ಬಡವರಿಗೆ ಸಂವಿಧಾನ ನೀಡಿರುವ ಹಕ್ಕುಗಳನ್ನು ರಕ್ಷಿಸಲು ಪ್ರಯತ್ನಿಸಿ: ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಕಿವಿಮಾತು

Date:

ರಾಜ್ಯದಲ್ಲಿನ ಬಡವರು, ದಲಿತರು, ಅಲ್ಪಸಂಖ್ಯಾತರ ಶ್ರೇಯೋಭಿವೃದ್ಧಿಗೆ ವಿಶೇಷ ಕಾಳಜಿಯಿಂದ ಹಾಗೂ ಹೊಸ ಉತ್ಸಾಹದಿಂದ ಎಲ್ಲರೂ ಕಾರ್ಯ ನಿರ್ವಹಿಸಬೇಕು. ಬಡವರ ಬಗ್ಗೆ ಕರುಣೆಯಲ್ಲ, ಸಂವಿಧಾನ ಅವರಿಗೆ ನೀಡಿರುವ ಅವರ ಹಕ್ಕುಗಳ ರಕ್ಷಣೆ ಮಾಡುವ ಪ್ರಯತ್ನ ಮಾಡಬೇಕು ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿವಿಮಾತು ಹೇಳಿದರು.

ಇಂದು(ಜನವರಿ 2) ವಿಧಾನಸೌಧದ ಸಭಾಂಗಣದಲ್ಲಿ ಕೆಎಎಸ್ ಅಧಿಕಾರಿಗಳ ಸಂಘದ ಕ್ಯಾಲೆಂಡರ್ ಮತ್ತು ದಿನಚರಿಯನ್ನು ಬಿಡುಗಡೆಗೊಳಿಸಿ ಮಾತನಾಡಿದ ಸಿಎಂ, “ಎಲ್ಲಾ ಅಧಿಕಾರಿಗಳು ಜಾತ್ಯಾತೀತ ದೃಷ್ಠಿಕೋನದಿಂದ ಕಾರ್ಯ ನಿರ್ವಹಿಸಬೇಕು. ಆಗಮಾತ್ರ ಸಮಸಮಾಜ ನಿರ್ಮಾಣ ಸಾಧ್ಯ” ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಸಿಎಂ ಸಿದ್ದರಾಮಯ್ಯ ಅವರಿಗೆ ಸುಪ್ರೀಂ ಕೋರ್ಟ್‌ ನೋಟಿಸ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಡವರ ಒಳಿತಿಗೆ ಕರ್ತವ್ಯ ನಿರ್ವಹಿಸುವಾಗ, ಅಧಿಕಾರಿಗಳು ಪ್ರಾಮಾಣಿಕವಾಗಿರುವುದು ಮಾತ್ರವಲ್ಲದೆ, ವ್ಯವಸ್ಥೆಯನ್ನು ಸರಿ ಮಾಡುವ ಪ್ರಯತ್ನವನ್ನು ಮಾಡಬೇಕು. ತಹಶೀಲ್ದಾರ್, ಸಹಾಯಕ ಆಯುಕ್ತರು ಸೇರಿದಂತೆ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು ತಮ್ಮ ಕಾರ್ಯ ವ್ಯಾಪ್ತಿಯಲ್ಲಿ ಎಲ್ಲರಿಗೂ ನ್ಯಾಯ ಒದಗಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಬೇಕು” ಎಂದರು.

ಈ ವೇಳೆ ಅಧಿಕಾರಿಗಳ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದರು. “ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡ ಪೂರ್ಣಗೊಳಿಸಲು ಹೆಚ್ಚುವರಿ ಅನುದಾನ ಒದಗಿಸಲಾಗುವುದು. ಪದೋನ್ನತಿ ಸೇರಿದಂತೆ ಸಂಘದ ಬೇಡಿಕೆಗಳನ್ನು ಈಡೇರಿಸಲು ಪ್ರಯತ್ನಿಸಲಾಗುವುದು” ಎಂದು ಭರವಸೆ ನೀಡಿದರು.

