₹25 ಸಾವಿರಕ್ಕೆ ಮತದಾರರ ಮಾಹಿತಿ ಮಾರಾಟ; ಎಫ್‌ಐಆರ್ ದಾಖಲು

Date:

  • ಖಾಸಗಿ ಕಂಪನಿಯ ದಾಖಲೆಗಳನ್ನು ವಶಕ್ಕೆ ಪಡೆದು ತನಿಖೆ ಕೈಗೊಂಡ ಪೊಲೀಸರು
  • ಕಳೆದ ನವೆಂಬರ್‌ನಲ್ಲಿ ಮತದಾರರ ದತ್ತಾಂಶ ಮಾರಾಟ ಮಾಡಿದ್ದ ‘ಚಿಲುಮೆ ಸಂಸ್ಥೆ’

ರಾಜ್ಯ ವಿಧಾನಸಭಾ ಚುನಾವಣೆ ಇನ್ನೇನು ಕೆಲವೇ ದಿನಗಳಲ್ಲಿ ನಡೆಯಲಿದೆ. ಮತದಾರರ ಮಾಹಿತಿ ಸಂಗ್ರಹ ಮತ್ತು ಗುರುತಿನ ಚೀಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿರುವ ಬಗ್ಗೆ ಚಿಲುಮೆ ಸಂಸ್ಥೆ ವಿರುದ್ಧ ಈ ಹಿಂದೆ ಆರೋಪ ಕೇಳಿಬಂದಿತ್ತು. ಇದೀಗ ಅದರಂತೆಯೇ, ಆರೂವರೆ ಲಕ್ಷಕ್ಕೂ ಹೆಚ್ಚು ಮತದಾರರ ದತ್ತಾಂಶವನ್ನು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಕೋರಮಂಗಲದ ಖಾಸಗಿ ಕಂಪನಿಯೊಂದರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಆಗ್ನೇಯ ವಿಭಾಗದ ಸೈಬರ್‌ ಅಪರಾಧ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಖಾಸಗಿ ಕಂಪನಿಯ ದಾಖಲೆಗಳನ್ನು ಪೊಲೀಸರು ವಶಕ್ಕೆ ಪಡೆದು, ತನಿಖೆ ಕೈಗೊಂಡಿದ್ದಾರೆ.

ಕಳೆದ ನವೆಂಬರ್‌ನಲ್ಲಿ ‘ಚಿಲುಮೆ ಸಂಸ್ಥೆ’ಯೂ ಮತದಾರರ ದತ್ತಾಂಶ ಮಾರಾಟ ಮಾಡಿತ್ತು. ಅದೇ ಮಾದರಿಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕ್ಷೇತ್ರಗಳಲ್ಲಿ ಕೋರಮಂಗಲದ ಸಂಸ್ಥೆಯೂ ಸಮೀಕ್ಷೆ ನಡೆಸಿದೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಖಾಸಗಿ ಕಂಪನಿಯೂ ಮತದಾರರ ಸಂಪೂರ್ಣ ವಿವರಗಳನ್ನು ಸಂಗ್ರಹಿಸುತ್ತಿತ್ತು. ಇದಕ್ಕಾಗಿಯೇ, ಪ್ರತ್ಯೇಕ ಆ್ಯಪ್ ಬಳಸಿ ಮತದಾರರ ಮಾಹಿತಿ, ಹೆಸರು, ವಿಳಾಸ, ಜಾತಿ, ಮತದಾರರು ಕಳೆದ ಬಾರಿ ಯಾವ ಪಕ್ಷಕ್ಕೆ ಬೆಂಬಲಿಸಿದ್ದರು. ಈ ಬಾರಿ ಯಾವ‌ ಪಕ್ಷಕ್ಕೆ ಬೆಂಬಲಿಸಲಿದ್ದಾರೆ ಎಂಬ ಸಂಪೂರ್ಣ ಮಾಹಿತಿ ಆ್ಯಪ್​ನಲ್ಲಿ ನೀಡಲಾಗಿತ್ತು ಎಂದು ಮೂಲಗಳು ತಿಳಿಸಿವೆ.

