪ್ಪಟ್ಟಿದ್ದು, ಇದರಿಂದ ಜನರು ಪರದಾಡುವಂತಾಗಿದೆ. ಸಾಮಾನ್ಯ ದಿನಗಳಲ್ಲಿ ₹400 ರಿಂದ ₹700 ವರೆಗೂ ಇರುವ ಖಾಸಗಿ ಬಸ್‌ ಟಿಕೆಟ್‌ ದರ ಹಬ್ಬ ಹರಿದಿನ ಅಥವಾ ರಜಾದಿನ ಬಂದರೆ ₹1500 ರಿಂದ ₹3000ವರೆಗೂ ದರ ಇದೆ.

ಈ ಸುದ್ದಿ ಓದಿದ್ದೀರಾ? ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಗಾಯಕಿ ಪ್ರಭಾ ಅತ್ರೆ ನಿಧನ

ಬೆಂಗಳೂರು-ಶಿವಮೊಗ್ಗ ಖಾಸಗಿ ಬಸ್ ದರ ₹1,000-₹1,250 ಇದೆ. ಬೆಂಗಳೂರು-ಹುಬ್ಬಳಿ ₹1,700-₹2,500, ಬೆಂಗಳೂರು-ಮಂಗಳೂರು ₹1,300-₹2,000, ಬೆಂಗಳೂರು-ಕಲಬುರುಗಿ ₹1,600-₹2200, ಬೆಂಗಳೂರು-ಮಡಿಕೇರಿ ₹1,150-₹1,600, ಬೆಂಗಳೂರು-ಧಾರವಾಡ ₹1,200-₹1,550, ಬೆಂಗಳೂರು-ಬೆಳಗಾವಿ ₹1,300-₹1,800, ಬೆಂಗಳೂರು–ಚಿಕ್ಕಮಗಳೂರು ₹1,100-₹1,300, ಬೆಂಗಳೂರು–ಬೀದರ್ ₹1,600-₹2,000 ದರ ಇದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...