“ರಾಜಕೀಯ ಸ್ವಾತಂತ್ರ್ಯ ಸಾಮಾಜಿಕ ಮತ್ತು ಆರ್ಥಿಕ ಸ್ವಾತಂತ್ರ್ಯದ ಮೇಲೆ ನಿಂತಿದೆ. ರಾಜಕೀಯ ಸ್ವಾತಂತ್ರ್ಯ ಯಶಸ್ವಿಯಾಗಬೇಕಾದರೆ ಎಲ್ಲರಿಗೂ ಸಾಮಾಜಿಕ ಮತ್ತು ಆರ್ಥಿಕ ಸ್ವಾತಂತ್ರ್ಯ ಸಿಗಬೇಕಿದೆ. ಇಲ್ಲವಾದಲ್ಲಿ ಅಸಮಾನತೆ ಹೋಗಲು ಸಾಧ್ಯವಿಲ್ಲ, ಅಂತೆಯೇ ಅಸಮಾನತೆ ತೊಲಗದೇ, ಸಮಾಜದಲ್ಲಿ ಶಾಂತಿ ನೆಮ್ಮದಿ ನೆಲೆಸುವುದೂ ಅಸಾಧ್ಯ” ಎಂಬ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಮಾತನ್ನು ನೆನೆಪಿಸಿಕೊಂಡರು.

ಇದನ್ನು ಓದಿದ್ದೀರಾ? ಕೆಎಎಸ್ ಅಧಿಕಾರಿಗಳ ಜೇಷ್ಠತಾ ಪಟ್ಟಿ ಸಿದ್ಧವಿದೆ: ಸಿಎಂ ಸಿದ್ದರಾಮಯ್ಯ

“ಎಲ್ಲರಿಗೂ ಸಮಾನ ಅವಕಾಶ ದೊರೆತು, ಸಮಾಜದ ಮುಖ್ಯವಾಹಿನಿಗೆ ಬರುವಂತಾದಾಗ ಮಾತ್ರ ಸಮಾನತೆ ಬರಲು ಸಾಧ್ಯ. ನಮ್ಮ ಸಮಾಜ ಜಾತಿ ವ್ಯವಸ್ಥೆಯಿಂದ ಕೂಡಿದೆ. ಜಾತಿ ಮತ್ತು ವರ್ಗ ವ್ಯವಸ್ಥೆ ಅಳಿಯಬೇಕಾದರೆ ಸಾಮಾಜಿಕ ಮತ್ತು ಆರ್ಥಿಕ ಸ್ವಾತಂತ್ರ್ಯ ಸಿಗಲೇಬೇಕು” ಎಂದು ತಿಳಿಸಿದರು.

“ಸ್ವಾತಂತ್ರ್ಯ ಬಂದು 7 ದಶಕಗಳು ಕಳೆದರೂ ಇನ್ನೂ ಜಾತಿ ವ್ಯವಸ್ಥೆ ನಿರ್ಮೂಲನೆಯಾಗಿಲ್ಲ. ಎಲ್ಲಾ ಅಧಿಕಾರಿಗಳು ಜಾತ್ಯಾತೀತವಾಗಿ ಕಾರ್ಯ ನಿರ್ವಹಿಸಬೇಕು. ನಮ್ಮ ದೃಷ್ಟಿಕೋನ ಜಾತ್ಯಾತೀತವಾಗಿರಬೇಕು. ಯಾವುದೇ ಕಾರಣಕ್ಕೂ ಸ್ವಜಾತಿ ಪಕ್ಷಪಾತ ಮಾಡಬಾರದು. ಆಗ ಮಾತ್ರ ಸಮ ಸಮಾಜ ನಿರ್ಮಾಣ ಸಾಧ್ಯ” ಎಂದರು.

ಈ ಸಂದರ್ಭದಲ್ಲಿ ಸಚಿವರಾದ ಈಶ್ವರ ಖಂಡ್ರೆ, ಭೈರತಿ ಸುರೇಶ್, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಕಾನೂನು ಸಲಹೆಗಾರ ಪೊನ್ನಣ್ಣ, ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...