ಎಂದಿಗೂ ಕನ್ನಡ ಮಾತಾಡಲ್ಲ, ಹಿಂದಿಯಲ್ಲೇ ಮಾತಾಡ್ತೀನಿ: ಎಸ್‌ಬಿಐ ಮ್ಯಾನೇಜರ್ ವಿಡಿಯೋ ವೈರಲ್, ತೀವ್ರ ಟೀಕೆ

Date:

ನಾನು ಎಂದಿಗೂ ಕನ್ನಡದಲ್ಲಿ ಮಾತಾಡಲ್ಲ, ಹಿಂದಿಯಲ್ಲೇ ಮಾತಾಡ್ತೀನಿ ಎಂದು ಎಸ್‌ಬಿಐ ಮ್ಯಾನೇಜರ್ ಹೇಳಿರುವ ವಿಡಿಯೋ ವೈರಲ್ ಆಗಿದೆ. ಸದ್ಯ ಎಸ್‌ಬಿಐ ಮ್ಯಾನೇಜರ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ.

“ಚಂದಾಪುರದ ಸೂರ್ಯಸಿಟಿ ಯ ಎಸ್‌ಬಿಐ ಬ್ರ್ಯಾಂಚ್ ಮ್ಯಾನೇಜರ್ ಕನ್ನಡ ಮಾತಾಡುವುದಿಲ್ಲ ಎಂದು ಧಿಮಾಕು ತೋರಿಸಿದ್ದಾರೆ. ಕೂಡಲೇ ಈಕೆಯ ಮೇಲೆ ಕ್ರಮ ಆಗಬೇಕು” ಎಂದು ಕನ್ನಡಿಗರು ಆಗ್ರಹಿಸಿದ್ದಾರೆ. ಇನ್ನು ಕೆಲವರು “ಸರ್ಕಾರ ಏನು ಕ್ರಮ ಕೈಗೊಳ್ಳುತ್ತಿದೆ? ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಏನು ಮಾಡುತ್ತಿದೆ” ಎಂದು ಪ್ರಶ್ನಿಸಿದ್ದಾರೆ.

ಇದನ್ನು ಓದಿದ್ದೀರಾ? ಉಡುಪಿ | ಜಿಲ್ಲೆಯಲ್ಲಿ ಕನ್ನಡ ಭಾಷೆ ಮಾಯವಾಗುತ್ತಿದೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸದ್ಯ ವಿಡಿಯೋ ಭಾರೀ ವೈರಲ್ ಆಗುತ್ತಿದ್ದು, ವಿಡಿಯೋ ಮಾಡಿಕೊಂಡ ಗ್ರಾಹಕರು “ಇದು ಕರ್ನಾಟಕ ಮೇಡಂ. ಹಾಗಾಗಿ ಕನ್ನಡದಲ್ಲಿ ಮಾತನಾಡಿ” ಎಂದು ಹೇಳಿರುವುದು ಕೇಳಿಬಂದಿದೆ. ಅದಕ್ಕೆ ಉತ್ತರಿಸಿರುವ ಎಸ್‌ಬಿಐ ಮ್ಯಾನೇಜರ್, “ಇದು ಭಾರತ” ಎಂದಿದ್ದಾರೆ.

“ಇದು ಭಾರತವಾದರೆ ಕರ್ನಾಟಕದಲ್ಲಿ ಕನ್ನಡ ಮೊದಲು. ಈಗ ನೀವು ಏನು ಮಾತಾಡುತ್ತಿದ್ದೀರೋ ಅದು ತುಂಬಾ ಒಳ್ಳೆಯದು. ಈಗ ನೀವು ಕನ್ನಡ ಮಾತನಾಡುವುದೇ ಇಲ್ಲವೇ” ಎಂದು ಗ್ರಾಹಕರು ಪ್ರಶ್ನಿಸಿದ್ದಾರೆ.

ಅದಕ್ಕೆ ಪ್ರತ್ಯುತ್ತರಿಸಿರುವ ಎಸ್‌ಬಿಐ ಮ್ಯಾನೇಜರ್, “ಇಲ್ಲ ಮಾತಾನಾಡುವುದಿಲ್ಲ. ಹಿಂದಿ ಮಾತಾನಾಡುವೆ. ನೀವು ನನ್ನ ಎಸ್‌ಬಿಐ ಚೇರ್‌ಮ್ಯಾನ್ ಜೊತೆ ಮಾತನಾಡಿಕೊಳ್ಳಿ” ಎಂದಿದ್ದಾರೆ.

