ಅಜೀಂ ಪ್ರೇಮ್‌ಜಿ ವಿವಿಯಲ್ಲಿ ಎಬಿವಿಪಿ ದಾಂಧಲೆ: ಸೂಕ್ತ ತನಿಖೆಗೆ ಎಸ್‌ಎಫ್‌ಐ ಆಗ್ರಹ

Date:

ಬೆಂಗಳೂರಿನ ಆನೇಕಲ್ ತಾಲ್ಲೂಕಿನ ಸರ್ಜಾಪುರ ಬಳಿಯ ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯಕ್ಕೆ ಅಕ್ರಮ ಪ್ರವೇಶ ಮಾಡಿ ಆಸ್ತಿಗಳನ್ನು ಧ್ವಂಸ ಮಾಡಿ, ಕೆಲವು ಭದ್ರತಾ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಿರುವ ಎಬಿವಿಪಿ ಗೂಂಡಾಗಳನ್ನು ಬಂಧಿಸುವಂತೆ, ಸೂಕ್ತ ತನಿಖೆ ನಡೆಸುವಂತೆ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ರಾಜ್ಯ ಸಮಿತಿ ಆಗ್ರಹಿಸಿದೆ.

ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯಕ್ಕೆ ಮಂಗಳವಾರ ಸಂಜೆ 6 ಗಂಟೆ ಸುಮಾರಿಗೆ 20 ಜನರ ಎಬಿವಿಪಿ ಗೂಂಡಾ ಗುಂಪು ಅಕ್ರಮವಾಗಿ ಪ್ರವೇಶ ಮಾಡಿ ವಿಶ್ವವಿದ್ಯಾಲಯದ ಆಸ್ತಿಗಳನ್ನು ಧ್ವಂಸ ಮಾಡಿ, ಕೆಲವು ಭದ್ರತಾ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳ ಮೇಲೆ ಎಬಿವಿಪಿ ಗೂಂಡಾಗಳು ಹಲ್ಲೆ ನಡೆಸಿದ್ದಾರೆ. ಈ ಹಲ್ಲೆಯನ್ನು ಭಾರತ ವಿದ್ಯಾರ್ಥಿ ಫೆಡರೇಷನ್ ಖಂಡಿಸುತ್ತದೆ ಹಾಗೂ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಜೊತೆ ಎಸ್‌ಎಫ್‌ಐ ನಿಲ್ಲುತ್ತದೆ ಎಂದು ತಿಳಿಸಿದೆ.

ಇದನ್ನು ಓದಿದ್ದೀರಾ? ಅಜೀಂ ಪ್ರೇಮ್‌ಜಿ ವಿವಿ ಆವರಣದಲ್ಲಿ ಎಬಿವಿಪಿ ಕಾರ್ಯಕರ್ತರ ದಾಂಧಲೆ: ವಿದ್ಯಾರ್ಥಿಗಳ ಮೇಲೆ ಹಲ್ಲೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಂಗಳವಾರ ಸಂಜೆ ಕಾಶ್ಮೀರದ ಬಗ್ಗೆ ಅನೌಪಚಾರಿಕ ಚರ್ಚೆ ಮಾಡಲು ವಿಶ್ವ ವಿದ್ಯಾಲಯದ ವಿದ್ಯಾರ್ಥಿಗಳು ತೀರ್ಮಾನಿಸಿರುವುದಾಗಿ ವರದಿಯಾಗಿದೆ. ಆದರೆ ಇದರ ಕುರಿತು ವಿಶ್ವ ವಿದ್ಯಾಲಯದಲ್ಲಿ ಯಾವುದೇ ಚರ್ಚೆ ನಡೆದಿರಲಿಲ್ಲ. ಮಂಗಳವಾರ ಸಂಜೆ 5 ಗಂಟೆ ಸುಮಾರಿಗೆ 20ಕ್ಕೂ ಹೆಚ್ಚು ಎಬಿವಿಪಿ ಗೂಂಡಾಗಳು ವಿಶ್ವ ವಿದ್ಯಾಲಯಕ್ಕೆ ಅಕ್ರಮವಾಗಿ ಪ್ರವೇಶ ಮಾಡಿ ವಿಶ್ವವಿದ್ಯಾಲಯದ ಆಸ್ತಿಗಳನ್ನು ಧ್ವಂಸ ಮಾಡಿ, ಭದ್ರತಾ ಸಿಬ್ಬಂದಿಗಳ ಮೇಲೆ ಮಾತ್ರವಲ್ಲದೆ ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಿದ್ದಾರೆ.

“ನಮ್ಮ ಕ್ಯಾಂಪಸ್‌ನಲ್ಲಿ ಹೊರಗಿನ ಜನರ ಗುಂಪೊಂದು ನಡೆಸಿದ ಗದ್ದಲ ಮತ್ತು ಹಿಂಸಾಚಾರವನ್ನು ನಾವು ಬಲವಾಗಿ ಖಂಡಿಸುತ್ತೇವೆ ಎಂದು ವಿಶ್ವವಿದ್ಯಾಲಯ ಹೇಳಿಕೆ ಬಿಡುಗಡೆ ಮಾಡಿದೆ ಹಾಗೂ ಈ ವಿಶ್ವವಿದ್ಯಾಲಯದಲ್ಲಿ ಯಾವುದೇ ಕಾರ್ಯಕ್ರಮವು ನಡೆಯಲೇ ಇಲ್ಲ ಸ್ಪಷ್ಟಪಡಿಸಿದೆ. ಈಗಾಗಲೇ ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯದ ಆಸ್ತಿಯನ್ನು ಧ್ವಂಸಗೊಳಿಸಿ, ಕ್ಯಾಂಪಸ್‌ಗೆ ನುಗ್ಗಿ ಪ್ರತಿಭಟನೆ ನಡೆಸಿದ ಆರೋಪದ ಮೇಲೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಗೆ ಸೇರಿದ ವಿದ್ಯಾರ್ಥಿಗಳ ಗುಂಪನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ತೆಗೆದುಕೊಳ್ಳಲಾಗಿದೆ” ಎಂದು ಹೇಳಿಕೆಯಲ್ಲಿ ಉಲ್ಲೇಖಿಸಿದೆ.

