ಬೆಂಗಳೂರು | ಅಪ್ರಾಪ್ತ ಅತ್ಯಾಚಾರ ಸಂತ್ರಸ್ತೆಯ ತಾಯಿಗೆ ಕಿರುಕುಳ; ಪೊಲೀಸರಿಬ್ಬರು ತಪ್ಪಿತಸ್ಥರೆಂದು ಘೋಷಣೆ

Date:

ಇತ್ತೀಚೆಗೆ ಅಪ್ರಾಪ್ತ ಬಾಲಕಿಯ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ನಿರ್ಲಕ್ಷ್ಯದಿಂದ ನಿರ್ವಹಿಸಿದ ಮತ್ತು ಆಕೆಯ ತಾಯಿಗೆ ಕಿರುಕುಳ ನೀಡಿದ ಆರೋಪದಲ್ಲಿ ಇಬ್ಬರು ಪೊಲೀಸ್ ಸಬ್-ಇನ್ಸ್‌ಪೆಕ್ಟರ್‌ಗಳನ್ನು ರಾಜ್ಯ ಮಾನವ ಹಕ್ಕುಗಳ ಆಯೋಗ (SHRC) ತಪ್ಪಿತಸ್ಥರೆಂದು ಪರಿಗಣಿಸಿದೆ. ಆಯೋಗವು ಅವರ ಸಂಬಳದಿಂದ ಹಣ ವಸೂಲಿ ಮಾಡಿ, ಪರಿಹಾರವಾಗಿ ಸಂತ್ರಸ್ತೆಗೆ ಪ್ರತಿಯೊಬ್ಬರಿಗೂ 50,000 ದಂಡ ಪಾವತಿಸುವಂತೆ ತಿಳಿಸಿದೆ.

ಠಾಣಾಧಿಕಾರಿಯೊಂದಿಗೆ ಇಬ್ಬರನ್ನು ಪೋಕ್ಸೋ ಕಾಯ್ದೆ, 2012 ಅನ್ನು ಉಲ್ಲಂಘಿಸಿದ ಆರೋಪದಲ್ಲಿ ತಪ್ಪಿತಸ್ಥರೆಂದು ಘೋಷಿಸಲಾಗಿದೆ. ಆದರೆ ಇನ್‌ಸ್ಪೆಕ್ಷರ್ ವಿರುದ್ಧದ ಆರೋಪಗಳನ್ನು ಕೈಬಿಡಲಾಗಿದೆ.

ಇದನ್ನು ಓದಿದ್ದೀರಾ? ಬಾಲಕಿಯ ಅತ್ಯಾಚಾರ; ಮಠದ ಅರ್ಚಕ ಸೇರಿ ಇಬ್ಬರ ಬಂಧನ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

13 ವರ್ಷದ ಸಂತ್ರಸ್ತೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿಯಲ್ಲಿರುವ ಚೇಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತನ್ನ ಅಜ್ಜಿಯೊಂದಿಗೆ ವಾಸಿಸುತ್ತಿದ್ದಳು. ಆಕೆಯ ತಾಯಿ ಬೆಂಗಳೂರಿನಲ್ಲಿ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದರು. ಈ ಘಟನೆ 2023ರ ಜನವರಿಯಲ್ಲಿ ನಡೆದಿದೆ. ಇಬ್ಬರು ಬಾಲಕರು, ಬಾಲಕಿಯ ಸಂಬಂಧಿಕರು ಅತ್ಯಾಚಾರ ನಡೆಸಿದ್ದು, ಬಾಲಕಿ ಗರ್ಭಿಣಿಯಾಗಿದ್ದಳು. ಇದು ತಿಳಿದ ಅಜ್ಜಿ ಪೊಲೀಸರಿಗೆ ಮತ್ತು ಬಾಲಕಿಯ ತಾಯಿಗೆ ತಿಳಿಸದೆಯೇ ಗರ್ಭಪಾತ ಮಾಡಿಸಲು ಆಸ್ಪತ್ರೆಗೆ ಕರೆದೊಯ್ದಿದ್ದರು.

