ಹಿರಿಯ ಪತ್ರಕರ್ತ ಜಿ ಗಣೇಶ್ ನಿಧನ

Date:

ಕನ್ನಡ ಪತ್ರಿಕಾರಂಗದಲ್ಲಿ ಕ್ರೈಂ ಗಣೇಶ್‌ ಎಂದೇ ಗುರುತಿಸಿಕೊಂಡಿದ್ದ ಹಿರಿಯ ಪತ್ರಕರ್ತ ಗಣೇಶ್‌ ಇಂದು ನಿಧನರಾಗಿದ್ದಾರೆ. ಅನಾರೋಗ್ಯದ ಕಾರಣದಿಂದ ಇತ್ತೀಚೆಗೆ ಜೈನ್‌ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ.

ಕಳೆದ 20 ವರ್ಷಗಳಿಂದ ಕನ್ನಡ ಟಿವಿ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸುತ್ತಿದ್ದ ಅವರು ಇತ್ತೀಚೆಗೆ ಅನಾರೋಗ್ಯಕ್ಕೆ ತುತ್ತಾಗಿದ್ದರು. ಮೂಲತಃ ಮಾಗಡಿ ತಾಲೂಕಿನ ತಾಳೆಕೆರೆಯ ಗಂಗಯ್ಯ ಮತ್ತು ಕೆಂಪಮ್ಮ ದಂಪತಿ ಪುತ್ರರಾಗಿದ್ದ ಗಣೇಶ್‌ ಅವರು ಪತ್ನಿ ಪಾರ್ವತಮ್ಮ ಹಾಗೂ ಪುತ್ರನನ್ನು ಅಗಲಿದ್ದಾರೆ. ಇಂದು ಅವರ ಮೃತದೇಹವನ್ನು ತಾಳೆಕೆರೆಗೆ ಕೊಂಡೊಯ್ದು ಗುಡ್ಡೆ ರಂಗನಾಥಸ್ವಾಮಿ ಗುಡಿ ರಸ್ತೆಯಲ್ಲಿರುವ ಅವರ ಜಮೀನಿನಲ್ಲಿ ಅಂತ್ಯ ಸಂಸ್ಕಾರ ನೆರವೇರಿಸಲಾಗುವುದು.

ಈ ಸುದ್ದಿ ಓದಿದ್ದೀರಾ? ಅವಿವಾಹಿತರಾಗಿದ್ದ ರತನ್; ಟಾಟಾ ಸಮೂಹಕ್ಕೆ ಉತ್ತರಾಧಿಕಾರಿ ಯಾರು?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಸ್ತೂರಿ ಟಿವಿ ಮೂಲಕ ಗಣೇಶ್‌ ಅವರು ಪತ್ರಿಕೋದ್ಯಮಕ್ಕೆ ಕಾಲಿಟ್ಟಿದ್ದರು. ಕಸ್ತೂರಿ, ನ್ಯೂಸ್‌‍ 18, ಪ್ರಜಾ ಟಿವಿಗಳಲ್ಲಿ ಸೇವೆ ಸಲ್ಲಿಸಿದ್ದ ಗಣೇಶ್‌ ಅವರು ಪ್ರಸ್ತುತ ಟಿವಿ 5ನಲ್ಲಿ ಇನ್‌ಪುಟ್‌ ಮುಖ್ಯಸ್ಥರಾಗಿ ಅಗಿ ಸೇವೆ ಸಲ್ಲಿಸುತ್ತಿದ್ದರು.

ಗಣೇಶ್‌ ಅವರ ನಿಧನಕ್ಕೆ ಕರ್ನಾಟಕ ಪತ್ರಕರ್ತರ ಸಹಕಾರ ಸಂಘ, ಪ್ರೆಸ್‌‍ ಕ್ಲಬ್‌, ಕಾರ್ಯನಿರತ ಪತ್ರಕರ್ತರ ಸಂಘ, ಬೆಂಗಳೂರು ವರದಿಗಾರರ ಕೂಟ ಕಂಬನಿ ಮಿಡಿದಿದೆ. ಅದೇ ರೀತಿ ಹಲವಾರು ಗಣ್ಯರು, ಹಿರಿಯ ಪೊಲೀಸ್‌‍ ಅಧಿಕಾರಿಗಳು ಗಣೇಶ್‌ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...