ಬೆಂಗಳೂರು | ಸೈಟ್ ಹಂಚಿಕೆ ವಿಳಂಬ; ಬಿಡಿಎಗೆ 12.5 ಲಕ್ಷ ರೂ. ದಂಡ

Date:

ಖರೀದಿದಾರರಿಗೆ ನಿವೇಶನ ಹಂಚಿಕೆ ಮಾಡದೆ ವಿಳಂಬ ಮಾಡಿದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ (ಬಿಡಿಎ) ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರ(ಕೆ-ರೇರಾ) 12.5 ಲಕ್ಷ ರೂ. ದಂಡ ವಿಧಿಸಿದೆ. ಆ ಹಣವನ್ನು ಪರಿಹಾರವಾಗಿ ಖರೀದಿದಾರರಿಗೆ ನೀಡುವಂತೆ ಆದೇಶಿಸಿದೆ.

ಬೆಂಗಳೂರಿನ ಅರ್ಕಾವತಿ ಲೇಔಟ್‌ನಲ್ಲಿ ಬಿಡಿಎ ಅಭಿವೃದ್ಧಿ ಪಡಿಸಿದ ನಿವೇಶನವನ್ನು ವಿದ್ಯಾರಣ್ಯಪುರದ ನಿವಾಸಿ, ನಿವೃತ್ತ ಚಾರ್ಟರ್ಡ್‌ ಅಕೌಂಟೆಂಟ್‌ ಸುತಂತಿರಾಜ್ ಅವರು 2006ರಲ್ಲಿ ಖರೀದಿ ಮಾಡಿದ್ದರು. 60*40 ನಿವೇಶನಕ್ಕೆ 7,50,100 ರೂ. ಪಾವತಿ ಮಾಡಿದ್ದರು. 2017ರ ಜನವರಿಯಲ್ಲಿ ನಿವೇಶನ ಮಾರಾಟ ಪತ್ರವನ್ನೂ ನೋಂದಾಯಿಸಲಾಗಿತ್ತು. ಆದಾಗ್ಯೂ, ಈವರೆಗೆ ಸುತಂತಿರಾಜ್ ಅವರಿಗೆ ಬಿಡಿಎ ನಿವೇಶನ ಹಸ್ತಾತಂರ ಮಾಡಿರಲಿಲ್ಲ.

ನಿವೇಶನ ಹಸ್ತಾಂತರಿಸುವಲ್ಲಿ ಬಿಡಿಎ ಮಾಡುತ್ತಿರುವ ವಿಳಂಬವನ್ನು ಪ್ರಶ್ನಿಸಿ ಸುತಂತಿರಾಜ್ ಅವರು ಕೆ-ರೇರಾಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿರುವ ಕೆ-ರೇರಾ ಅಧ್ಯಕ್ಷ ರಾಕೇಶ್ ಸಿಂಗ್ ಮತ್ತು ಸದಸ್ಯ ಜಿ ರವೀಂದ್ರನಾಥ ರೆಡ್ಡಿ ಅವರು ಬಿಡಿಎಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಅರ್ಜಿದಾರ ಸುತಂತಿರಾಜ್ ಅವರಿಗೆ 12,43,792 ರೂ. ಪರಿಹಾರ ನೀಡುವಂತೆ ಬಿಡಿಎಗೆ ಆದೇಶಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿರುವ ಅರ್ಜಿದಾರ ಸುತಂತಿರಾಜ್, “ನಿವೇಶನವನ್ನು ಹಸ್ತಾಂತರಿಸುವಂತೆ ಹಲವು ಬಾರಿ ಬಿಡಿಎಗೆ ಮನವಿ ಮಾಡಿದರೂ, ಪ್ರಯೋಜನವಾಗಿಲ್ಲ. ಭೂಮಿಯ ಮೂಲ ವಾರಸುದಾರನಿಗೆ ಇನ್ನೂ ಪರಿಹಾರ ನೀಡಲಾಗಿಲ್ಲ. ಅವರಿಗೆ ಪರಿಹಾರ ನೀಡುವವರೆಗೆ ನಿವೇಶನ ಹಸ್ತಾಂತರ ಸಾಧ್ಯವಿಲ್ಲವೆಂದು ಬಿಡಿಎ ಅಧಿಕಾರಿಗಳು ಸಬೂಬು ಹೇಳುತ್ತಲೇ ಇದ್ದರು. 2024ರ ಮಾರ್ಚ್‌ನಲ್ಲಿ ಸಮಸ್ಯೆಗಳು ಇತ್ಯರ್ಥವಾದರೂ, ನಮಗೆ ಹಸ್ತಾಂತರವಾಗಿಲ್ಲ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...