ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಪಾವತಿ; 5.16 ಕೋಟಿ ರೂ. ವರ್ಗಾವಣೆ

Date:

ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದ 3,351 ವಿದ್ಯಾಥಿಗಳಿಗೆ 5.16 ಕೋಟಿ ರೂ. ವೆಚ್ಚದಲ್ಲಿ ವಿದ್ಯಾರ್ಥಿ ವೇತನ ಬಿಡುಗಡೆ ಮಾಡಲಾಗಿದ್ದು, ಡಿಬಿಟಿ ಮೂಲಕ ಪಾವತಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಅಸಗೋಡು ಜಯಸಿಂಹ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ಬ್ರಾಹ್ಮಣರ ಅಭಿವೃದ್ಧಿ ಮಂಡಳಿಯಲ್ಲಿ ವಿದ್ಯಾರ್ಥಿ ವೇತನ ವಿತರಿಸಿ ಅವರು ಮಾತನಾಡಿದರು. “ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದ 4,123 ವಿದ್ಯಾರ್ಥಿಗಳು ಶಿಷ್ಯ ವೇತನಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ. ಅವರಲ್ಲಿ, 3,351 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಪಾವತಿಸಲಾಗಿದೆ. ಫಲಾನುಭವ ಪಡೆದ ವಿದ್ಯಾರ್ಥಿಗಳಲ್ಲಿ ಪಿಯುಸಿ, ಸಾಮಾನ್ಯ ಪದವಿ ವ್ಯಾಸಂಗ ಮಾಡುತ್ತಿರುವ 1,511 ವಿದ್ಯಾರ್ಥಿಗಳಿಗೆ 2.26 ಕೋಟಿ ರೂ., ವೃತ್ತಿಪರ ಕೋರ್ಸ್ (ಮೆಡಿಕಲ್, ಇಂಜಿನಿಯರಿಂಗ್) ವ್ಯಾಸಂಗ ಮಾಡುತ್ತಿರುವ 1,840 ವಿದ್ಯಾರ್ಥಿಗಳಿಗೆ 2.90 ಕೋಟಿ ರೂ.ಗಳನ್ನು ಅವರ ಬ್ಯಾಂಕ್‌ ಖಾತೆಗಳಿಗೆ ಜಮಾ ಮಾಡಲಾಗಿದೆ” ಎಂದಿದ್ದಾರೆ.

“ಆರ್ಥಿಕವಾಗಿ ಹಿಂದುಳಿದಿರುವ ವಿಪ್ರ ಸಮುದಾಯದ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಬ್ರಾಹ್ಮಣ ಮಂಡಳಿ ವತಿಯಿಂದ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳುವುದರೊಂದಿಗೆ ಸಮಾಜಕ್ಕೆ ಬೆಳಕಾಗಬೇಕು” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವರದಿ ಓದಿದ್ದೀರಾ?: ಮಲ್ಪೆ ಮೀನುಪೇಟೆ ಪ್ರಕರಣ-2: ಬಡವರ ಬದುಕು ಹಿಂಡುವ ಹಿಂದುತ್ವ

“2025-26ನೇ ಸಾಲಿನ ಆಯವ್ಯಯದಲ್ಲಿ ಮುಖ್ಯಮಂತ್ರಿಗಳು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಗೆ 10 ಕೋಟಿ ರೂ. ಅನುದಾನ ಹಂಚಿಕೆ ಮಾಡಿದ್ದಾರೆ” ಎಂದು ತಿಳಿಸಿದ್ದಾರೆ.

“ಮಂಡಳಿ ವತಿಯಿಂದ ಪ್ರತಿ ಜಿಲ್ಲೆಯಲ್ಲಿ ಎಸ್‍ಎಸ್‍ಎಲ್‍ಸಿಯಲ್ಲಿ ಮೊದಲ 3 ಸ್ಥಾನ ಪಡೆದ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಕ್ರಮವಾಗಿ 15 ಸಾವಿರ ರೂ., 10 ಸಾವಿರ ರೂ. ಹಾಗೂ 5 ಸಾವಿರ ರೂ.ಗಳನ್ನು ಪುರಸ್ಕಾರವಾಗಿ ನೀಡಲಾಗುತ್ತಿದೆ. ರಾಜ್ಯದ 32 ಜಿಲ್ಲೆಗಳ ಒಟ್ಟು 694 ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಪುರಸ್ಕಾರವಾಗಿ ಒಟ್ಟು 80.35 ಲಕ್ಷ ರೂ. ನೀಡಲಾಗಿದೆ” ಎಂದು ಹೇಳಿದ್ದಾರೆ.

ಈ ವರದಿ ಓದಿದ್ದೀರಾ?: ಮಲ್ಪೆ ಮೀನು ಪೇಟೆ ಪ್ರಕರಣ | ಕರಾವಳಿಯ (ಅ)ನ್ಯಾಯ ನಿರ್ಣಯದ ನಮೂನೆ

“ಸ್ವಯಂ ಉದ್ಯೋಗ ಕಾರ್ಯಕ್ರಮದಡಿ ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರಿಗೆ ಲಾಭದಾಯಕ ಉದ್ಯಮ ಸ್ಥಾಪಿಸಲು ಸಾಲದ ಮೇಲೆ 20%ರಷ್ಟು ಸಹಾಯಧನ ವಿತರಿಸಲಾಗುತ್ತದೆ. ಸದರಿ ಯೋಜನೆಯಿಂದ 192 ಫಲಾನುಭವಿಗಳು ಅನುಕೂಲ ಪಡೆದುಕೊಂಡಿದ್ದು, ಯೋಜನೆಯ ಒಟ್ಟು ವೆಚ್ಚ 36,78,671 ರೂ. ಆಗಿದೆ” ಎಂದು ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ವ್ಯವಸ್ಥಾಪಕಿ ನಿರ್ದೇಶಕಿ ದೀಪಶ್ರೀ ಕೆ ಮಾತನಾಡಿ, “ಮುಂದಿನ ದಿನಗಳಲ್ಲಿ ಮಂಡಳಿಗೆ ಹೆಚ್ಚಿನ ಅನುದಾನವು ದೊರಕಿದ್ದಲ್ಲಿ ಸಮುದಾಯದ ಅಭಿವೃದ್ಧಿಗೆ ಇನ್ನೂ ಹೆಚ್ಚಿನ ಯೋಜನೆಗಳನ್ನು ರೂಪಿಸಲಾಗುವುದು” ಎಂದು ತಿಳಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...