ಈ ವೇಳೆ “ಚೇರ್‌ಮ್ಯಾನ್ ಜೊತೆ ಮಾತನಾಡಬೇಕಾಗಿಲ್ಲ. ಇದು ಆರ್‌ಬಿಐ ನಿಯಮ. ಆಯಾ ರಾಜ್ಯಗಳಲ್ಲಿ ಆಯಾ ಭಾಷೆ ಮಾತನಾಡಬೇಕು” ಎಂದು ಗ್ರಾಹಕರು ಆರ್‌ಬಿಐ ನಿಯಮ ವಿವರಿಸಿದ್ದಾರೆ. ಜೊತೆಗೆ ಸಮೀಪದಲ್ಲಿರುವ ಎಸ್‌ಬಿಐ ಸಿಬ್ಬಂದಿ “ಅವರು ಕನ್ನಡನೇ ಮಾತಾಡಲ್ಲ, ಅವರಿಗೆ ಕನ್ನಡವೇ ಬರಲ್ಲ” ಎಂದು ಹೇಳುತ್ತಿರುವುದು ವಿಡಿಯೋದಲ್ಲಿ ಕಂಡುಬಂದಿದೆ. ಕೊನೆಯಲ್ಲಿ “ನಾನು ಎಂದಿಗೂ ಕನ್ನಡ ಮಾತನಾಡುವುದೇ ಇಲ್ಲ” ಎಂದು ಬ್ಯಾಂಕ್ ಮ್ಯಾನೇಜರ್ ಹೇಳಿಕೊಂಡಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಸದ್ಯ ಎಸ್‌ಬಿಐ ಬ್ರ್ಯಾಂಚ್ ಮ್ಯಾನೇಜರ್ ವಿರುದ್ಧ ಕ್ರಮಕ್ಕೆ ಕನ್ನಡಿಗರು ಆಗ್ರಹಿಸಿದ್ದಾರೆ.

ಇಂದು ಕರವೇ ಪ್ರತಿಭಟನೆ

ಎಸ್‌ಬಿಐನ ಚಂದಾಪುರ ಶಾಖೆಯ ವ್ಯವಸ್ಥಾಪಕಿ ಕನ್ನಡದಲ್ಲಿ ವ್ಯವಹರಿಸಲು ನಿರಾಕರಿಸಿರುವುದನ್ನು ಕರ್ನಾಟಕ ರಕ್ಷಣಾ ವೇದಿಕೆ ಖಂಡಿಸಿದೆ. ಇದರ ವಿರುದ್ಧವಾಗಿ ಬುಧವಾರ(ಮೇ 21) ಬೆಳಿಗ್ಗೆ ಪ್ರತ್ಯೇಕವಾಗಿ ಎರಡು ಸ್ಥಳಗಳಲ್ಲಿ ಕರವೇ ಪ್ರತಿಭಟನೆಗೆ ಕರೆ ನೀಡಿದೆ. ಬೆಳಿಗ್ಗೆ 11 ಗಂಟೆಗೆ ಕರವೇ ಬೆಂಗಳೂರು ನಗರ ಘಟಕದ ಕಾರ್ಯಕರ್ತರು ಸೇಂಟ್ ಮಾರ್ಕ್ಸ್ ರಸ್ತೆಯಲ್ಲಿರುವ ಬ್ಯಾಂಕ್‌ನ ಪ್ರಧಾನ ಕಚೇರಿಗೆ ಭೇಟಿ ನೀಡಿ ವ್ಯವಸ್ಥಾಪಕಿ ವಿರುದ್ಧ ಕ್ರಮಕ್ಕೆ ಆಗ್ರಹಿಸಲಿದ್ದಾರೆ. ಹಾಗೆಯೇ ಕರವೇ ವೇದಿಕೆ ಮಹಿಳಾ ಘಟಕವು ಚಂದಾಪುರದ ಶಾಖೆಗೆ ಮುತ್ತಿಗೆ ಹಾಕಲಿದೆ ಎಂದು ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ಮಾಹಿತಿ ನೀಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...