“ಸುಮಾರು ಆರು ಲಕ್ಷದಷ್ಟು ಮತದಾರರ ಮಾಹಿತಿ ಈ ಖಾಸಗಿ ಸಂಸ್ಥೆಯ ಬಳಿ ಇತ್ತು. ಇದು ನಿರ್ದಿಷ್ಟ ಕ್ಷೇತ್ರದ ಮತದಾರರ ಪಟ್ಟಿಯೇ ಎಂಬ ಬಗ್ಗೆ ತನಿಖೆಯಿಂದ ತಿಳಿಯಬೇಕಿದೆ. ಈ ಸಂಸ್ಥೆಯು ತನ್ನ ವೆಬ್‌ಸೈಟ್‌ನಲ್ಲಿ ಮತದಾರರ ಮೊಬೈಲ್‌ ಸಂಖ್ಯೆ ಹಾಕಿತ್ತು. ₹ 25 ಸಾವಿರ ನೀಡಿದರೆ ಲಾಗ್‌ಇನ್‌ ಐಡಿ ನೀಡುತ್ತಿತ್ತು” ಎಂದು ತಿಳಿದುಬಂದಿದೆ.

ರಾಜ್ಯ ವಿಧಾನಸಭಾ ಚುನಾವಣಾ ಅಭ್ಯರ್ಥಿಗಳು ಈ ವೆಬ್‌ಸೈಟ್ ತೆಗೆದ ತಕ್ಷಣ ಸ್ವಾಗತ ಎಂಬ ಸಂದೇಶ ಬರುತ್ತಿತ್ತು. ₹25 ಸಾವಿರ ಜೊತೆಗೆ ₹500 ಸೇವಾ ಶುಲ್ಕ ನೀಡಿದರೆ ಕ್ಷೇತ್ರದ ಮತದಾರರ ಮಾಹಿತಿ ನೀಡಲಾಗುತ್ತಿತ್ತು. ಮಾಹಿತಿ ಪಡೆದು ಚುನಾವಣೆಯಲ್ಲಿ ಜಯಶಾಲಿಯಾಗಿ ಎಂದು ವೆನ್‌ಸೈಟ್‌ನಲ್ಲಿ ತಿಳಿಸಲಾಗಿದೆ. ಒಂದು ವೇಳೆ ಸೋತರೆ ಹಣ ವಾಪಸ್ ಎಂಬ ಪ್ರಣಾಳಿಕೆ ಮಾಡಿಕೊಂಡಿತ್ತು. ಪಕ್ಷೇತರ ಅಭ್ಯರ್ಥಿ ನೀಡಿದ ದೂರಿನ ಮೇರೆಗೆ ಎಫ್ಐಆರ್ ದಾಖಲಾಗಿದೆ.

ಈ ಸುದ್ದಿ ಓದಿದ್ದೀರಾ? ಲೇವಾದೇವಿದಾರರ ಕಾಟಕ್ಕೆ ಬೇಸತ್ತು ಬಿಬಿಎಂಪಿ ಗುತ್ತಿಗೆದಾರ ಆತ್ಮಹತ್ಯೆ

ಪಕ್ಷೇತರ ಅಭ್ಯರ್ಥಿಯೊಬ್ಬರು ನೀಡಿದ್ದ ಸುಳಿವು ಆಧರಿಸಿ ‘ದಿ ನ್ಯೂಸ್‌ ಮಿನಿಟ್‌’ ವೆಬ್‌ಸೈಟ್‌ ತನಿಖಾ ವರದಿ ಪ್ರಕಟಿಸಿತ್ತು. ಬಳಿಕ ಚುನಾವಣಾಧಿಕಾರಿಯು ಪೊಲೀಸರಿಗೆ ದೂರು ನೀಡಿದ್ದರು.

“ಖಾಸಗಿ ಕಂಪನಿಯ ವೆಬ್‌ಸೈಟ್‌ವೊಂದರಲ್ಲಿ ಹಣ ಪಡೆದು ಮತದಾರರ ಮಾಹಿತಿ ಮಾರಾಟ ಮಾಡುತ್ತಿದ್ದಾರೆಂದು ಚುನಾವಣೆ ಅಧಿಕಾರಿಗಳು ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ಎಫ್‌ಐಆರ್‌ ದಾಖಲು ಮಾಡಿಕೊಳ್ಳಲಾಗಿದೆ. ಪ್ರಸ್ತುತವಾಗಿ ತನಿಖೆ ಕೈಗೊಂಡಿರುವುದರಿಂದ ಖಾಸಗಿ ಸಂಸ್ಥೆಯ ಹೆಸರು ಬಹಿರಂಗ ಪಡಿಸುವುದಿಲ್ಲ” ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...