“ವಿಶ್ವ ವಿದ್ಯಾಲಯಗಳಲ್ಲಿ ವಿದ್ಯಾರ್ಥಿಗಳು ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ನಡೆಯುವ ವಿದ್ಯಮಾನಗಳು, ಪ್ರಸ್ತುತ ಆರ್ಥಿಕ, ಸಾಮಾಜಿಕ, ರಾಜಕೀಯ ಚರ್ಚೆ ನಡೆಸುವುದು ಸಾಮಾನ್ಯ ಇದು ವಿದ್ಯಾರ್ಥಿಗಳಲ್ಲಿ ತಿಳುವಳಿಕೆ ಮಟ್ಟ ಹೆಚ್ಚಿಸುವುದಕ್ಕೆ ಸಹಾಯವಾಗುತ್ತದೆ. ಇದು ವಿಶ್ವವಿದ್ಯಾಲಯದ ಪ್ರಜಾಪ್ರಭುತ್ವವಾಗಿದೆ. ವಿಶ್ವ ವಿದ್ಯಾಲಯಗಳಲ್ಲಿ ಕ್ಯಾಂಪಸ್‌ ಡೆಮಾಕ್ರಸಿ ಇರಬೇಕು” ಎಂದು ಎಸ್‌ಎಫ್‌ಐ ಒತ್ತಾಯಿಸಿದೆ.

“ಎಬಿವಿಪಿ ವಿದ್ಯಾರ್ಥಿ ಸಂಘಟನೆ ವಿಶ್ವವಿದ್ಯಾಲಯಗಳಲ್ಲಿ ಕೋಮುವಾದವನ್ನು ಉಂಟು ಮಾಡುತ್ತಿದೆ. ಕಾಲೇಜು ಕ್ಯಾಂಪಸ್‌ಗಳಲ್ಲಿ, ವಿಶ್ವವಿದ್ಯಾಲಯಗಳಲ್ಲಿ ಎಬಿವಿಪಿ ಹಿಂಸೆ, ಪ್ರಚೋದನೆ ಹಾಗೂ ಉದ್ದೇಶ ಪೂರ್ವಕವಾಗಿ ಗಲಭೆಗಳನ್ನು ಸೃಷ್ಟಿಸಿ ವಿಶ್ವ ವಿದ್ಯಾಲಯಗಳಲ್ಲಿ ವಿದ್ಯಾರ್ಥಿಗಳ ನಡುವೆ ಭಯದ ವಾತಾವರಣ ಸೃಷ್ಟಿ ಮಾಡುತ್ತಿದ್ದೆ. ಜೆಎನ್‌ಯು ಸೇರಿದಂತೆ ದೇಶದ ಹಲವು ವಿಶ್ವ ವಿದ್ಯಾಲಯಗಳಲ್ಲಿ ಎಬಿವಿಪಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿರುವುದನ್ನು ನಾವು ಗಮನಿಸಬಹುದು. ಅದೇ ರೀತಿಯಲ್ಲಿ ರಾಜ್ಯದ ವಿಶ್ವ ವಿದ್ಯಾಲಯಗಳಲ್ಲಿ ಉದ್ದೇಶ ಪೂರ್ವಕವಾಗಿ ವಿದ್ಯಾರ್ಥಿಗಳಿಗೆ ಹಲ್ಲೆ ಹಾಗೂ ಗಲಭೆಗಳನ್ನು ಸೃಷ್ಟಿ ಮಾಡಲು ಮುಂದಾಗಿದೆ”

“ಆದರಿಂದ ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯಕ್ಕೆ ಅಕ್ರಮ ಪ್ರವೇಶ ಮಾಡಿ ಆಸ್ತಿಗಳನ್ನು ಧ್ವಂಸ ಮಾಡಿ, ಕೆಲವು ಭದ್ರತಾ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳ ಮೇಲೆ ಉದ್ದೇಶ ಪೂರ್ವಕವಾಗಿ ಹಲ್ಲೆ ಮಾಡಿರುವ ಎಬಿವಿಪಿ ಗೂಂಡಾಗಳ ಮೇಲೆ ಪ್ರಕರಣ ದಾಖಲು ಮಾಡಬೇಕು ಹಾಗೂ ತಕ್ಷಣ ಈ ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಿರುವ ಎಬಿವಿಪಿ ಗುಂಡಾಗಳನ್ನು ಬಂಧಿಸಬೇಕೆಂದು ಹಾಗೂ ಎಬಿವಿಪಿ ಗೂಂಡಾಗಳನ್ನು ಉದ್ದೇಶ ಪೂರ್ವಕವಾಗಿ ನಡೆಸಿರುವ ಈ ಹಲ್ಲೆಯ ಬಗ್ಗೆ ಸೂಕ್ತ ತನಿಖೆ ಮಾಡಬೇಕೆಂದು ಹಾಗೂ ವಿಶ್ವವಿದ್ಯಾಲಯಗಳಲ್ಲಿ ಪ್ರಜಾಪ್ರಭುತ್ವ (ಕ್ಯಾಂಪಸ್ ಡೆಮಾಕ್ರಸಿ) ಉಳಿಸಬೇಕು” ಎಂದು ಎಸ್‌ಎಫ್‌ಐ ಒತ್ತಾಯಿಸಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...