ಘಟನೆಯ ಬಗ್ಗೆ ತಿಳಿದ ತಾಯಿ ಆಸ್ಪತ್ರೆಗೆ ಧಾವಿಸಿ, ಗಲಾಟೆ ಮಾಡಿ, ದೂರು ದಾಖಲಿಸಲು ಬಾಲಕಿಯನ್ನು ಪೊಲೀಸ್ ಠಾಣೆಗೆ ಕರೆತಂದಿದ್ದರು. ದೂರು ಸ್ವೀಕರಿಸಿದರೂ ಎಫ್‌ಐಆರ್ ದಾಖಲಿಸುವಲ್ಲಿ ವಿಳಂಬ ಮಾಡಿದ ಪಿಎಸ್‌ಐಗಳಾದ ಹರೀಶ್ ಮತ್ತು ಪಾಪಣ್ಣ, ವಿಚಾರಣೆಯ ನೆಪದಲ್ಲಿ ಇಡೀ ದಿನ ಠಾಣೆಯಲ್ಲಿಯೇ ಕಾಯಿಸಿದ್ದರು.

ಇದನ್ನು ಓದಿದ್ದೀರಾ? ಕಲಬುರಗಿ | ದಲಿತ ಬಾಲಕಿಯರ ಅತ್ಯಾಚಾರ ಪ್ರಕರಣ; ಸೆ.30ರಂದು ಯಾದಗಿರಿ ಬಂದ್‌ಗೆ ಕರೆ

ಬಳಿಕ ತಾಯಿಯನ್ನು ಮರುದಿನ ಬರುವಂತೆ ಹೇಳಿ ವಾಪಸ್ ಕಳುಹಿಸಲಾಗಿದೆ. ಇದು ಪೋಕ್ಸೊ ಪ್ರಕರಣವಾಗಿದ್ದರೂ, ಮಾರ್ಗಸೂಚಿಗಳನ್ನು ಉಲ್ಲಂಘಿಸಿ, ಮರುದಿನ ಇಬ್ಬರು ಪಿಎಸ್‌ಐಗಳು ಆರೋಪಿಯನ್ನು ಠಾಣೆಗೆ ಕರೆಸಿ, ಸಂತ್ರಸ್ತೆ ಮತ್ತು ಆರೋಪಿಗಳಿಗೆ ಮುಖಾಮುಖಿಯಾಗಿ ವಿಚಾರಣೆ ನಡೆಸಿದರು. ಹಾಗೆಯೇ ಅಧಿಕಾರಿಗಳು ಆರೋಪಿಯ ಕುಟುಂಬ ಸದಸ್ಯರನ್ನು ಕರೆಸಿ, ದೂರುದಾರರನ್ನು ಬೆದರಿಸಿ ಅವಮಾನಿಸಿ ದೂರನ್ನು ಕೈಬಿಡುವಂತೆ ಒತ್ತಾಯಿಸಿದರು.

ಪ್ರಕರಣವನ್ನು ಹಿರಿಯ ಅಧಿಕಾರಿಗಳ ಗಮನಕ್ಕೆ ತಂದ ನಂತರವೇ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಎಸ್‌ಎಚ್‌ಆರ್‌ಸಿ ತಿಳಿಸಿದೆ. ಇನ್ನು ಪೊಲೀಸರು ಬಾಲಕಿಯನ್ನು ಸರ್ಕಾರಿ ಬಾಲಕಿಯರ ಗೃಹಕ್ಕೆ ಕಳುಹಿಸಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸುವ ಬದಲು ರಾತ್ರಿಯಿಡೀ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿದ್ದರು. ಈ ಎಲ್ಲಾ ಕಿರುಕುಳವನ್ನು ಸಹಿಸಲಾಗದೆ, ಬಾಲಕಿಯ ತಾಯಿ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...