ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ; ತಂದೆ-ಮಗನ ಬಂಧನ

Date:

ಐದು ವರ್ಷದ ಮಗುವಿನ ಮೇಲೆ ತಂದೆ-ಮಗ ಸೇರಿ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಕಾಮಾಕ್ಷಿಪಾಳ್ಯ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸುಂಕದಕಟ್ಟೆ ಚಂದನ ಲೇಔಟ್‌ ನಿವಾಸಿ ನಾಗರಾಜು ಮತ್ತು ಆತನ 17 ವರ್ಷದ ಮಗನನ್ನು ಪೊಲೀಸರು ಬಂಧಿಸಿದ್ದಾರೆ.

ಕೃತ್ಯ ಎಸಗಿದ ಆರೋಪಿಗಳು ಸಂತ್ರಸ್ತೆಯ ತಾಯಿಯ ಸಂಬಂಧಿಕರಾಗಿದ್ದರು. ಹೀಗಾಗಿ, ಸಂತ್ರಸ್ತೆಯ ತಾಯಿ ಕೆಲಸಕ್ಕೆ ತೆರಳುವ ವೇಳೆ ತನ್ನ ಐದು ವರ್ಷದ ಮಗುವನ್ನು ಸಂಬಂಧಿಕರಾದ ಆರೋಪಿ ನಾಗರಾಜ್ ಮನೆಯಲ್ಲಿ ಬಿಟ್ಟು ಹೋಗುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರೋಪಿ ನಾಗರಾಜ್‌ ಕ್ರಷರ್‌ವೊಂದರಲ್ಲಿ ಸೂಪರ್‌ವೈಸರ್‌ ಆಗಿ ಕೆಲಸ ಮಾಡುತ್ತಿದ್ದನು. ಈತನ 17 ವರ್ಷದ ಮಗ ಪ್ರಥಮ ಪಿಯು ವಿದ್ಯಾರ್ಥಿ.

ತಾಯಿ ಮಗುವನ್ನು ಆರೋಪಿ ನಾಗರಾಜ ಮನೆಯಲ್ಲಿ ಬಿಟ್ಟು ತೆರಳುವಾಗ ಮಗುವಿನ ಮೇಲೆ ತಂದೆ-ಮಗ ಇಬ್ಬರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕ್ಯಾಶ್‌ಬ್ಯಾಕ್ ಆಫರ್ ಎಂದು ನಂಬಿಸಿ ಹೋಟೆಲ್‌ ಮಾಲೀಕನಿಗೆ ವಂಚನೆ

ಇತ್ತೀಚೆಗೆ ಮಗುವಿನ ವರ್ತನೆಯಲ್ಲಿ ಕೆಲವು ಬದಲಾವಣೆಯಾದ ಕಾರಣ ತಾಯಿ ಮಗುವನ್ನು ವಿಚಾರಿಸಿದ್ದಾರೆ. ಈ ವೇಳೆ, ಮಗು ನಡೆದ ಘಟನೆ ಬಗ್ಗೆ ವಿವರಿಸಿದೆ. ಬಳಿಕ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ವೈದ್ಯಕೀಯ ಪರೀಕ್ಷೆ ನಡೆಸಿದಾಗ ಲೈಂಗಿಕ ದೌರ್ಜನ್ಯ ನಡೆಸಿರುವುದು ಖಚಿತವಾಗಿದೆ.

ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗಳ ವಿರುದ್ಧ ಸಂತ್ರಸ್ತೆಯ ತಾಯಿ ದೂರು ದಾಖಲು ಮಾಡಿದ್ದಾರೆ. ದೂರಿನ ಮೇರೆಗೆ ಕಾಮಾಕ್ಷಿಪಾಳ್ಯ ಠಾಣೆಯ ಪೊಲೀಸರು ಆರೋಪಿಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು ಮಾಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...